ಧಾರವಾಡ - ಹುಬ್ಬಳ್ಳಿ

ಮಹಿಳೆಯ ಘನತೆ, ಮಾನವ ಮೌಲ್ಯ ಉಳಿಸೋಣ: ಜಸ್ಟಿಸ್ ಸಂತೋಷ್ ಹೆಗಡೆ

ಮಹಿಳೆಯ ಘನತೆ, ಮಾನವ ಮೌಲ್ಯ ಉಳಿಸೋಣ: ಜಸ್ಟಿಸ್ ಸಂತೋಷ್ ಹೆಗಡೆ

ಧಾರವಾಡ 19: ವಲಯ ಮಟ್ಟದ ಯುವಜನರ ಸಂಕಲ್ಪ ಸಮಾವೇಶಅತ್ಯಾಚಾರ, ಕೊಲೆಗೆ ಮಾನವ ಮೌಲ್ಯಗಳ ಕುಸಿತ ಕಾರಣವಾಗಿದೆ ಎಂದು ಕರ್ನಾಟಕದ ಮಾಜಿ ಲೋಕಾಯುಕ್ತ ಹಾಗೂ ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಾದ ಜಸ್ಟಿಸ್ ಸಂತೋಷ್ ಹೆಗಡೆ ನುಡಿದರು. ಅವರು ಧಾರವಾಡದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಆಲ್ ಇಂಡಿಯಾ ಡೆಮೊಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಒ) ವತಿಯಿಂದ ಹಮ್ಮಿಕೊಳ್ಳಲಾದ ಮಹಿಳೆಯರ ಘನತೆ ಮತ್ತು ಮಾನವ ಮೌಲ್ಯ ಉಳಿಸೋಣ ವಲಯ ಮಟ್ಟದ ಯುವಜನರ ಸಂಕಲ್ಪ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಅವರು ಮುಂದುವರೆದು ಮಾತನಾಡಿ, ದೆಹಲಿಯಲ್ಲಿ ನಡೆದ ನಿರ್ಭಯ ಘಟನೆಯ ಸಂದರ್ಭದಲ್ಲಿ ಇಡೀ ದೇಶವೇ ಎಚ್ಚೆತ್ತುಕೊಂಡು ಪ್ರತಿಭಟನೆ ನಡೆಸಿತ್ತು. ಅದೇ ರೀತಿ ಇಂದು ಕೂಡ ಆಗಬೇಕಾಗಿದೆ. ಮಾದಕ ವಸ್ತುಗಳ ಹಾವಳಿ ಸಮಾಜದಲ್ಲಿ ಹೆಚ್ಚಾಗುತ್ತಿದ್ದು, ಅದರ ವಿರುದ್ಧ ಧ್ವನಿ ಎತ್ತಬೇಕಾಗಿದೆ. ಹಿಂದೆ ತಪ್ಪು ಮಾಡಿ ಶಿಕ್ಷೆ ಜೈಲು ಶಿಕ್ಷೆ ಅನುಭವಿಸಿ ಬಂದವರನ್ನು ಸಮಾಜ ಬಹಿಷ್ಕಾರ ಮಾಡುತ್ತಿತ್ತು. ಅವರಿಗೆ ಸಾಮಾಜಿಕ ಶಿಕ್ಷೆ ಆಗುತ್ತಿತ್ತು. ಆದರೆ ಅವರನ್ನು ಇಂದು ಸನ್ಮಾನ ಮಾಡುವ ಸ್ಥಿತಿಗೆ ನಮ್ಮ ಸಮಾಜ ತಲುಪಿದೆ. ಶ್ರೀಮಂತಿಕೆಯನ್ನು ಪೂಜಿಸುವ ಹಂತಕ್ಕೆ ಸಮಾಜ ಒಂದು ನಿಂತಿದೆ. ಪ್ರಾಮಾಣಿಕರನ್ನು ಹುಚ್ಚನೆಂದು ಕರೆಯಲಾಗುತ್ತಿದೆ ಎಂದರು. ತಪ್ಪು ಯಾರೇ ಮಾಡಿದರೂ ಅವರಿಗೆ ಶಿಕ್ಷೆ ಆಗಬೇಕು. ಕೋರ್ಟುಗಳಲ್ಲಿ ವಿಚಾರಣೆ ನಡೆದು ಶಿಕ್ಷೆ ಆಗುವುದು ಬಹಳ ಸಮಯ ತೆಗೆದುಕೊಳ್ಳುತ್ತಿದೆ. ತೀಪು ಹೊರಬರುವಷ್ಟರಲ್ಲಿ ಆರೋಪಿಯೇ ಸತ್ತು ಹೋಗಿರುತ್ತಾನೆ. ಇದರಿಂದ ಅಪರಾಧ ಮಾಡುವವರಿಗೆ ಭಯವಿಲ್ಲವಾಗಿದೆ ಎಂದು ಅಭಿಪ್ರಾಯಪಟ್ಟರು. ನಮ್ಮ ಯುವಕರು ಹಿರಿಯರು ಕಟ್ಟಿ ಬೆಳೆಸಿದ ಮಾನವ ಮೌಲ್ಯಗಳನ್ನು ಅಳವಡಿಸಿಕೊಂಡು ಅಪರಾಧಗಳೇ ಇಲ್ಲದ ಸಮಾಜದ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.ಎಐಡಿವೈಓ ಅಖಿಲ ಭಾರತ ಉಪಾಧ್ಯಕ್ಷರಾದ ಡಾ. ಜಿ. ಶಶಿಕುಮಾರ್ ಮಾತನಾಡಿ, ಹುಬ್ಬಳ್ಳಿಯ ನೇಹ, ಅಂಜಲಿ, ಉತ್ತರ ಪ್ರದೇಶ ಮಹಾರಾಷ್ಟ್ರ, ಕೊಲ್ಕತ್ತದ ವೈದ್ಯ ವಿದ್ಯಾರ್ಥಿನಿಯ ಮೇಲಿನ ಅತ್ಯಾಚಾರ, ಕೊಲೆ ಘಟನೆಗಳು ಸೇರಿದಂತೆ ಹಲವಾರು ಗುಂಪು ಅತ್ಯಾಚಾರದ ಘಟನೆಗಳು ಸಮಾಜದಲ್ಲಿ ಆಘಾತ ಹಾಗೂ ಆಕ್ರೋಶವನ್ನು ಉಂಟುಮಾಡಿವೆ.  

