ಪರಿಸರ ಸಂರಕ್ಷಣೆಯ ಜವಾಬ್ದಾರಿ ಅರಿಯೋಣ: ಡಾ.ಸಿದ್ದೇಶ್ವರ ಬಾಬು
Let's understand the responsibility of environmental protection: Dr. Siddeshwar Babu
ಬಳ್ಳಾರಿ 14: ನಮ್ಮ ಸುತ್ತ-ಮುತ್ತಲಿನ ಪರಿಸರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕಾಳಜಿ ವಹಿಸುವ ಮೂಲಕ ಅದರ ಜವಾಬ್ದಾರಿ ಸಹ ಅರಿತುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಜಿಲ್ಲಾ ಪರಿಸರ ಅಧಿಕಾರಿ ಡಾ.ಸಿದ್ದೇಶ್ವರ ಬಾಬು ಅವರು ಹೇಳಿದರು.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರದ ವತಿಯಿಂದ (ಆರ್‌ಎಎಂಪಿ) ಯೋಜನೆಯಡಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಸರ ಮತ್ತು ಸಾಮಾಜಿಕ ನಿರ್ವಹಣೆ (ಇಎಸ್‌ಎಂ) ಯೋಜನೆಯ ಒಂದು ದಿನದ ಜಾಗೃತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರ ಸಂರಕ್ಷಣೆಯ ಮೇಲಿನ ಜವಾಬ್ದಾರಿಗಳನ್ನು ಯೋಜನೆಗಳ ಮೂಲಕ ರೂಪಿಸಿ ಅನುಷ್ಠಾನಗೊಳಿಸಬೇಕು ಎಂದು ಅಭಿಪ್ರಾಯಪಟ್ಟರು.
ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕ ಸೋಮಶೇಖರ್.ಬಿ., ಉದ್ಯೋಗ ಮತ್ತು ಜಿಲ್ಲಾ ಕೌಶಲ್ಯ ಅಧಿಕಾರಿ ಹಟ್ಟೆಪ್ಪ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಮಹಾಂತೇಶ ಕಂಚಿಮಠ, ಜೆಎಸ್‌ಡಬ್ಲ್ಯೂ ಸ್ಟೀಲ್‌ನ ಪರಿಸರ ಅಧಿಕಾರಿ ಡಾ.ಜಯಪ್ರಕಾಶ್, ಶ್ರೀಮೇಧಾ ಶಿಕ್ಷಣ ಸಮೂಹ ಸಂಸ್ಥೆಯ ಪ್ರಾಂಶುಪಾಲ ಡಾ.ರಾಮ್ ಕಿರಣ್.ಕೆ., ಬಿಹೆಚ್‌ಕ್ಯೂ ಪ್ರಾಜೆಕ್ಟ್-್ಸ ಉಪಾಧ್ಯಕ್ಷ ಉಮಾ ಶಂಕರ್, ಜೆಎಸ್‌ಡಬ್ಲ್ಯೂ ಸ್ಟೀಲ್ ತರಬೇತಿ ಅಧಿಕಾರಿ ಸುದರ್ಶನ ಹೆಚ್.ಆರ್., ಸಿಡಾಕ್ ನ ವಿನೋದ್ ಕುಮಾರ್, ಆರ್‌ಸೆಟ್‌ಇ ತರಬೇತಿ ಅಧಿಕಾರಿ ಜಡೆಪ್ಪ ಸೇರಿದಂತೆ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 