ಪರಸ್ಪರ ಸಹಕಾರದಲ್ಲಿ ಮಂದಿರ, ಮಸೀದಿ ನಿರ್ಮಾಣವಾಗಲಿ: ಪೇಜಾವರ ಶ್ರೀ
ಉಡುಪಿ, ನ.9 : ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ ಇಂದು ನೀಡಿರುವ ತೀರ್ಪನ್ನು ಎಲ್ಲರೂ ಸಮಚಿತ್ತದಿಂದ ಸ್ವೀಕರಿಸಬೇಕು. ನನಗೆ ವೈಯಕ್ತಿಕವಾಗಿಯೂ ಈ ತೀಪು ಸಮ್ಮತವಾಗಿದೆ ಎಂದು ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಉಡುಪಿಯಲ್ಲಿಂದು ಮಾತನಾಡಿದ ಅವರು, ಮುಸ್ಲಿಮರಿಗೂ ಐದು ಎಕರೆ ಕೊಡಬೇಕು ಎಂದು ತೀರ್ಪುನಲ್ಲಿ ಹೇಳಿದ್ದಾರೆ. ಸರಕಾರವೇ ರಾಮಮಂದಿರ ನಿರ್ಮಾಣ ಮಾಡಬೇಕು ಎಂಬ ತೀಪು ಬಂದಿದೆ. ಹಿಂದೂಗಳಿಗೆ ರಾಮ ಜನ್ಮಭೂಮಿಯ ಹಕ್ಕು ಮುಖ್ಯ. ಮುಸ್ಲಿಮರಿಗೆ ಮಸೀದಿಗೆ ಜಾಗ ಮುಖ್ಯ. ಈ ನಿಟ್ಟಿನಲ್ಲಿ ನ್ಯಾಯಾಲಯದ ಈ ತೀಪು ಹಿಂದೂ-ಮುಸ್ಲಿಮರಲ್ಲಿ ಬಾಂಧವ್ಯ ಬೆಳೆಯಲು ಉತ್ತಮ ಅವಕಾಶ ಎಂದು ಅಭಿಪ್ರಾಯಿಸಿದರು. ಹಿಂದೂ-ಮುಸ್ಲಿಮರು ಒಟ್ಟು ಸೇರಿ ಸೂಕ್ತ ಸ್ಥಳವನ್ನು ಮಸೀದಿಗೆ ಕೊಡಬೇಕು. ಅದೇರೀತಿ ಮಸೀದಿ ನಿರ್ಮಾಣಕ್ಕೆ ಹಿಂದೂಗಳು ಸಹಕರಿಸಬೇಕು, ಮಂದಿರ ನಿರ್ಮಾಣ ವಿಚಾರದಲ್ಲಿ ಮುಸ್ಲಿಮರೂ ಸಹಕರಿಸಬೇಕು ಎಂದು ಪೇಜಾವರಶ್ರೀ ಹೇಳಿದರು. ವಿಜಯೋತ್ಸವ, ಮೆರವಣಿಗೆ ಬೇಡ ಎಂದು ಗುರುವಾರವೇ ಹೇಳಿದ್ದೆ. ಈಗಲೂ ಪುನರುಚ್ಚಾರ ಮಾಡುವೆ. ಮುಸ್ಲಿಮರು ಕೂಡಾ ಸವೋಚ್ಚ ನ್ಯಾಯಾಲಯದ ತೀರ್ಪನ್ನು ಸಮಚಿತ್ತದಿಂದ ಸ್ವೀಕರಿಸಬೇಕು. ದೇಶದ ಎಲ್ಲರೂ ಕೋಮು ಸೌಹಾರ್ದದಿಂದ ಇರಬೇಕು ಎಂದು ಮನವಿ ಮಾಡುವೆ ಎಂದವರು ನುಡಿದರು. ನನ್ನ ಇಳಿ ವಯಸ್ಸಿನಲ್ಲಿ ಈ ತೀಪು ನೋಡುತ್ತೇನೆ ಎಂದು ಭಾವಿಸಿರಲಿಲ್ಲ ವೈಯಕ್ತಿಕವಾಗಿಯೂ ಸಂತೋಷವಾಗಿದೆ ಎಂದು ಪೇಜಾವರಶ್ರೀ ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 