ಏಕ್ ಪೇಡ ಮಾ ಕೆ ನಾಮ ಅಭಿಯಾನ ಯಶಸ್ವಿಗೊಳಿಸೋಣ :ಮಹಾಂತೇಶ ದೊಡ್ಡಗೌಡರ
Let's make the Ek Peda Maa Ke Naam campaign a success: Mahantesh Dodda Gowda
ನೇಸರಗಿ 05 : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಇಂದು ಬಿಜೆಪಿ ಕಿತ್ತೂರು ಮಂಡಲ ವತಿಯಿಂದ ನೇಸರಗಿ ಜಿ ಪಂ ವಲಯದ ಮಲ್ಲಾಪುರ ಕೆ ಎನ್ ಗ್ರಾಮದಲ್ಲಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಮಾಜಿ ಶಾಸಕ, ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ನೇತೃತ್ವದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಮಾತನಾಡಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದೀಜೀ ಅವರ ಕರೆ ಮೇರೆಗೆ ನಡೆಯುತ್ತಿರುವ ‘ಏಕ್ ಪೇಡ್ ಮಾ ಕೆ ನಾಮ್’ ಅಭಿಯಾನದ ಅಂಗವಾಗಿ ಸಸಿ ನೆಟ್ಟು, ಪರಿಸರ ಸಂರಕ್ಷಣೆ ಮತ್ತು ಹಸಿರು ಭವಿಷ್ಯ ನಿರ್ಮಾಣದ ನಮ್ಮ ಸಂಕಲ್ಪವನ್ನು ನೆರವೇರುತ್ತಿದ್ದು,ಕಳೆದ 12 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅನೇಕ ಪರಿಸರ ಸ್ನೇಹಿ ಯೋಜನೆಗಳು ಹಾಗೂ ಉಪಕ್ರಮಗಳು ಸುಸ್ಥಿರ ಅಭಿವೃದ್ಧಿ ಮತ್ತು ಪರಿಸರ ಸಂರಕ್ಷಣೆಯತ್ತ ಭಾರತದ ಬದ್ಧತೆಯನ್ನು ಜಗತ್ತಿಗೆ ಪರಿಚಯಿಸಿವೆ. ಜನಸಾಮಾನ್ಯರ ಸಕ್ರಿಯ ಭಾಗವಹಿಸುವಿಕೆ ಹಾಗೂ ದೂರದೃಷ್ಟಿಯ ನೀತಿಗಳ ಮೂಲಕ ಪರಿಸರ ಸಂರಕ್ಷಣೆಯಲ್ಲಿ ಭಾರತ ಮಾದರಿಯಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮೀಜಿಗಳು, ಕಿತ್ತೂರು ಮಂಡಲ ಅಧ್ಯಕ್ಷರಾದ ಶ್ರೀಕರ ಕುಲಕರ್ಣಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಲಕ್ಷ್ಮಿ ಇನಾಮದಾರ, ಎಸ್.ಎಂ. ಪಾಟೀಲ,ಮಾಜಿ ಗ್ರಾ ಪಂ ಅಧ್ಯಕ್ಷ ಅಶೋಕ ವಕ್ಕುಂದ, ರಾಜು ಬುಗಡಿಗಟ್ಟಿ, ಮಹಾಂತೇಶ ಕೂಲಿನವರ, ಶ್ರೀಶೈಲ ಕಮತಗಿ, ಪ್ರಧಾನ ಕಾರ್ಯದರ್ಶಿಗಳಾದ ಸಿದ್ದು ಬೋಳನ್ನವರ, ಮಂಜು ತೊಟ್ಟಲಮನಿ, ನಾಗರಾಜ ದುರಗದ, ಲಕ್ಷ್ಮೀ ತಳವಾರ, ಸುಜಾತಾ ಬಾಳಿಗಟ್ಟಿ, ಸೇರಿದಂತೆ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಅರಣ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 