ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಂಗಣ್ಣ ಕರಡಿಗೆ ಮತ್ತೊಮ್ಮೆ ಅವಕಾಶ ಕೊಡಲಿ

ಬಿಜೆಪಿ ಕೊಪ್ಪಳ ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ಶೆಟ್ಟಿ ಆಗ್ರಹ 

ಗಂಗಾವತಿ.03: ಸಂಸದ ಸಂಗಣ್ಣ ಕರಡಿ ಸಜ್ಜನ ರಾಜಕಾರಣಿ ಕಳೆದ ನಾಲೈದು ದಶಕಗಳಿಂದ ಕೊಪ್ಪಳ ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ನಿರಂತರ ಸಂಬಂಧ ಹೊಂದಿರುವ ಹಾಲಿ ಸಂಸದ ಸಂಗಣ್ಣ ಕರಡಿ ಅವರು ಜಿಲ್ಲೆಯ ಸೇರಿದಂತೆ ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ ಸಜ್ಜನ ರಾಜಕಾರಣಿ ಎಂದು ಜನ ಗುರುತಿಸುತ್ತಿದ್ದಾರೆ.  

ಸರ್ವ ಸಮುದಾಯ ಮತ್ತು ಸರ್ವ ಧರ್ಮಗಳ ಜನರೊಂದಿಗೆ ಮತ್ತು ಎಲ್ಲಾ ಪಕ್ಷಗಳ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ಸಂಗಣ್ಣ ಅವರು ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು ಜಿಲ್ಲೆಯ ಹಿರಿಯ ಮುಖಂಡರೊಂದಿಗೂ ನಿರಂತರ ಸಂಪರ್ಕ ಹೊಂದಿದ್ದಾರೆ. ಮತ್ತು ಅಭಿವೃದ್ಧಿ ವಿಷಯದಲ್ಲಿ ಯಾವುದೇ ರಾಜಕಾರಣ ಮಾಡದೇ ಎಲ್ಲಾ ಪಕ್ಷಗಳ ಮುಖಂಡರು ಮೆಚ್ಚುವಂತಹ ಕೆಲಸ ಮಾಡುತ್ತಾ ಸಜ್ಜನ ರಾಜಕಾರಣಿ ಎಂದು ಗುರುತಿಸಿಕೊಂಡಿದ್ದಾರೆ. ಇದೆಲ್ಲ ಅಂಶವನ್ನು ಬಿಜೆಪಿ ನಾಯಕರು ಪರಿಗಣಿಸಬೇಕು. ಮುಂಬರುವ 20245 ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಕೊಪ್ಪಳ ಕ್ಷೇತ್ರದಲ್ಲಿ ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಬಿಜೆಪಿ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದಾರೆ.ಈ ಕುರಿತು ಅವರು ಮಾಧ್ಯಮಗಳಿಗೆ ಹೇಳಿಕೆ ನೀಡಿ ಬಿಜೆಪಿ ರಾಷ್ಟ್ರ ಮತ್ತು ರಾಜ್ಯ ನಾಯಕರು ಕೊಪ್ಪಳ ಕ್ಷೇತ್ರದಲ್ಲಿ ಹಾಲಿ ಸಂಸದರಿಗೆ ಅವಕಾಶ ಕಲ್ಪಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಲೋಕ ಸಭೆ ಕ್ಷೇತ್ರದ ಹಾಲಿ ಸಂಸದರಾಗಿರುವ ಸಂಗಣ್ಣ ಕರಡಿ ಅವರು ಕಳೆದ ಎರಡು ಅವಧಿಯಲ್ಲಿ ಕ್ಷೇತ್ರದಾದ್ಯಂತ ನಿರಂತರ ಸಂಪರ್ಕ ಹೊಂದಿದ್ದಾರೆ. ಮತ್ತು ಲೋಕಸಭೆ ವ್ಯಾಪ್ತಿಯ ಎಲ್ಲಾ ವಿಧಾನಸಭೆ ಕ್ಷೇತ್ರದಲ್ಲಿ ಕೇಂದ್ರ ಸರಕಾರ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸು ವಲ್ಲಿ ವಿಶೇಷ ಕಾಳಜಿವಹಿಸುತ್ತಿದ್ದಾರೆ. ಕಳೆದ ಮೂರು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಗಿಣಿಗೇರಾ ಮೆಹಬೂಬ್ ನಗರ ರೈಲ್ವೆ ಲೈನ್ ಕಾಮಗಾರಿಯನ್ನು ಅವರ ಅವಧಿಯಲ್ಲಿ ತ್ವರಿತವಾಗಿ ಅನುಷ್ಟಾನಗೊಳಿಸಿದ್ದಾರೆ. ಈಗ ಸಿಂಧನೂರುವರೆಗೂ ರೈಲು ಸಂಚಾರ ಮಾಡುವಂತೆ ವಿಶೇಷ ಪ್ರಯತ್ನ ಮಾಡಿದ್ದಾರೆ. ಪ್ರಾರಂಭಿಸಿದ್ದು ಅವರ ಅವಧಿಯಲ್ಲಿ.ಜೊತೆಗೆ ಗದಗ ವಾಡಿ ಯೋಜನೆ ಯನ್ನು ಕೈಗೆತ್ತಿಕೊಂಡು ಯೋಜನೆ ಪೂರ್ಣಗೊಳಿಸುವ ಪ್ರಯತ್ನ ಮಾಡಿದ್ದಾರೆ. ಕೊಪ್ಪಳ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭೆ ಕ್ಷೇತ್ರದಲ್ಲೂ ರೈಲು ಸಂಚಾರ ಪ್ರಾರಂಭಿಸುವ ಯೋಜನೆ ಅವರು ಹಾಕಿಕೊಂಡಿದ್ದಾರೆ. ಬಳ್ಳಾರಿಯಿಂದ ಗಂಗಾವತಿ ಮೂಲಕ ಹುಬ್ಬಳ್ಳಿ, ಬಾಗಲಕೋಟೆಗೆ ಸಂಪರ್ಕ ಕಲ್ಪಿಸುವ ರೈಲು ಯೋಜನೆ ದರೋಜಿ ಮಾರ್ಗಕ್ಕೂ ಚಾಲನೆ ನೀಡಲು ಈಗಾಗಲೇ ಸಿದ್ಧತೆ ಮಾಡಿದ್ದಾರೆ. ಜಿಲ್ಲೆಯಾದ್ಯಂತ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮಾಡುವ ಜೊತೆಗೆ ಪ್ರತಿಯೊಂದು ರಸ್ತೆಯಲ್ಲಿ ಬರುವ ರೈಲ್ವೆ ಗೇಟ್‌ನಿಂದ ಸಂಚಾರಕ್ಕೆ ಆಗುತ್ತಿರುವ ತೊಂದರೆಯನ್ನು ನಿವಾರಿಸಿ ಪ್ರೈಓವರ್ ಕಾಮಗಾರಿ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕೇಂದ್ರ ಸರಕಾರ ಜಲಜೀವನ್ ಯೋಜನೆ, ಉದ್ಯೋಗ ಖಾತ್ರಿ, ಆರೋಗ್ಯ ಭಾಗ್ಯ. ಉಜ್ವಲ್ ಯೋಜನೆಯನ್ನು ಕ್ಷೇತ್ರದಾದ್ಯಂತ ಸಾಮಾನ್ಯ ಜನರಿಗೂ ತಲುಪಿಸುವ ಕೆಲಸ ಮಾಡುವಲ್ಲಿ ಅವರು ಪ್ರಮಾಣಿಕ ಕಾರ್ಯ ಮಾಡಿದ್ದಾರೆ. ಜಿಲ್ಲೆಯ ಸಜ್ಜನ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರ ರಾಗಿದ್ದಾರೆ.  

