ಸಿಂಧಗಿ

ವ್ಯಸನ ಮುಕ್ತ ಸಮಾಜ ನಿರ್ಮಾಣ ಯುವಕರ ಧ್ಯೇಯವಾಗಲಿ

ವ್ಯಸನ ಮುಕ್ತ ಸಮಾಜ ನಿರ್ಮಾಣ ಯುವಕರ ಧ್ಯೇಯವಾಗಲಿ

ಸಿಂದಗಿ: ದುಶ್ಚಟಗಳು ವ್ಯಕ್ತಿಯ ಬದುಕು, ಕುಟುಂಬ ಮಾತ್ರವಲ್ಲದೆ ಸಮಾಜದ ಮೇಲೂ ನೇರ ಪರಿಣಾಮ ಬೀರುತ್ತದೆ.ಮಾದಕ ವಸ್ತು ಸೇವನೆ ವ್ಯಕ್ತಿಯ ಮೆದುಳು, ದೈಹಿಕ, ಮಾನಸಿಕ ಆರೋಗ್ಯ ಹಾಗೂ ಸಾಮಾಜಿಕ ಬದುಕಿಗೂ ಮಾರಕವಾಗಿದೆ ಎಂದು ಘಟಪ್ರಭಾ ಬ್ರಹ್ಮಕುಮಾರಿ ಸೇವಾ ಕೇಂದ್ರದ ರಾಜಯೋಗಿನಿ ಜ್ಯೋತಿ ಹೇಳಿದರು, 

    ನಗರದ ವೈಷ್ಣವಿ ಆಸ್ಪತ್ರೆಯಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ವೈಷ್ಣವಿ ಸಮಗ್ರ ವ್ಯಸನಮುಕ್ತಿ ಮತ್ತು ಪುನರ್ವಸತಿ ಕೇಂದ್ರ ಇವರ ಸಹಯೋಗದಲ್ಲಿ ನಡೆದ ಎಸ್ಸನ ಮುಕ್ತ ಮತ್ತು ಪುನಶ್ಚೇತನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ’ವ್ಯಸನ ಮುಕ್ತ ಸಮಾಜ ನಿರ್ಮಾಣ ಯುವಕರ ಧ್ಯೇಯವಾಗಲಿ ಎಂದರು,  

          ವೈಷ್ಣವಿ ಆಸ್ಪತ್ರೆ ವೈದ್ಯ ಡಾಕ್ಟರ್ ಮಂಜುಳಾ ಮುರಡಿ ಮಾತನಾಡಿದ ಮಾದಕ ವಸ್ತುಗಳ ಸೇವನೆಯಿಂದ ಶರೀರದಲ್ಲಿ ಉಂಟಾಗುವ ಬದಲಾವಣೆ ಹಾಗೂ ದುಷ್ಪ್ರಭಾವವನ್ನು ಸರಳ ಪ್ರಯೋಗದಿಂದ ತಿಳಿಯಬಹುದಾಗಿದೆ. ಆರಂಭದಲ್ಲಿ ಕುತೂಹಲ ಅಥವಾ ಸ್ನೇಹಿತರ ಒತ್ತಡದಿಂದ ತೊಡಗುವ ಮದ್ಯ ಅಥವಾ ಕಡಿಮೆ ಬೆಲೆಗೆ ಸಿಗುವ ಪಾನ್ ವಸ್ತುಗಳ ಸೇವನೆ ಕೊನೆಗೆ ಮಾರಕ ಗಾಂಜಾ, ಅಫೀಮು, ಕೊಕೇನ್ ದಾಸರನ್ನಾಗಿಸುತ್ತದೆ. ಮಿದುಳಿನಲ್ಲಿ ಬದಲಾವಣೆ ತಂದು ಇನ್ನಷ್ಟು ಸೇವಿಸುವಂತೆ ಪ್ರೇರೇಪಿಸಿ ಕೊನೆಗೆ ವ್ಯಸನಿಗಳನ್ನಾಗಿಸುತ್ತದೆ. ಅಪರಾಧ ಕೃತ್ಯಗಳಿಗೆ ಪ್ರಚೋದನೆ ನೀಡುವ ವ್ಯಸನ ಅಪಘಾತಗಳಿಗೂ ಕಾರಣವಾಗುವುದು. ಮಾದಕ ದ್ರವ್ಯಗಳನ್ನು ವಿತರಿಸುವ ಜಾಲವನ್ನೂ ಮಟ್ಟಹಾಕಲು ಕಾನೂನಿನೊಂದಿಗೆ ಸಹಕರಿಸುವುದು, ಮಾದಕ ವಸ್ತುಗಳನ್ನು ಬಳಸುತ್ತಿರುವವರಿಗೆ ಅವುಗಳ ಮಾರಕ ಪರಿಣಾಮದ ಕುರಿತು ತಿಳುವಳಿಕೆ ನೀಡಿ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಹಾಗೂ ಯುವ ಜನತೆ ಮುಂದಾಗಬೇಕು ಎಂದರು. 

