ಗದಗ

ಹಿರಿಯರ ಅನುಭವವನ್ನು ಯುವ ಪೀಳಿಗೆ ಅಳವಡಿಸಿಕೊಳ್ಳಲಿ: ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ

ಹಿರಿಯರ ಅನುಭವವನ್ನು ಯುವ ಪೀಳಿಗೆ ಅಳವಡಿಸಿಕೊಳ್ಳಲಿ: ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ


ಗದಗ, ಅ. 01: ದೀರ್ಘಾಯುಷ್ಯ ಹಾಗೂ ಆರೋಗ್ಯಕರ ಜೀವನಕ್ಕಾಗಿ ಪ್ರತಿಯೊಬ್ಬರೂ ತಮ್ಮ ದಿನನಿತ್ಯದ ಜೀವನಕ್ರಮವನ್ನು ಮರುಚಿಂತನೆ ಮಾಡುವುದು ಅಗತ್ಯ. ಹಿರಿಯರ ಜೀವನಾನುಭವಗಳನ್ನು ಯುವ ಪೀಳಿಗೆ ಅಳವಡಿಸಿಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ ಹೇಳಿದರು.  


ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಅ. 1ರಂದು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಸ್ವಯಂಸೇವಾ ಸಂಘ-ಸಂಸ್ಥೆಗಳು ಹಾಗೂ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘಗಳ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2026 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.  


ಮನುಷ್ಯನ ವಯಸ್ಸು ಹೆಚ್ಚಾದಂತೆ ಅನುಭವವೂ ಹೆಚ್ಚಾಗುತ್ತದೆ. ಅನುಭವಕ್ಕೆ ಯಾವುದೇ ಪರ್ಯಾಯವಿಲ್ಲ. ಹಿರಿಯರು ತಮ್ಮ ಜೀವನದಲ್ಲಿ ಕಲಿತ ಅನುಭವಗಳನ್ನು ಕಿರಿಯರೊಂದಿಗೆ ಹಂಚಿಕೊಂಡರೆ ಸಮಾಜದಲ್ಲಿನ ಹಲವು ತಪ್ಪುಗಳನ್ನು ಕಡಿಮೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಹೇಳಿದರು.  


ಪ್ರಸ್ತುತ ದಿನಗಳಲ್ಲಿ ಸಣ್ಣ ಹಾಗೂ ವಿಭಕ್ತ ಕುಟುಂಬಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಹಿರಿಯರನ್ನು ನಿರ್ಲಕ್ಷಿಸುವ ಪ್ರವೃತ್ತಿಯೂ ಕಂಡುಬರುತ್ತಿದೆ. ಹಿರಿಯರೊಂದಿಗೆ ಸಮಯ ಕಳೆಯುವುದು ಹಾಗೂ ಅವರ ಅನುಭವವನ್ನು ಅಳವಡಿಸಿಕೊಳ್ಳುವುದು ಕುಟುಂಬ ವ್ಯವಸ್ಥೆ ಮತ್ತು ಹಿರಿಯರ ಹಿತದೃಷ್ಟಿಯಿಂದ ಅತ್ಯಂತ ಅಗತ್ಯವಾಗಿದೆ ಎಂದರು.  


ಸುದ್ದಿ ಓದಿ