ಆ ಘಟನೆಗಳಿಗೆ ಒಂದು ಪ್ರಮುಖ ಕಾರಣವೆಂದರೆ ನಿರುದ್ಯೋಗ ಸಮಸ್ಯೆ, ಬದುಕಿನ ಬಗ್ಗೆ ಇರುವ ಅಭದ್ರತೆಯೇ ಕಾರಣವಾಗಿದೆ ಎಂದರು. ಆದ್ದರಿಂದಲೇ ಯುಕರಲ್ಲಿ ಮಾನಸಿಕ ಸ್ಥೈರ್ಯ ಹಾಗೂ ವೈಚಾರಿಕತೆಯನ್ನು ಬೆಳೆಸಲು ಈ ರೀತಿಯ ಸಮಾವೇಶವನ್ನು ಸಂಘಟಿಸಬೇಕಾಗಿದೆ ಎಂದರು. ಹಿಂದೆ ದೆಹಲಿಯಲ್ಲಿ ನಡೆದ ನಿರ್ಭಯ ಘಟನೆಗೆ ಇಡೀ ದೇಶವೇ ಒಂದಾಗಿ ಹೋರಾಟ ಮಾಡಿದ ಪರಿಣಾಮವಾಗಿ ಜಸ್ಟಿಸ್ ವರ್ಮ ಕಮಿಟಿಯನ್ನು ರಚಿಸಲಾಯಿತು. ಮಹಿಳೆಯರ ಅತ್ಯಾಚಾರ ಘಟನೆಗಳ ವಿರುದ್ಧ ತುರ್ತು ಕ್ರಮಕೈಗೊಳ್ಳಲು ಫಾಸ್ಟ್‌ ಟ್ರ್ಯಕ್ ಕೋರ್ಟ್ಗಳನ್ನು ನಿರ್ಮಿಸಲು ಶಿಫಾರಸ್ಸು ಮಾಡಲಾಯಿತು. ಆಗಿನಿಂದ ಅಧಿಕಾರ ನಡೆಸಿದ ಯಾವುದೇ ಸರ್ಕಾರಗಳು ವರ್ಮಾ ಕಮಿಟಿಯ ಶಿಫಾರಸ್ಸುಗಳನ್ನು ಸಂಪೂರ್ಣವಾಗಿ ಜಾರಿ ಮಾಡಲಿಲ್ಲ. ಪರಿಣಾಮವಾಗಿ ಇಂದೂ ಕೂಡ ಪ್ರತಿನಿತ್ಯ ಅಂತಹ ಘಟನೆಗಳು ನಡೆಯುತ್ತಿವೆ.  

