ರಾಣೆಬೆನ್ನೂರ

ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನು ಪಡೆಯಲಿ: ಶಿವಣ್ಣನವರ

ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನು ಪಡೆಯಲಿ: ಶಿವಣ್ಣನವರ

ರಾಣಿಬೆನ್ನೂರ 16: ವಿದ್ಯಾರ್ಥಿಗಳು ಅಧ್ಯಯನ ಜೊತೆಗೆ ಸಂಸ್ಕಾರಯುತ ಶಿಕ್ಷಣವನ್ನು ಪಡೆಯಬೇಕು ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು. 

ತಾಲೂಕಿನ ಸುಣಕಲ್ಲಬಿದರಿಯ ಶ್ರೀ ಅರಳಿ ಸಿದ್ದಿಂಗಪ್ಪ ಬಸಪ್ಪ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಪತ್ಯೇತರ ಚಟುವಟಿಕೆ ಸಮಾರೋಪ ಹಾಗೂ ಅಂತಿಮ ವರ್ಷದ ಬಿಎ, ಬಿಕಾಂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಜೊತೆಗೆ ಗುರು ಹಿರಿಯರನ್ನು ಗೌರವಿಸುವ ಹಾಗೂ ನಮ್ಮ ದೇಶದ ಸಂಸ್ಕೃತಿ, ಆಚಾರ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಯಾಗಿ ರೂಪಗೊಳ್ಳಬೇಕು ಎಂದರು. 

ರಾಣಿಬೆನ್ನೂರಿನ ಎಚ್‌.ಎಸ್‌. ಪದವಿಪೂರ್ವ ಮಹಾವಿದ್ಯಾಲಯದ ಕನ್ನಡ ಉಪನ್ಯಾಸಕ ಡಾ. ಎಚ್‌. ಓಂಕಾರ ನಾಯ್ಕ ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಂಕಗಳಿಗೆ ಓದದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಧ್ಯಯನ ಮಾಡುವುದು ಅಗತ್ಯವಾಗಿದೆ ಎಂದರು. 

ಇದೇ ಸಂದರ್ಭದಲ್ಲಿ ಕಾಲೇಜ್‌ಗೆ ನೂತನವಾಗಿ ಆಯ್ಕೆಯಾದ ಕಾಲೇಜು ಅಭಿವೃದ್ಧಿ ಸಮಿತಿಯ ಸರ್ವಸದಸ್ಯರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. 

ಪ್ರಾಚಾರ್ಯ ಪ್ರೊ.ಆರ್‌.ಎಫ್‌.ಅಯ್ಯನಗೌಡ್ರ ಅಧ್ಯಕ್ಷತೆ ವಹಿಸಿದ್ದರು. ಭೂದಾನಿ ಮಲ್ಲಿಕಾರ್ಜುನ ಅರಳಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯ ವೀರನಗೌಡ ಪೊಲಿಸಗೌಡ್ರ, ಸಾಂಸ್ಕೃತಿಕ ವಿಭಾಗದ ಸಂಚಾಲಕ ಡಾ.ಎಸ್‌.ಐ.ಮಲ್ಲಿಗಾರ, ಆಂಗ್ಲ ವಿಭಾಗದ ಮುಖ್ಯಸ್ಥ ಲೋಹಿಯಾ.ಕೆ.ಜೆ.ಆರ್, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಸವರಾಜ ಹುಗ್ಗಿ, ಕನ್ನಡ ಸಹಾಯಕ ಪ್ರಾಧ್ಯಾಪಕಿ ಯಮುನ ನಾಯ್ಕ.ಎಂ, ಕನ್ನಡ ವಿಭಾಗದ ಮುಖ್ಯಸ್ಥ ಮಂಜುನಾಥ ಎನ್‌. ಜಿ., ಗ್ರಂಥಪಾಲಕ ಡಾ. ಹನಮಂತರಾಜು ಎನ್‌.ಬಿ., ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಉಪಸ್ಥಿತರಿದ್ದರು. 


ಸುದ್ದಿ ಓದಿ