ಯುವಪೀಳಿಗೆ ಸಾಹಿತ್ಯ ಕ್ಷೇತ್ರದತ್ತ ಆಸಕ್ತಿ ಬೆಳೆಸಿಕೊಳ್ಳಲಿ: ಶಾಸಕ ಅಶೋಕ ಮನಗೂಳಿ
Let the younger generation develop an interest in the field of literature: MLA Ashok Managuli
ಲೋಕದರ್ಶನ ವರದಿ
ಸಿಂದಗಿ 21: ಯುವಪೀಳಿಗೆ ಸಾಹಿತ್ಯ ಕ್ಷೇತ್ರದತ್ತ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವಿಗೆ ಕೈಜೋಡಿಸಬೇಕು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ನಗರದ ಎಚ್.ಜಿ.ಪಿ. ಪದವಿ ಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಆಯೋಜಿಸಿದ್ದ 21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ನಾಡು-ನುಡಿ, ನೆಲ, ಜಲ, ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆಯಲ್ಲಿ ಸಾಹಿತ್ಯ ಸಮ್ಮೇಳನಗಳ ಪಾತ್ರ ಮಹತ್ವದ್ದಾಗಿದೆ. ಹಿರಿಯ ಸಾಹಿತಿಗಳ ಚಿಂತನೆ ಮತ್ತು ಸಂದೇಶಗಳನ್ನು ಜನರಿಗೆ ತಲುಪಿಸುವಲ್ಲಿ ಇಂತಹ ಸಮ್ಮೇಳನಗಳು ಪರಿಣಾಮಕಾರಿ ವೇದಿಕೆಯಾಗಿವೆ ಎಂದು ಹೇಳಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವೈ.ಸಿ. ಮಯೂರ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳನವು ಕನ್ನಡಿಗರ ಸಾಂಸ್ಕೃತಿಕ ಹಬ್ಬವಾಗಿದ್ದು, ಭಾಷೆಯ ಮೇಲಿನ ಅಭಿಮಾನವನ್ನು ಬೆಳೆಸುವ ವೇದಿಕೆಯಾಗಿದೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ್ ವಾಲೀಕಾರ ಮಾತನಾಡಿ, ಸಾಹಿತ್ಯವು ಸಮಾಜದ ಪ್ರತಿಬಿಂಬವಾಗಿದ್ದು, ಗ್ರಾಮೀಣ ಬದುಕಿನ ಮೌಲ್ಯಗಳನ್ನು ಜನರಿಗೆ ತಲುಪಿಸುವ ಶಕ್ತಿಯಾಗಿದೆ ಎಂದು ಹೇಳಿದರು. ಸಮ್ಮೇಳನದ ಸರ್ವಾಧ್ಯಕ್ಷ ಹ.ಮ. ಪೂಜಾರ ಮಾತನಾಡಿ, ಉತ್ತಮ ಸಾಹಿತ್ಯವು ಸಮಾಜಕ್ಕೆ ಸಂಸ್ಕಾರ, ಮೌಲ್ಯಗಳು ಮತ್ತು ಮಾನವೀಯತೆಯನ್ನು ಬೆಳೆಸುತ್ತದೆ. ಮಕ್ಕಳಲ್ಲಿ ಓದುವ ಅಭ್ಯಾಸ ಮತ್ತು ಮಾತೃಭಾಷೆಯ ಬಗ್ಗೆ ಅಭಿಮಾನ ಮೂಡಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ಗುರುದೇವಾಶ್ರಮದ ಶಾಂತಗಂಗಾಧರ ಸ್ವಾಮೀಜಿ, ಶ್ರೀಮಾತಾ ಯೋಗೇಶ್ವರಿ ಮಾತಾಜಿ, ಡಾ. ಸಂದೀಪ್ ಪಾಟೀಲ, ಅಶೋಕ ಗಾಯಕವಾಡ, ಮಹಾಂತೇಶ ಪಟ್ಟಣಶೆಟ್ಟಿ, ಸಂತೋಷ ಸಾಲಿ, ಅಶೋಕ ಕೊಳಾರಿ, ಹನುಮಂತ ಸುಣಗಾರ, ಡಾ. ಮಾಧವ ಗುಡಿ, ಶಿಲ್ಪಾ ಭಸ್ಮೆ, ಅಭಿಷೇಕ ಚಕ್ರವರ್ತಿ, ಸುನಂದಾ ಯಂಪೂರೆ, ಆನಂದ ಶಾಬಾದಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ವಿವಿಧ ವಾದ್ಯಮೇಳಗಳೊಂದಿಗೆ ಭವ್ಯ ಮೆರವಣಿಗೆ ನಡೆಸಿ ಸಮ್ಮೇಳನಕ್ಕೆ ಚಾಲನೆ ನೀಡಲಾಯಿತು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 