ಇವುಗಳನ್ನು ತಡೆಯಲು ಯುವಕರು ವೈಯಕ್ತಿಕ ಮಟ್ಟದಲ್ಲಿ ಹಾಗೂ ಸಾಮಾಜಿಕವಾಗಿ ಪ್ರತಿಭಟಿಸಬೇಕಾದ ಅವಶ್ಯಕತೆ ಇದೆ. ಮಾದಕ ವಸ್ತುಗಳು, ಅಶ್ಲೀಲ ಸಿನಿಮಾ, ಪೋರ್ನೋಗ್ರಫಿ ವಿರುದ್ಧ ಧ್ವನಿ ಎತ್ತಬೇಕು ಎಂದು ಅಭಿಪ್ರಾಯಪಟ್ಟರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಐಡಿವೈಓ ರಾಜ್ಯ ಅಧ್ಯಕ್ಷರಾದ ಶರಣಪ್ಪ ಉದ್ಬಾಳ್ ವಹಿಸಿ ಮಾತನಾಡಿ, ನಿರುದ್ಯೋಗ ಸಮಸ್ಯೆ ವಿರುದ್ಧ ಹೋರಾಟಗಳನ್ನು ಕಟ್ಟುತ್ತಲೇ ಉನ್ನತ ಮೌಲ್ಯ ನೀತಿ ಸಂಸ್ಕೃತಿಯನ್ನು, ವರ್ಷವನ್ನು ಬೆಳೆಸಲು ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು. ಇದಕ್ಕೂ ಮೊದಲು ಎ ಐ ಡಿ ವೈ ಓ ರಾಜ್ಯ ಕಾರ್ಯದರ್ಶಿಗಳಾದ ಕಾರ್ಯಕ್ರಮದ ಆಶಯ ಕುರಿತು ಮಾತನಾಡಿ, ಕೇವಲ ಪ್ರತಿಭಟಿಸಿದರೆ ಸಾಲದು ಈ ಸಮಸ್ಯೆಗಳ ಮೂಲ ಕಾರಣದ ಕುರಿತು ಚರ್ಚೆ ನಡೆಯಬೇಕಾಗಿದೆ ಈ ಕುರಿತು ಯುವಜನರಲ್ಲಿ ಜಾಗೃತಿ ಮೂಡಿಸಲು ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದರು.ವೇದಿಕೆಯಲ್ಲಿ ಧಾರವಾಡ ಜನಜಾಗೃತಿ ಅಭಿಯಾನದ ಸಲಹೆಗಾರರಾದ ರಾಮಾಂಜನಪ್ಪ ಅಲ್ದಳ್ಳಿ ಉಪಸ್ಥಿತರಿದ್ದರು.ವಂದನೆಗಳೊಂದಿಗೆ,ಸುದ್ದಿ ಇವರಿಂದಭವಾನಿಶಂಕರ್ ಂಋಙಓ, ಧಾರವಾಡ 


ಸುದ್ದಿ ಓದಿ