ಸಂಕೇಶ್ವರ

ಖಾಸಗಿ ಆಸ್ಪತ್ರೆಗಳಿಗೆ ಪೈಪೋಟಿ ನೀಡುವಂತಹ ಚಿಕಿತ್ಸೆ ಸರಕಾರಿ ಆಸ್ಪತ್ರೆಗಳಲ್ಲಿ ದೊರೆಯುವಂತಾಗಲಿ : ನಿಡಸೋಸಿ ಶಿವಲಿಂಗೇಶ್ವರ ಸ್ವಾಮೀಜಿ ಆಶಯ

ಖಾಸಗಿ ಆಸ್ಪತ್ರೆಗಳಿಗೆ ಪೈಪೋಟಿ ನೀಡುವಂತಹ ಚಿಕಿತ್ಸೆ ಸರಕಾರಿ ಆಸ್ಪತ್ರೆಗಳಲ್ಲಿ ದೊರೆಯುವಂತಾಗಲಿ : ನಿಡಸೋಸಿ ಶಿವಲಿಂಗೇಶ್ವರ ಸ್ವಾಮೀಜಿ ಆಶಯ

ಲೋಕದರ್ಶನ ವರದಿ 


ಸಂಕೇಶ್ವರ 18: ಸರಕಾರ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದ್ದು, ಗುಣಮಟ್ಟದ ವ್ಯವಸ್ಥೆ ಕಲ್ಪಿಸುವ ಮೂಲಕ ಖಾಸಗಿ ಆಸ್ಪತ್ರೆಗಳಿಗೆ ಪೈಪೋಟಿ ನೀಡುವಂತಹ ಚಿಕಿತ್ಸೆ ಸರಕಾರಿ ಆಸ್ಪತ್ರೆಗಳಲ್ಲಿ ದೊರೆಯುವಂತಾಗಬೇಕು ಎಂದು ನಿಡಸೋಸಿ ಶಿವಲಿಂಗೇಶ್ವರ ಸ್ವಾಮೀಜಿ ಅಭಿಪ್ರಾಯಪಟ್ಟರು. 

ಸಮೀಪದ ನಿಡಸೋಸಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಅಂಬ್ಯೂಲೆನ್ಸ ವಾಹನಕ್ಕೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಆಧುನಿಕ ವ್ಯವಸ್ಥೆಗೆ ತಕ್ಕಂತೆ ಸರಕಾರ ಆಸ್ಪತ್ರೆಗಳಿಗೆ ವ್ಯವಸ್ಥೆ ಕಲ್ಪಿಸುತ್ತಿದ್ದರೂ ಸಹ ವೈದ್ಯರಿಲ್ಲದೇ ಜನರಿಗೆ ಸಮರ​‍್ಕ ಸೇವೆ ಸಿಗುತ್ತಿಲ್ಲ. ಹೀಗಾಗಿ ಬಡಜನರ ಸೇವಾ ದೃಷ್ಟಿಯಿಂದ ವೈದ್ಯರು ಗ್ರಾಮೀಣ ಭಾಗದ ಸರಕಾರಿ ಸೇವೆ ಸಲ್ಲಿಸಲು ಮುಂದೆ ಬರಬೇಕೆಂದರು. 

ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ಸೌಮ್ಯ ಸಜ್ಜನ ಮಾತನಾಡಿ, ಇಂದಿನ ಯಾಂತ್ರಿಕ ಬದುಕಿನಲ್ಲಿ ಆರೋಗ್ಯದ ಬಗೆಗೆ ಹೆಚ್ಚಿನ ಕಾಳಜಿ ವಹಿಸಬೇಕಾಗಿದ್ದು, ನಿಡಸೋಸಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡಲಾಗುತ್ತಿದ್ದು, ಅಂಬ್ಯೂಲೆನ್ಸ ವ್ಯವಸ್ಥೆ ಸಿಕ್ಕಿರುವುದು ತುರ್ತು ಸಂದರ್ಭದ ಚಿಕಿತ್ಸೆಗೆ ಹೆಚ್ಚಿನ ಅನುಕೂಲ ದೊರಕಿದೆ ಎಂದರು. 

ಈ ಸಂದರ್ಭದಲ್ಲಿ ಡಾ. ಮಿಲಿಂದ ತಳವಾರ, ಡಾ. ಸುಧೀರ ರಾಯಕರ,  ಡಾ. ಅರ್ಚನಾ ಕುಲಕರ್ಣಿ, ಲಕ್ಷ್ಮಣ ವಾಜಂತ್ರಿ,  ಕಿಶೋರ ಶಿರಗೆ, ಶಂಕರ ವಕಾರಿ, ಉಪಸ್ಥಿತರಿದ್ದರು 


ಸುದ್ದಿ ಓದಿ