ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ -ನ್ಯಾಯಾಧೀಶರಾದ ಶ್ರೀಶೈಲಜಾ ಎಚ್.ವಿ.
Let us all work towards the elimination of child labor - Justice Srishailaja H.V.
ಲೋಕದರ್ಶನ ವರದಿ
ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಹಾವೇರಿ 12 : ಬಾಲ ಕಾರ್ಮಿಕರನ್ನು ಕೆಲಸಕ್ಕೆ ತೊಡಗಿಸಿಕೊಳ್ಳುವುದು ಅಪರಾಧವಾಗಿದೆ. ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಶ್ರಮಿಸೋಣ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶ್ರೀಶೈಲಜಾ ಎಚ್.ವಿ. ಅವರು ಹೇಳಿದರು.
ನಗರದ ಸರ್.ಎಂ.ವಿಶ್ವೇಶ್ವರಯ್ಯ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶುಕ್ರವಾರ ಜಿಲ್ಲಾ ನ್ಯಾಯಾಂಗ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ನಿಷೇಧ ಕಾಯ್ದೆ ಕುರಿತು ವಿದ್ಯಾರ್ಥಿ ಹಂತದಲ್ಲೇ ತಿಳಿದುಕೊಳ್ಳಬೇಕು ಹಾಗೂ ಇತರರಿಗೂ ತಿಳುವಳಿಕೆ ನೀಡಬೇಕು. ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಬಾಲ್ಯವಿವಾಹ ನಿಷೇಧ, ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಕಾಯ್ದೆಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದರೂ ಸಹ ಬಾಲ್ಯ ವಿವಾಹ, ಬಾಲಗರ್ಭಿಣಿಯರು ಹಾಗೂ ಪೋಕ್ಸೋ ಪ್ರಕರಣಗಳು ಜಿಲ್ಲೆಯಲ್ಲಿ ಕಂಡುಬರುತ್ತಿರುವುದು ವಿಷಾಧಕರ ಸಂಗತಿಯಾಗಿದೆ ಎಂದರು.
ನಿಮ್ಮ ಸುತ್ತಮುತ್ತ ಬಾಲಕಾರ್ಮಿಕರು ಕಂಡುಬಂದರೆ ಮಕ್ಕಳ ಸಹಾಯವಾಣಿ ಸಂಖ್ಯೆ 1098ಗೆ ಅಥವಾ 112ಗೆ ಕರೆಮಾಡಿ ಮಾಹಿತಿ ನೀಡಬೇಕು. ಮಕ್ಕಳು ಬಾಲ್ಯದಲ್ಲಿ ಶಿಕ್ಷಣ ಪಡೆಯುವುದರ ಜೊತೆಗೆ ಭಾರತ ದೇಶದ ಉತ್ತಮ ಪ್ರಜೆಗಳಾಗಬೇಕು. ವಿದ್ಯಾರ್ಥಿಗಳು ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು. ಪರಿಸರ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಅವರು ಮಾತನಾಡಿ, ನಿಮ್ಮ ತಂದೆ-ತಾಯಿ ನಿಮ್ಮನ್ನು ಓದಲಿಕ್ಕೆ ಕಳಿಸಿದ್ದಾರೆ, ನಿವೇ ಅದೃಷ್ಟವಂತರು. ಆದರೆ ಕೆಲವು ಮಕ್ಕಳು ಬಡತನ, ಅನಕ್ಷರತೆ ಹಾಗೂ ತಬ್ಬಲಿ(ತಂದೆ-ತಾಯಿ ಇಲ್ಲದ) ಹೀಗೆ ಹಲವಾರು ಕಾರಣಗಳಿಂದ ದುಡಿಯಲು ಹೋಗುವುದರಿಂದ ಶಿಕ್ಷಣದಿಂದ ವಂಚಿತರಾಗುತ್ತಾರೆ. ಚಿಂದಿ ಆಯುವುದು, ಹೋಟಲ್, ತರಕಾರಿ ಮಾರಾಟ ಮಾಡುವುದು ಹೀಗೆ ಹಲವಾರು ಕೆಲಸಗಳನ್ನು ಮಾಡುತ್ತಾರೆ. ಇಂತಹ ಮಕ್ಕಳು ಕಂಡುಬಂದರೇ ಕೂಡಲೇ ಮಕ್ಕಳ ಸಹಾಯವಾಣಿಗೆ ಕರೆ ಮಾಡಬೇಕು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಅಂತ ಮಕ್ಕಳನ್ನು ರಕ್ಷಿಸುತ್ತಾರೆ ಎಂದು ಹೇಳಿದರು.
ಮಕ್ಕಳು ಹೊರಗೆ ಹೋಗಿ ದುಡಿಯುವುದು ಅಪರಾಧ ಆದರೆ, ಮನೆ ಕೆಲಸ ಮಾಡಬಹುದು. ಸರ್.ಎಂ.ವಿಶ್ವೇಶ್ವರಯ್ಯನವರು ಸೇರಿದಂತೆ ಹಲವಾರು ಮಹನೀಯರು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದ ಉದಾಹರಣೆಗಳಿವೆ. ಶಿಕ್ಷಣದಿಂದ ಮಹತ್ವದ ಬದಲಾವಣೆ ಸಾಧ್ಯ, ಮಕ್ಕಳು ಬಾಲ್ಯಾವಸ್ಥೆಯಲ್ಲಿ ತಮ್ಮ ಹಕ್ಕುಗಳನ್ನು ಪಡೆಯುವ ಜೊತೆಗೆ ಶಿಕ್ಷಣವಂತರಾಗಿ ಉತ್ತಮ ಬದುಕು ಕಟ್ಟಿಕೊಳ್ಳಬೇಕು. ಪೋಷಕರು ತಮ್ಮ ಮಕ್ಕಳನ್ನು ಕೆಲಸಕ್ಕೆ ಕಳಿಸದೇ ಶಾಲೆಗೆ ದಾಖಲಿಸುವ ಮೂಲಕ ಅವರಿಗೆ ಉಜ್ವಲ ಭವಿಷ್ಯ ಕಟ್ಟಿಕೊಡಬೇಕು ಎಂದು ಸಲಹೆ ನೀಡಿದರು.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 