ಜನರ ಸಮಸ್ಯೆಗಳಿಗೆ ಸ್ಪಂದಿಸೋಣ: ಸಂಸದ ಈ.ತುಕಾರಾಮ್

Let's respond to people's problems: MP E. Tukaram

ಲೋಕದರ್ಶನ ವರದಿ 

  

ಜನರ ಸಮಸ್ಯೆಗಳಿಗೆ ಸ್ಪಂದಿಸೋಣ: ಸಂಸದ ಈ.ತುಕಾರಾಮ್ 

ಬಳ್ಳಾರಿ 05: ಸಂವಿಧಾನ ಆಶಯಗಳಡಿ ನೇಮಕಗೊಂಡಿರುವ ಜನಪ್ರತಿನಿಧಿಗಳು, ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾಳಜಿ ಹೊಂದಬೇಕು ಎಂದು ಸಂಸದ ಈ.ತುಕಾರಾಮ್ ಅವರು ಹೇಳಿದರು.  

ಸಂಡೂರು ಪಟ್ಟಣದ ತಾಲ್ಲೂಕು ಕಚೇರಿ ಆವರಣದಲ್ಲಿ ಸೋಮವಾರ ಏರಿ​‍್ಡಸಿದ್ದ ಕೇಂದ್ರ ಮತ್ತು ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತ ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಮತ್ತು ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರ ಅಲೆದಾಟ ತಪ್ಪಿಸಲು ಜನರು ಇದ್ದಲ್ಲಿಗೆ ಸರ್ಕಾರದ ಸೇವೆಗಳು ತಲುಪಬೇಕು ಎನ್ನುವ ಉದ್ದೇಶ ಹೊಂದಲಾಗಿದ್ದು, ಉತ್ತಮ ಆಡಳಿತ ನೀಡಲು ಮತ್ತು ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ತಲುಪಿಸಲು ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಹೇಳಿದರು. 

ಸಂವಿಧಾನದ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಸವಾಂರ್ಗೀಣ ಅಭಿವೃದ್ಧಿಗೆ ಮುಂಬರುವ ದಿನಗಳಲ್ಲಿ ಜಿಲ್ಲಾ ಮಟ್ಟದ ದಿಶಾ ಸಮಿತಿ ಸಭೆಯನ್ನು ತಾಲ್ಲೂಕು ಮಟ್ಟದಲ್ಲಿ ಏರಿ​‍್ಡಸಲು ಯೋಜಿಸಲಾಗಿದೆ ಎಂದರು.  

ಸಂಡೂರು ತಹಶೀಲ್ದಾರ್ ಅನಿಲ್ ಕುಮಾರ್ ಮಾತನಾಡಿ, ಜಿಲ್ಲಾಧಿಕಾರಿಗಳ ನಿರ್ದೇಶನದಂತೆ, ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲು ಜಿಲ್ಲಾಡಳಿತ ಮತ್ತು ಸಂಡೂರು ತಾಲ್ಲೂಕು ಆಡಳಿತ ವತಿಯಿಂದ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದರು. 

ಸಾರ್ವಜನಿಕರ ದೂರು, ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸಮಸ್ಯೆಗಳನ್ನು ಸ್ಥಳದಲ್ಲಿಯೇ ಮತ್ತು ಉಳಿದವುಗಳನ್ನು ಕಡಿಮೆ ಕಾಲಮಿತಿಯಲ್ಲಿ ಪರಿಹರಿಸಲಾಗುವುದು ಎಂದರು. 

ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಸಂಡೂರು ತಾಲ್ಲೂಕು ಕಚೇರಿ ಆವರಣದಲ್ಲಿ 20 ಕ್ಕೂ ಹೆಚ್ಚು ಕೌಂಟರ್ ಗಳನ್ನು ತೆರೆಯಲಾಗಿತ್ತು. 

ಇದೇ ಸಂದರ್ಭದಲ್ಲಿ ಸಂಸದರು ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.  

ಈ ವೇಳೆ ಸಂಡೂರು ಪುರಸಭೆಯ ಅಧ್ಯಕ್ಷ ಸಿರಾಜ್ ಹುಸೇನ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಸಿಇಒ ಮಹಮ್ಮದ್ ಹ್ಯಾರಿಸ್ ಸುಮೈರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.