ಶಿರಹಟ್ಟಿ ಕ್ಷೇತ್ರದಿಂದ ರವಿಕಾಂತ ಅಂಗಡಿ ಸ್ಪರ್ಧಿಸಲಿ: ಎಸ್.ವೈ. ಗೊಬ್ಬರಗುಂಪಿ ಆಗ್ರಹ
Let Ravikant Angadi contest from Shirahatti constituency: SY Gobbaragumpi demands
ಲೋಕದರ್ಶನ ವರದಿ
ಶಿರಹಟ್ಟಿ 06: ಸಂಪೂರ್ಣ ಮತಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಶಾಶ್ವತ ಪರಿಹಾರಕ್ಕಾಗಿ ದೀರ್ಘಕಾಲದಿಂದ ಹೋರಾಟ ನಡೆಸುತ್ತಿರುವ ವಕೀಲ ರವಿಕಾಂತ ಅಂಗಡಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶಿರಹಟ್ಟಿ ಮತಕ್ಷೇತ್ರದಿಂದ ಸ್ಪರ್ಧಿಸಬೇಕು ಎಂದು ಶಿರಹಟ್ಟಿ ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಸ್.ವೈ. ಗೊಬ್ಬರಗುಂಪಿ ತಮ್ಮ ಅಭಿಪ್ರಾಯವನ್ನು ಹೇಳಿದರು.ಪಟ್ಟಣದ ವಕೀಲರ ಸಂಘದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ರವಿಕಾಂತ ಅಂಗಡಿ ಅವರು ಹಲವು ವರ್ಷಗಳಿಂದ ಜನಪರ ಹಾಗೂ ಜೀವಪರ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಶಿರಹಟ್ಟಿ, ಮುಂಡರಗಿ ಹಾಗೂ ಲಕ್ಷ್ಮೇಶ್ವರ ಭಾಗದ ರೈತರ ಜಮೀನುಗಳ ರಕ್ಷಣೆ, ರೈತರ ಹಕ್ಕುಗಳ ಪರ ಹೋರಾಟ, ಸಾಮಾಜಿಕ ನ್ಯಾಯದ ಸ್ಥಾಪನೆ ಹಾಗೂ ಪರಿಸರ ಸಂರಕ್ಷಣೆಯಂತಹ ಮಹತ್ವದ ವಿಷಯಗಳಲ್ಲಿ ಅವರು ಗಮನಾರ್ಹ ಪಾತ್ರ ವಹಿಸಿದ್ದಾರೆ ಎಂದು ಹೇಳಿದರು.
ಸಾಮಾನ್ಯ ಜನರ ಸಂಕಷ್ಟಗಳಿಗೆ ತಕ್ಷಣ ಸ್ಪಂದಿಸುವ ಗುಣ, ಕಾನೂನು ಕ್ಷೇತ್ರದಲ್ಲಿನ ವಿಶಾಲ ಅನುಭವ ಹಾಗೂ ಜನಸೇವೆಯ ಬದ್ಧತೆಯಿಂದ ರವಿಕಾಂತ ಅಂಗಡಿ ಅವರು ಸಾರ್ವಜನಿಕರ ವಿಶ್ವಾಸವನ್ನು ಗಳಿಸಿದ್ದಾರೆ. ಕ್ಷೇತ್ರದ ಅಭಿವೃದ್ಧಿಗೆ ಹೊಸ ಚಿಂತನೆ, ದೂರದೃಷ್ಟಿಯ ಯೋಜನೆಗಳು ಹಾಗೂ ಪರಿಣಾಮಕಾರಿ ನಾಯಕತ್ವ ನೀಡುವ ಸಾಮರ್ಥ್ಯ ಅವರಲ್ಲಿದೆ ಎಂದು ಅಭಿಪ್ರಾಯಪಟ್ಟರು.