ಕನಕದಾಸರ ತತ್ವಾದರ್ಶಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳೋಣ: ಶಾಸಕ ಜಿ.ಸೋಮಶೇಖರರೆಡ್ಡಿ
ಬಳ್ಳಾರಿ 11: ಬಳ್ಳಾರಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಅಗ್ನಿಶಾಮಕ ದಳ ಕಚೇರಿ ಹತ್ತಿರ ಕನಕದಾಸ ವೃತ್ತದ ಭಕ್ತ ಕನಕದಾಸ ಅವರ ಭಾವಚಿತ್ರಕ್ಕೆ ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರರೆಡ್ಡಿ ಅವರು ಮಾಲಾರೆ್ಣ ಹಾಗೂ ಪುಷ್ಪಾರ್ಚನೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಗ್ರಾಮೀಣ ಶಾಸಕರಾದ ಬಿ.ನಾಗೇಂದ್ರ, ಮಹಾನಗರ ಪಾಲಿಕೆ ಮೇಯರ್ ಎಂ.ರಾಜೇಶ್ವರಿ, ಬುಡಾ ಅಧ್ಯಕ್ಷ ಮಾರುತಿ ಪ್ರಸಾದ್, ಜಿಲ್ಲಾ ಪಂಚಾಯತ್ನ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಜಿ.ಲಿಂಗಮೂರ್ತಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್, ಎಡಿಸಿ ಪಿಎಸ್.ಮಂಜುನಾಥ, ಕುರುಬರ ಸಂಘದ ಜಿಲ್ಲಾಧ್ಯಕ್ಷರಾದ ಕೆ.ಎರೆ್ರಗೌಡ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಕುರುಬ ಸಮಾಜದ ಮುಖಂಡರುಗಳು ಇದ್ದರು.
ನಂತರದಲ್ಲಿ ಡಾ.ರಾಜ್ಕುಮಾರ್ ರಸ್ತೆಯ ಬಿಡಿಎಎ ಫುಟ್ಬಾಲ್ ಮೈದಾನದ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮವನ್ನು ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, 15 ಮತ್ತು 16ನೇ ಶತಮಾನದ ಜನಪ್ರಿಯ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಒಬ್ಬರು. ದಾಸ ಸಾಹಿತ್ಯದಲ್ಲಿ ಜೀವನ ಪಾಠವನ್ನು ಕಂಡುಕೊಂಡವರು. ಕನಕದಾಸರನ್ನು ಕರ್ನಾಟಕ ಕೀರ್ತನ ಸಾಹಿತ್ಯದಲ್ಲಿ ಆಶ್ವಿನಿ ದೇವತೆಗಳಿಗೆ ಹೋಲಿಸಲಾಗುತ್ತದೆ ಎಂದು ಹೇಳಿದರು.
ಕುಲ-ಕುಲ ಎಂದು ಹೊಡೆದಾಡದಿರಿ, ದೇಹ, ಆತ್ಮ, ಗಾಳಿ, ನೀರು, ಬೆಳಕು ಇವುಗಳಿಗೆ ಯಾವ ಕುಲವಿದೆ ಎಂದು ತಿಳಿಸಿಕೊಟ್ಟ ಮಹಾನ್ ಸಂತರು. ಅಂತಹ ಮಹನೀಯರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಶರಣ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಕೆಬಿ ಸಿದ್ಧಲಿಂಗಪ್ಪ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡಿದರು.
ಜಯಂತಿಯ ಮೆರವಣಿಗೆಯು ಕನಕದಾಸ ವೃತ್ತದಿಂದ ಆರಂಭವಾಗಿ ಎಸ್ಪಿ ಸರ್ಕಲ್ ಮಾರ್ಗವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಮೈದಾನ ಸಭಾಂಗಣದ ವೇದಿಕೆಯ ಸಭಾಂಗಣದವರೆಗೆ ತಲುಪಿತು. ಮೆರವಣಿಗೆಯಲ್ಲಿ ವಿವಿಧ ಸಾಂಸ್ಕೃತಿಕ ಕಲಾತಂಡಗಳು ಗಮನಸೆಳೆದವು.
ಈ ಸಂದರ್ಭದಲ್ಲಿ ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಪ್ರಸಾದ್, ಜಿಪಂ ಸಿಇಒ ಲಿಂಗಮೂರ್ತಿ, ಎಡಿಸಿ ಮಂಜುನಾಥ, ತಹಶೀಲ್ದಾರ್ ವಿಶ್ವನಾಥ ಸೇರಿದಂತೆ ಕುರುಬರ ಸಂಘದ ಅಧ್ಯಕ್ಷರಾದ ಕೆ.ಎರೆ್ರಗೌಡ, ಸುರೇಂದ್ರ, ಮೌಲನಾ, ವೀರಶೇಖರ ರೆಡ್ಡಿ, ಮಹಾನಗರ ಪಾಲಿಕೆಯ ಸದಸ್ಯರು ಸೇರಿದಂತೆ ಕುರುಬ ಸಮುದಾಯದ ಮುಖಂಡರು ಹಾಗೂ ಇನ್ನೀತರು ಉಪಸ್ಥಿತರಿದ್ದರು.