ಸುತಗಟ್ಟಿ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸೆರೆ
Leopard spotted in Sutagatti forest area captured
ಲೋಕದರ್ಶನ ವರದಿ
ಬೆಳಗಾವಿ 05 : ಜಿಲ್ಲೆಯ ಸುತಗಟ್ಟಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸಂಚರಿಸುತ್ತಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೋನಿನ ಮೂಲಕ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಕತಿ ಅರಣ್ಯ ವಲಯಕ್ಕೆ ಸೇರಿದ ಸುತಗಟ್ಟಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಗ್ರಾಮಸ್ಥರು ಹಾಗೂ ವಾಹನ ಸವಾರರಲ್ಲಿ ಆತಂಕ ಉಂಟಾಗಿತ್ತು.
ಕೆಲವರು ಚಿರತೆಯ ಸಂಚಾರವನ್ನು ತಮ್ಮ ಮೊಬೈಲ್ನಲ್ಲಿ ವಿಡಿಯೊ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಜೊತೆಗೆ ಗ್ರಾಮಸ್ಥರು ಈ ಕುರಿತು ಕಾಕತಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು.
ಮಾಹಿತಿ ಪಡೆದ ಅರಣ್ಯ ಇಲಾಖೆ ಕೂಡಲೇ ಎಚ್ಚೆತ್ತುಕೊಂಡು ಸುತಗಟ್ಟಿ ಅರಣ್ಯ ಪ್ರದೇಶದಲ್ಲಿ ಗಸ್ತು ಹೆಚ್ಚಿಸಿತು. ಚಿರತೆಯ ಚಲನವಲನವನ್ನು ಗಮನಿಸಿ, ಅದನ್ನು ಸೆರೆ ಹಿಡಿಯುವ ಉದ್ದೇಶದಿಂದ ಕಳೆದ ಕೆಲವು ದಿನಗಳ ಹಿಂದೆ ಬೋನು (ಕೇಜ್) ಅಳವಡಿಸಲಾಗಿತ್ತು.
ಬುಧವಾರ ಬೆಳಿಗ್ಗೆ ಚಿರತೆ ಬೋನಿನಲ್ಲಿ ಸೆರೆಯಾಯಿತು. ಬಳಿಕ ಬೋನಿನಲ್ಲಿದ್ದ ಚಿರತೆಯನ್ನು ಕಾಕತಿ ರಕ್ಷಣಾ ಕೇಂದ್ರಕ್ಕೆ (ರೆಸ್ಕ್ಯೂ ಸೆಂಟರ್) ಸುರಕ್ಷಿತವಾಗಿ ಸಾಗಿಸಲಾಯಿತು. ಆರೋಗ್ಯ ತಪಾಸಣೆಯ ನಂತರ ಅದನ್ನು ಸೂಕ್ತ ಅರಣ್ಯ ಪ್ರದೇಶ ಅಥವಾ ಪ್ರಾಣಿ ಸಂರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.
ಚಿರತೆ ಸೆರೆ ಕಾರ್ಯಾಚರಣೆಯಲ್ಲಿ ಕಾಕತಿ ಆರ್‌ಎಫ್‌ಒ ಬಿ.ಎಲ್. ಸನದಿ, ಹುಕ್ಕೇರಿ ಆರ್‌ಎಫ್‌ಒ ಶಿವಕುಮಾರ ಮಾಳಿ, ಡಿಆರ್‌ಎಫ್‌ಒಗಳಾದ ಬಸವರಾಜ ಹನಗಂಡಿ, ಪ್ರಭು ತಂಗಡಿ, ರಾಕೇಶ್ ಮುರಾರಿ, ಮುತಗೇಕರ ಸೇರಿದಂತೆ ಕಾಕತಿ ಅರಣ್ಯ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು. ಈ ಕಾರ್ಯಾಚರಣೆಗೆ ಸುತಗಟ್ಟಿ ಗ್ರಾಮದ ಗ್ರಾಮಸ್ಥರೂ ಸಹ ಅಗತ್ಯ ಸಹಕಾರ ನೀಡಿದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 