"ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ "
"ವಿದ್ಯಾರ್ಥಿಗಳು ಶಿಕ್ಷಣ ಪಡೆದು ಉತ್ತಮ ಭವಿಷ್ಯ ಕಟ್ಟಿಕೊಳ್ಳಲಿ "
ಲೋಕದರ್ಶನ ವರದಿ
ಹೂವಿನಹಡಗಲಿ 10 : ವಿದ್ಯಾರ್ಥಿಗಳ ಜೀವನದಲ್ಲಿ ಕಾಲೇಜು ಶಿಕ್ಷಣ ಪ್ರಮುಖ ತಿರುವು ಆಗಿದೆ. ಇಂತಹ ಸಂದರ್ಭದಲ್ಲಿ ಸಮಯ ವ್ಯರ್ಥ ಮಾಡದೆ ಏಕಾಗ್ರತೆಯಿಂದ ಓದಿ ಉತ್ತಮ ಭವಿಷ್ಯ ಕಟ್ಟಿಕೊಳ್ಳಿ ಎಂದು ಶಾಸಕ ಕೃಷ್ಣನಾಯಕ ಹೇಳಿದರು.ಪಟ್ಟಣದ ರುದ್ರಾಂಬ ಎಂ.ಪಿ. ಪ್ರಕಾಶ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಗುರುವಾರ ಆಯೋಜಿಸಿದ್ದ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಹಾಗೂ ಪಠೇತರ ಚಟುವಟಿಕೆಗಳ ಉದ್ಘಾಟಿಸಿ ಮಾತನಾಡಿದರು. ’ಸರ್ಕಾರಿ ಕಾಲೇಜುಗಳನ್ನು ಅವಲಂಬಿಸಿರುವ ಗ್ರಾಮೀಣ ವಿದ್ಯಾರ್ಥಿಗಳಿಗೆಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉಪನ್ಯಾಸಕರು ಅವರಿಗೆ ಉತ್ತಮ ಭವಿಷ್ಯ ಕಟ್ಟಿಕೊಡಬೇಕು’ ಎಲ್.ಕೃಷ್ಣನಾಯಕ ಹೇಳಿದರು.ರಂಗಭಾರತಿ ಕಾರ್ಯಾಧ್ಯಕ್ಷೆ ಎಂ.ಪಿ. ಸುಮಾ ವಿಜಯ್, ನಿವೃತ್ತ ಪ್ರಾಚಾರ್ಯ ಅಬ್ದುಲ್ ಮುತಾಲಿಬ್ ಮಾತನಾಡಿದರು. ಪ್ರಾಚಾರ್ಯ ಎಂ.ವಿಜಯಕುಮಾ-ರ್ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಅಧ್ಯಕ್ಷೆ ಗಂಟಿ ಜಮಾಲ್ ಬೀ, ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ ಜೈನ್, ಸದಸ್ಯ ವಾರದ ಗೌಸ್ ಮೊಹಿದ್ದೀನ್, ಸಿಡಿಎಂಸಿ ಸದಸ್ಯರಾದ ಕೆ.ಅಯ್ಯನಗೌಡ, ಟಿ.ಮಹಾಂತೇಶ, ಆರ್.ಪಕ್ಕೀರ್ಪ, ರಮೇಶ, ನಸೀನ್, ಅಂಗನವಾಡಿ ಫೆಡರೇಷನ್ ಅಧ್ಯಕ್ಷೆ ಬಿ.ಜಯಲಕ್ಷ್ಮಿ ಇದ್ದರು.