         ರಾಜಯೋಗಿನಿ ಅಶ್ವಿನಿ ಮಾತನಾಡಿ, ಅಮಲು ಪದಾರ್ಥ ಸೇವನೆ ಇಂದಿನ ಯುವ ಜನಾಂಗದಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವುದು ಆತಂಕ ಮೂಡಿಸುತ್ತಿದ್ದು, ಈ ದೃಷ್ಟಿಯಿಂದ ಇಂತಹ ತಿಳುವಳಿಕಾ ತರಗತಿಗಳು ಪ್ರಯೋಜನಕಾರಿ ಎಂದರು. 

          ನಗರದ ಪ್ರಜಾಪಿತ ಬ್ರಹ್ಮ ಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಚಾಲಕಿ ಪವಿತ್ರಾಜಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಮಲು ಸೇವನೆ ಒಂದು ರೀತಿಯ ಫ್ಯಾಷನ್ ಎಂಬುದಾಗಿ ತಿಳಿದ ಯುವಕರು ಮಾದಕ ವಸ್ತುಗಳತ್ತ ಆಕರ್ಷಿತರಾಗಿ ನಿರಂತರ ಉಪಯೋಗಕ್ಕೆ ತೊಡಗುತ್ತಾರೆ. ಇಂತಹ ತಿಳುವಳಿಕಾ ತರಗತಿ ಆಯೋಜನೆಯಿಂದ ಜಾಗೃತಿ ಮೂಡಿಸಲು ಸಾಧ್ಯ.ಜೀವನದ ಗುರಿ ಹಾಗೂ ಹಾದಿ ತಪ್ಪಿಸುವ ಮಾದಕ ವ್ಯಸನ ಹಾಗೂ ವ್ಯಸನಿಗಳಿಂದ ದೂರವಿದ್ದು ಉತ್ತಮ ಹವ್ಯಾಸಗಳನ್ನು ಬೆಳೆಸಿ ಉತ್ತಮ ಭವಿಷ್ಯ ರೂಪಿಸುವಂತೆ ಕರೆ ನೀಡಿದರು. 

 ರಾಜಯೋಗಿನಿ ಪಾರ್ವತಿ ಮತ್ತು ವೀಣಾ ಅಕ್ಕನವರು ಮತ್ತು ಮನೋಹರ ಮಾತನಾಡಿದರು. 

     ಈ ಸಂದರ್ಭದಲ್ಲಿ ಎಸ್ ಎಸ್ ಬುಳ್ಳಾ, ಕೆ ಎಸ್ ಪತ್ತಾರ, ಎಸ್ ವೈ ಬಿರಾದಾರ, ಸಿದ್ದು ಮುರಡಿ, ಶಾಲಿನಿ ಮಠ ಹಾಜಿ ನದಾಫ, ಹಣಮಂತ, ಶಿವನಗೌಡ, ಅಜಬರ, ಅವಿನಾಶ, ಬೀರ​‍್ಪ ಪೂಜಾರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 


ಸುದ್ದಿ ಓದಿ