ಆರೋಗ್ಯ ತಪಾಸಣೆ ಶಿಬಿರಕ್ಕೆ ಶಾಸಕ ದೊಡ್ಡಗೌಡರ ಚಾಲನೆ
ಬೈಲಹೊಂಗಲ 01: ಕೋವಿಡ್-19 ಗ್ರಾಮಗಳಿಗೆ ಪ್ರವೇಶ ಮಾಡಿರುವ ಈ ಸಂದರ್ಭದಲ್ಲಿ ಅರೋಗ್ಯಾಧಿಕಾರಿಗಳುಹೆಚ್ಚಿನ ಕಾಳಜಿ ವಹಿಸಿ ಕೆಲಸ ಮಾಡಬೇಕಿದೆ ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ಆರೋಗ್ಯ ಇಲಾಖೆ ಆಧಿಕಾರಿಗಳಿಗೆ ಸೂಚಿಸಿದರು.ತಾಲೂಕಿನ ಮೇಕಲಮರಡಿ ಗ್ರಾಮದಲ್ಲಿ ರವಿವಾರ ಆರೋಗ್ಯ ತಪಾಸಣೆ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಕೋವಿಡ್ನ ಈ ಸಂದಿಗ್ದ ಸ್ಥಿತಿಯಲ್ಲಿ ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಠಿಯಿಂದ ಆರೋಗ್ಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಅತ್ಯಂತ ದಕ್ಷತೆಯಿಂದ ಕೆಲಸ ಮಾಡಬೇಕಿದೆ. ಸಾರ್ವಜನಿಕರಿಗೆ ಆರೋಗ್ಯ ಕಾಪಾಡಿಕೊಳ್ಳುವ ಸಂಬಂಧ ನಿಯಮಗಳ ಪಾಲನೆ ಕುರಿತು ಜಾಗೃತಿ ಮೂಡಿಸಬೇಕು. ಪ್ರತಿಯೊಬ್ಬ ಸಿಬ್ಬಂದಿ ತಮ್ಮ ಜವಾಬ್ದಾರಿ ಅರಿತು ಕೆಲಸ ಮಾಡಿ ಎಂದು ಸೂಚಿಸಿದರು.ಈ ಸಂದರ್ಭದಲ್ಲಿ ತಹಸೀಲ್ದಾರ ಬಸವರಾಜ ನಾಗರಾಳ, ತಾ.ಪಂ ಸಹಾಯಕ ನಿದರ್ೆಶಕ ವಿಜಯ ಪಾಟೀಲ, ಭೀಮಸಿ ಹುಲಮನಿ, ವಿಜಯ ಯರಡಾಲ, ಆರೋಗ್ಯ ಇಲಾಖೆಯ ಸಿಬ್ಬಂದಿ, ಗ್ರಾಮಸ್ಥರು, ಗ್ರಾ.ಪಂ. ಸಿಬ್ಬಂದಿ, ಆಶಾ ಕಾರ್ಯಕತರ್ೆಯರು ಇದ್ದರು. ಮೇಕಲಮರಡಿ ಗ್ರಾಮದಲ್ಲಿ ರವಿವಾರ ಆರೋಗ್ಯ ತಪಾಸಣೆ ಶಿಬಿರಕ್ಕೆ ಶಾಸಕ ಮಹಾಂತೇಶ ದೊಡ್ಡಗೌಡರ ಚಾಲನೆ ನೀಡಿದರು.