ಬಳ್ಳಾರಿ

ಅತ್ಯಾಚಾರ ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಮುಂದಾಗಿ : ರಾಜ್ಯ ಯುವಘಟಕ ಅಧ್ಯಕ್ಷ ನಿತಿನ್‌ಕುಮಾರ್ ಆಗ್ರಹ

ಅತ್ಯಾಚಾರ ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಮುಂದಾಗಿ : ರಾಜ್ಯ ಯುವಘಟಕ ಅಧ್ಯಕ್ಷ ನಿತಿನ್‌ಕುಮಾರ್ ಆಗ್ರಹ

ಅತ್ಯಾಚಾರ ತಡೆಯಲು ಕಠಿಣ ಕಾನೂನು ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಮುಂದಾಗಿ : 


ಲೋಕದರ್ಶನ ವರದಿ 

ಕಂಪ್ಲಿ 31: ಮಕ್ಕಳು ಮತ್ತು ಮಹಿಳೆಯರ ಮೇಲಿನ ಅತ್ಯಾಚಾರ, ದೌರ್ಜನ್ಯ ತಡೆಯಲು ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಇಲ್ಲಿನ ಶಿವಂ ಚಾರಿಟೇಬಲ್ ಟ್ರಸ್ಟ್‌ ಸಂಸ್ಥಾಪಕ ಹಾಗೂ ಮಾಹಿತಿ ಹಕ್ಕು ಹೋರಾಟಗಾರರ ರಾಜ್ಯ ಯುವಘಟಕ ಅಧ್ಯಕ್ಷ ನಿತಿನ್‌ಕುಮಾರ್ ಆಗ್ರಹಿಸಿದರು. 


ತಹಸೀಲ್ದಾರ್ ಕಚೇರಿಯ ಶಿರಸ್ತೆದಾರ ಜಿ.ಪಂಪಾಪತಿ ಇವರಿಗೆ ಸೋಮವಾರ ಮನವಿ ಸಲ್ಲಿಸಿ, ದಿನೇ ದಿನೇ ರಾಜ್ಯದಲ್ಲಿ ಮಹಿಳೆ ಮತ್ತು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಅತ್ಯಾಚಾರ ತಡೆಯಲು ಕಠಿಣ ಕಾನೂನು ಕ್ರಮ ಅಗತ್ಯವಿದೆ. ಮಹಿಳೆ, ಮಕ್ಕಳ ಹಿತರಕ್ಷಣೆಗಾಗಿ ವಿಶೇಷ ತಂಡ ರಚಿಸಿ ಸದಾ ಕಾರ್ಯತತ್ಪರವಾಗಿರುವಂತೆ ಜಾಗೃತಗೊಳಿಸಬೇಕು. ಅತ್ಯಾಚಾರಿ ಆರೋಪಿಗಳಿಗೆ ತ್ವರಿತ ಕಠಿಣ ಶಿಕ್ಷೆ ಜಾರಿಯಾಗಬೇಕು ಎಂದು ಒತ್ತಾಯಿಸಿದರು. ಮನವಿ ಸಲ್ಲಿಸುವಲ್ಲಿ ಶಿವಂ ಚಾರಿಟೇಬಲ್ ಟ್ರಸ್ಟ್‌ನ ಪದಾಧಿಕಾರಿಗಳಾದ ಗಾಯತ್ರಿ, ಲಲಿತಾ, ಕೃಷ್ಣವೇಣಿ, ಚಾಮುಂಡೇಶ್ವರಿ, ಸರಸ್ವತಿ, ಮಂಜುಳಾ ಇತರರಿದ್ದರು. 


ಸುದ್ದಿ ಓದಿ