ಮುಂದಿನ ಲೋಕಸಭೆಯಲ್ಲೂ ಸಂಗಣ್ಣ ಕರಡಿ ಅವರಿಗೆ ಬಿಜೆಪಿಯಿಂದ ಅವಕಾಶ ನೀಡಿದರೆ ಮತ್ತೊಮ್ಮೆ ಕೊಪ್ಪಳ ಕ್ಷೇತ್ರದಲ್ಲಿ ಬಿಜೆಪಿ ಲೋಕಸಭೆ ಕ್ಷೇತ್ರವನ್ನು ನಿಶ್ಚಿತವಾಗಿ ಗೆಲ್ಲಲಿದೆ. ಈ ಎಲ್ಲಾ ಅಂಶಗಳನ್ನು ಮನಗಂಡು ಬಿಜೆಪಿ ರಾಷ್ಟ್ರೀಯ ಮತ್ತು ರಾಜ್ಯದ ನಾಯಕರು, ಜಿಲ್ಲೆಯ ಎಲ್ಲಾ ಮುಖಂಡರು ಸಂಸದ ಸಂಗಣ್ಣ ಕರಡಿಗೆ ಮತ್ತೊಮ್ಮೆ ಅವಕಾಶ ಮಾಡಿ ಕೊಡಬೇಕು ಎಂದು ರಾಘವೇಂದ್ರ ಶೆಟ್ಟಿ ಮನವಿ ಮಾಡಿದ್ದಾರೆ.