ಬೈಲಹೊಂಗಲ

ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಲಿ: ನೆಲ್ಲಿಗನಿ

ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಲಿ: ನೆಲ್ಲಿಗನಿ

ಲೋಕದರ್ಶನ ವರದಿ 


ಬೈಲಹೊಂಗಲ 27: ಪಟ್ಟಣದ ಗುರುದೇವ ವಿದ್ಯಾವರ್ಧಕ ಸಂಘದ ಬಾಪೂಜಿ ಕಲಾ ಮತ್ತು ವಾಣಿಜ್ಯ ಪದವಿ,ಪದವಿ ಪೂರ್ವ ಮಹಾವಿದ್ಯಾಲಯದ 2021-22 ನೇ ಸಾಲಿನ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳ ಬಹುಮಾನ ವಿತರಣಾ ಸಮಾರಂಭ ಶುಕ್ರವಾರ ಮಹಾವಿದ್ಯಾಲಯದಲ್ಲಿ ಜರುಗಿತು. 

      ಮೂಗಬಸವ  ಸರ್ಕಾರಿ ಪ್ರೌಡಶಾಲೆಯ ದೈಹಿಕ ಶಿಕ್ಷಕ ನಾಗರಾಜ ನೆಲ್ಲಿಗನಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಜೀವನ ಮೌಲ್ಯಗಳನ್ನು ಆಳವಡಿಸಿಕೊಳ್ಳಬೇಕು. ಎಲ್ಲಾ ವಿದ್ಯಾರ್ಥಿಗಳು ಸಮಾಜದ ಉತ್ತಮ ಪ್ರಜೆಗಳಾಗಬೇಕು, ತಮ್ಮ ಕಾಲೇಜಿಗೆ ಉತ್ತಮ ಫಲಿತಾಂಶವನ್ನು ನೀಡಿ, ಒಳ್ಳೆಯ ಜೀವನ ರೂಪಿಸಿಕೊಳ್ಳುವಲ್ಲಿ ಯಶಸ್ವಿಯಾಗಬೇಕು ಎಂದರು.  

 ಶಿಕ್ಷಕ ಸುರೇಶ ಸೂರ್ಯವಂಶಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಬದ್ದತೆ ಜಾಗೃತಗೊಳಿಸುವ ಕೆಲಸ ಮಾಡಿದಾಗ ಮಾತ್ರ ಅವರು ತಮ್ಮ ಜೀವನ ಸಾರ್ಥಕಪಡಿಸಿಕೊಳ್ಳಬಹುದು ಎಂದರು. 

      ಪ್ರಾಚಾರ್ಯ ಎಂ.ಬಿ.ಯಕ್ಕುಂಡಿ, ಆಡಳಿತಾಧಿಕಾರಿ ಎಸ್‌.ಡಿ.ಹೊಸಮನಿ, ಉಪನ್ಯಾಸಕರಾದ ಎಚ್‌.ಎಂ.ಗೋರವನಕೊಳ್ಳ, ಜಿ.ಎಸ್‌.ಬೊಳನ್ನವರ, ವಿದ್ಯಾರ್ಥಿ ಪತಿನಿಧಿಗಳಾದ ನಾಗರತ್ನಾ ನಂದಿಹಳ್ಳಿ, ರಾಹುಲ ಲಮಾಣಿ ಇದ್ದರು.  

      ಸಂಸ್ಥೆಯ ಅಧ್ಯಕ್ಷೆ ರಾಜೇಶ್ವರಿ ಯರಡ್ಡಿ ಅಧ್ಯಕ್ಷತೆ ವಹಿಸಿದ್ದರು. 

        ವಿವಿಧ  ಸಾಂಸ್ಕೃತಿಕ, ಕ್ರೀಡಾ ಚಟುವಟಿಕಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು. 


ಸುದ್ದಿ ಓದಿ