ಸಂಸ್ಕಾರಯುತ ಶಿಕ್ಷಣವನ್ನು ಪಡೆದು ಹೆಣ್ಣುಮಕ್ಕಳು ಮುಖ್ಯ ವಾಹಿನಿಗೆ ಬರಲಿ: ದ್ಯಾಮನಕೊಪ್ಪ
ರಾಣಿಬೆನ್ನೂರು 12: ಉತ್ತಮ ಸಮಾಜ ಕಟ್ಟುವ ಜವಾಬ್ದಾರಿ ಯುವಕ, ಯುವತಿಯರ ಮೇಲೆ ಅವಲಂಬಿತವಾಗಿದೆ. ಸಂಸ್ಕಾರಯುತ ಶಿಕ್ಷಣವನ್ನು ಪಡೆದು ಪ್ರತಿಯೊಬ್ಬ ಹೆಣ್ಣು ಮಕ್ಕಳು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಹಾವೇರಿ ಜಿಲ್ಲೆ ಪಪೂ ಕಾಲೇಜುಗಳ ಪ್ರಾಚಾರ್ಯರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ದ್ಯಾಮನಕೊಪ್ಪ ಹೇಳಿದರು.
ಇಲ್ಲಿನ ಪಂಪಾಪತಿ ಸಭಾಭವನದಲ್ಲಿ ಈಚೆಗೆ ನಡೆದ ಕೆಎಲ್ಇ ಸಂಸ್ಥೆಯ ರಾಜರಾಜೇಶ್ವರಿ ಹೆಣ್ಣು ಮಕ್ಕಳ ಸಂಯುಕ್ತ ಪದವಿ ಪೂರ್ವ ಕಾಲೇಜಿನ 2024 -25 ನೇ ಸಾಲಿನ ವಿದ್ಯಾರ್ಥಿ ಒಕ್ಕೂಟದ ಉದ್ಘಾಟನೆ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿನಿಯರಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಎಲ್ಇ ಸಂಸ್ಥೆಯ ಸ್ಥಾನಿಕ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ವಿ.ಪಿ.ಲಿಂಗನಗೌಡ್ರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸದಸ್ಯರಾದ ಬಸವರಾಜ ಪಟ್ಟಣಶೆಟ್ಟಿ, ವೀರಣ್ಣ. ಅಂಗಡಿ, ಜಯಣ್ಣ ಜಂಬಗಿ, ಪ್ರಾಚಾರ್ಯ ಸುರೇಖಾ ಕಟ್ಟಿ, ಒಕ್ಕೂಟದ ಉಪಾಧ್ಯಕ್ಷ ಜಿ.ಎನ್. ಚನ್ನೂರ, ಆರ್.ಜಿ. ಕುರುವತ್ತಿ, ಕೀರ್ತಿವರ್ಮ. ಪಾಣೆಗಟ್ಟಿ, ರವಿ. ಕುಂಬಾರ ಉಪಸ್ಥಿತರಿದ್ದರು.