ಕನ್ನಡದ ಕಂಪು ಎಲ್ಲೆಡೆ ಪಸರಿಸಲಿ...
Let the flavor of Kannada spread everywhere...
ಲೋಕದರ್ಶನ ವರದಿ
ಕನ್ನಡದ ಕಂಪು ಎಲ್ಲೆಡೆ ಪಸರಿಸಲಿ...
ವಿಜಯಪುರ 02: ನಮ್ಮ ಕರ್ನಾಟಕ ಕೇವಲ ನಾಡಲ್ಲ. ಅದು ಸಂಸ್ಕೃತಿಯ ಬೀಡು. ಕನ್ನಡ ಕೇವಲ ನುಡಿಯಲ್ಲ. ನಮ್ಮ ಅಂತರಂಗದ ಮಾತು. ನಾವೆಲ್ಲರೂ ಕನ್ನಡ ನಾಡು-ನುಡಿ, ಭಾಷೆ, ಸಾಹಿತ್ಯ-ಸಂಸ್ಕೃತಿ ಮತ್ತು ಭವ್ಯತೆಯನ್ನು ಎತ್ತಿಹಿಡಿಯೋಣ. ಈ ದಿನವು ನಮ್ಮೆಲ್ಲ ಕನ್ನಡಿಗರ ಪಾಲಿಗೆ ಸಂಭ್ರಮದ ದಿನ. ಯುವ ಪೀಳಿಗೆಗೆ ಕನ್ನಡ ನಾಡಿನ ಇತಿಹಾಸ, ಸಂಸ್ಕೃತಿ, ಕಲೆ-ಸಾಹಿತ್ಯ ಮತ್ತು ಭಾಷೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯಬೇಕಾಗಿದೆ ಎಂದು ಮುಖ್ಯೋಪಾಧ್ಯಾಯನಿ ಆರ್.ಎಸ್.ಕೊಪ್ಪದ ಅವರು ಅಭಿಪ್ರಾಯಪಟ್ಟರು.
ಅವರು ಬಬಲೇಶ್ವರ ತಾಲೂಕಿನ ಹೊಕ್ಕುಂಡಿಯ ತೊರವಿ ವಸ್ತಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಯಲ್ಲಿ ದಿನಾಂಕ: 01-11-2025 ರಂದು ಜರುಗಿದ “ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ” ದಲ್ಲಿ ಮಾತನಾಡುತ್ತಿದ್ದರು.
ಇನ್ನೊರ್ವ ಶಿಕ್ಷಕಿ ಶ್ರೀಮತಿ ಶ್ರೀದೇವಿ ರೆಬಗೊಂಡ ಮಾತನಾಡಿ, ನಾವೆಲ್ಲರೂ ಈ ದಿನದಂದು ಕನ್ನಡಾಂಬೆಗೆ ಗೌರವ ಸಲ್ಲಿಸುವುದರ ಮೂಲಕ ಕನ್ನಡದ ಭಾಷಾಭಿಮಾನವನ್ನು ಹೊಂದಬೇಕು. ನಮ್ಮ ಕನ್ನಡ ಭಾಷೆಯ ಕಂಪು ಎಲ್ಲೆಡೆಯಲ್ಲಿ ಪಸರುವಂತೆ ಶ್ರಮಿಸಬೇಕು. ಎಲ್ಲಾದರೂ ಇರು, ಎಂತಾದರೂ ಇರು. ಎಂದೆಂದಿಗೂ ನೀ ಕನ್ನಡಿಗನಾಗಿರಬೇಕೆಂಬ ಮಹತ್ವಾಕಾಂಕ್ಷೆಯನ್ನು ಹೊಂದಿರಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಶಾಲೆಯ ಅಭಿವೃದ್ಧಿ ಸಮೀತಿ ಸದಸ್ಯರು, ಊರಿನ ಹಿರಿಯರು, ಯುವಕರು, ವಿದ್ಯಾರ್ಥಿಗಳ ಪಾಲಕರು ಮತ್ತು ಮಕ್ಕಳು ಭಾಗವಹಿಸಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 