ಶಿರಹಟ್ಟಿ ಮತಕ್ಷೇತ್ರದ ಜನರು ಅಭಿವೃದ್ಧಿ ಪರ, ಜನಪರ ಹಾಗೂ ಜನರ ನಡುವೆ ನಿರಂತರ ಸಂಪರ್ಕ ಹೊಂದಿರುವ ನಾಯಕತ್ವವನ್ನು ನೀರೀಕ್ಷಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರವಿಕಾಂತ ಅಂಗಡಿ ಅವರು ಚುನಾವಣಾ ಕಣಕ್ಕಿಳಿದು ಕ್ಷೇತ್ರದ ಜನರ ಆಶೋತ್ತರಗಳಿಗೆ ಸ್ಪಂದಿಸಬೇಕು. ಅವರ ಸ್ಪರ್ಧೆಯಿಂದ ಕ್ಷೇತ್ರದ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಕ್ಷೇತ್ರದ ಸಮಗ್ರ ಅಭಿವೃದ್ಧಿ, ರೈತರ ಸಮಸ್ಯೆಗಳ ಶಾಶ್ವತ ಪರಿಹಾರ, ಯುವಕರಿಗೆ ಉದ್ಯೋಗಾವಕಾಶಗಳ ಸೃಷ್ಟಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ರವಿಕಾಂತ ಅಂಗಡಿ ಅವರಂತಹ ಬದ್ಧ ನಾಯಕತ್ವದ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ಅವರು ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಸಕಾರಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂಬುದು ಕ್ಷೇತ್ರದ ಅನೇಕ ಜನರ ಆಶಯವಾಗಿದೆ ಎಂದು ತಿಳಿಸಿದರು.ಇದೆ ವೇಳೆಯಲ್ಲಿ ಸಮಾಲೋಚನಾ ಸಭೆ ಕೂರಿತು ವಕೀಲ ರವಿಕಾಂತ ಅಂಗಡಿ ಅವರು ಮಾತನಾಡಿ ತಮ್ಮೇಲ್ಲರ ಆಶಯದಂತೆ ಕ್ಷೇತ್ರದ ಹಾಗೂ ಜನರ, ರೈತರ ಪರ ಸಾಕಷ್ಟು ಹೋರಾಟಗಳನ್ನು ಮಾಡಿದ್ದೆನೆ, ನಾನು ಜನರ, ರೈತರ ಸಮಸ್ಯೆಗಳಿಗೆ ಶ್ರಮಿಸಲು ಸದಾ ಸಿದ್ಧ, ಒಂದು ವೇಳೆ ತಮ್ಮೆಲ್ಲರ ಆಶಯದಂತೆ ಮತಕ್ಷೇತ್ರದಲ್ಲಿ ಸ್ಪರ್ಧಿಸುವ ಅವಕಾಶ ದೊರೆತಲ್ಲಿ ನಾನಗೆ ಜನಪರ, ರೈತಪರ ಕಾರ್ಯಗಳನ್ನು ಮಾಡಲು ಇನ್ನಷ್ಟು ಬಲಬಂದಂತಾಗುತ್ತದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ವಕೀಲರ ಸಂಘದ ಉಪಾಧ್ಯಕ್ಷ ಎ.ವಿ. ಮಾನೆ, ಕಾರ್ಯದರ್ಶಿ ಎ.ಎ. ಬೇವಿನಗಿಡದ, ಜಂಟಿ ಕಾರ್ಯದರ್ಶಿ ಮಹೇಶ ದಾನಪ್ಪಗೌಡರ, ಖಜಾಂಚಿ ಶ್ರೀಮತಿ ಬಂಡಿವಡ್ಡರ ಹಾಗೂ ಸದಸ್ಯರಾದ ಮಂಜುನಾಥ ವಾಲಿ, ಎಸ್.ಎಸ್. ಪಾಟೀಲ, ಎಸ್.ಕೆ. ಪುರ್ತಗೇರಿ, ಆರ್.ಎಂ. ಪೂಜಾರ, ಇ.ಎ. ಕಳಕಾಪೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ 