ಫೆಬ್ರುವರಿ ತಿಂಗಳಲ್ಲಿ ಬರುವ ಎಲ್ಲ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸೋಣ: ತಹಶೀಲ್ದಾರ ಅನೀಲ ಬಡಿಗೇರ
ಶಿರಹಟ್ಟಿ 25: 2024ನೇ ಸಾಲಿನ ಫೆಬ್ರವರಿ ತಿಂಗಳ 01/02/2024 ರಂದು ನಡೆಯುವ ಮಡಿವಾಳ ಮಾಚದೇವ ಜಯಂತಿ ಹಾಗೂ 10/02/2024ರಂದು ನಡೆಯುವ ಕಾಯಕ ಶರಣರ ಜಯಂತಿಗಳನ್ನು ಅದ್ದೂರಿಯಾಗಿ ಆಚರಿಸೋಣವೆಂದು ತಹಶೀಲ್ದಾರ ಅನಿಲ ಬಡಿಗೇರ ಎಲ್ಲ ಇಲಾಖೆ ಅಧಿಕಾರಿಗಳಿಗೆ ಹಾಗೂ ಸಮಾಜದ ಮುಖಂಡರಿಗೆ ಹೇಳಿದರು.
ಅವರು ಶಿರಹಟ್ಟಿ ತಾಲೂಕಾಡಳಿತ ಕಚೇರಿಯ ಸಭಾಭವನದಲ್ಲಿ ನಡೆದ ಫೆಬ್ರುವರಿ ತಿಂಗಳಲ್ಲಿ ನಡೆಯುವ ವಿವಿಧ ಜಯಂತಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ತಾಲೂಕ ಆಡಳಿತ ವತಿಯಿಂದ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಚರ್ಚಿಸಲು ತಾಲೂಕ ಆಡಳಿತಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಉಪಸ್ಥಿತರಾಗಿ ಎಲ್ಲ ಆಚರಣೆಗಳನ್ನು ಪ್ರತಿಯೊಂದು ಇಲಾಖೆಗಳಲ್ಲಿ ಕಡ್ಡಾಯವಾಗಿ ಆಚರಿಸುವುದು ಅಷ್ಟೇ ಅಲ್ಲ, ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ, ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಆಚರಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ಈ ಎಲ್ಲಾ ಆಚರಣೆಗಳ ಬಗ್ಗೆ ಮಕ್ಕಳಿಗೆ ತಿಳಿಸಿ ಹೇಳುವುದರಿಂದ ಅವರು ಕೂಡ ಪ್ರತಿಯೊಂದು ಆಚರಣೆಗಳ ಬಗ್ಗೆ ತಿಳಿದು ಮುಂದಿನ ಪೀಳಿಗೆಗೆ ತಿಳಿಸಿ ಹೇಳುವ ಕೆಲಸವಾಗಲಿದೆ. ಆದ್ದರಿಂದ ಕಡ್ಡಾಯವಾಗಿ ಎಲ್ಲಾ ಆಚರಣೆಗಳನ್ನು ಎಲ್ಲರೂ ಸೇರಿ ಸುವ್ಯವಸ್ಥಿತವಾಗಿ ಆಚರಿಸಲು ಮುಂದಾಗೋಣ ಎಂದು ಎಲ್ಲ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಧಿಕಾರಿ ಮರಿಗೌಡ ಸುರಕೋಡ, ಅರಣ್ಯ ಅಧಿಕಾರಿ ಕೌಶಿಕ್ ದಳವಾಯಿ, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ, ಜಿಲ್ಲಾ ಪಂಚಾಯತಿ ಹಾಗೂ ಪಿಡಬ್ಲ್ಯೂಡಿ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆಯ ಸಂತೋಷ ಅಸ್ಕಿ, ಕೃಷಿ ಇಲಾಖೆ ಅಧಿಕಾರಿ ರೇವಣಪ್ಪ ಮನಗೂಳಿ, ಹೆಸ್ಕಾಂ ಇಲಾಖೆಯ ಅಧಿಕಾರಿ ವೀರೇಶ್ ಬಡಿಗೇರ, ಯಲ್ಲಪ್ಪ ಬಂಗಾರಿ, ವಿಕಲಚೇತನರ ವಿವಿಧೋದ್ದೇಶ ಕಾರ್ಯಕರ್ತೆ ಭಾರತಿ ಮೂರಶಿಳ್ಳಿ, ತಾಲೂಕ ಪಂಚಾಯತಿಯ ಪ್ರತಿನಿಧಿಗಳು ಹಾಗೂ ವಿವಿಧ ಸಂಘಟನೆಯ ಮುಖ್ಯಸ್ಥರು ಉಪಸ್ಥಿತರಿದ್ದರು.