ಗಾಂಧೀಜಿ ವಿಚಾರಗಳನ್ನು ಯುವಜನತೆ ಅಳವಡಿಸಿಕೊಳ್ಳಲಿ: ಬಸವರಾಜ
ಹಾವೇರಿ, ಅ. 2: ನಗರದ ಗಾಂಧಿ ವೃತ್ತದಲ್ಲಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್‌ಐ) ಹಾವೇರಿ ಜಿಲ್ಲಾ ಸಮಿತಿಗಳ ವತಿಯಿಂದ ಮಹಾತ್ಮ ಗಾಂಧೀಜಿ ಜಯಂತಿ ಆಚರಿಸಲಾಯಿತು.
ಗಾಂಧೀಜಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಡಿವೈಎಫ್‌ಐ ಅಖಿಲ ಭಾರತ ಸದಸ್ಯ ಬಸವರಾಜ ಪೂಜಾರ, ಗಾಂಧೀಜಿ ಸ್ವಾತಂತ್ರ್ಯ ಹೋರಾಟಕ್ಕೆ ಮಾತ್ರ ಸೀಮಿತರಾಗದೆ ಸಮಾಜಕ್ಕೆ ಹಲವು ಮಾನವೀಯ ಮೌಲ್ಯಗಳನ್ನು ನೀಡಿದ್ದಾರೆ. ಅವರ ಮಾನವೀಯತೆ ಮತ್ತು ಸೌಹಾರ್ದತೆಯ ಆಶಯಗಳನ್ನು ಇಂದಿನ ಯುವಜನತೆ ಅಳವಡಿಸಿಕೊಳ್ಳಬೇಕು ಎಂದರು.