ಏರೋ ಇಂಡಿಯಾ ಸ್ಥಳಾಂತರಿಸದಂತೆ ಕನರ್ಾಟಕ ಕಾಂಗ್ರೆಸ್ನಿಂದ ಪತ್ರ
ಬೆಂಗಳೂರು,ಅ.08 :ಬೆಂಗಳೂರಿನಲ್ಲಿ ನಡೆಯಬೇಕಿದ್ದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಸ್ಥಳಾಂತರ ಯತ್ನಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯ ಕಾಂಗ್ರೆಸ್ ಪತ್ರ ಬರೆದಿದ್ದು, ಕೂಡಲೇ ಏರೋ ಇಂಡಿಯಾ ಸ್ಥಳಾಂತರ ಪ್ರಯತ್ನ ನಿಲ್ಲಿಸುವುದಾಗಿ ಘೋಷಿಸಬೇಕೆಂದು ಆಗ್ರಹಿಸಿದೆ.
ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ರಕ್ಷಣಾ ಸಚಿವರಿಗೆ ಪತ್ರ ಬರೆದಿದ್ದು, ಬೆಂಗಳೂರಿನಲ್ಲಿ ನಡೆಯಬೇಕಿರುವ ಏರೋ ಇಂಡಿಯಾ ವೈಮಾನಿಕ ಪ್ರದರ್ಶನ ಸ್ಥಳಾಂತರ ಯತ್ನ, ನಗರದ ಹೆಚ್ಎಎಲ್ನಿಂದ ರಫೇಲ್ ಯುದ್ಧ ವಿಮಾನ ಒಪ್ಪಂದ ಕಸಿದುಕೊಂಡು ಉದ್ಯಮಿಗೆ ನೀಡಿದ್ದು, ಸಿಆರ್ಪಿಎಫ್ ಕೇಂದ್ರವನ್ನು ಉತ್ತರಪ್ರದೇಶಕ್ಕೆ ನೀಡಿದ್ದು ಸೇರಿದಂತೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ರಾಜ್ಯಕ್ಕೆ ಸಾಕಷ್ಟು ಅನ್ಯಾಯ ಮಾಡಿದ್ದಾರೆಂದು ಆರೋಪಿಸಿದ್ದಾರೆ.
ಅಲ್ಲದೆ, ಕನರ್ಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಸೀತಾರಾಮನ್ ಅವರು ಕೂಡಲೇ ಏರೋ ಇಂಡಿಯಾ ಸ್ಥಳಾಂತರ ಪ್ರಯತ್ನ ನಿಲ್ಲಿಸುವುದಾಗಿ ಘೋಷಣೆ ಮಾಡಬೇಕು. ಈ ಬಗ್ಗೆ ರಕ್ಷಣಾ ಸಚಿವರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಏರೋ ಇಂಡಿಯಾ ಅತ್ಯಂತ ಪ್ರತಿಷ್ಠಿಕ ಕಾರ್ಯಕ್ರಮವಾಗಿದ್ದು, ಇಡೀ ವಿಶ್ವದ ಜನತೆಯ ಕಣ್ಮನವನ್ನು ಸೆಳೆಯುತ್ತಿದೆ. ಕಾರ್ಯಕ್ರಮ ಆಯೋಜಿಸಲು ಬೆಂಗಳೂರು ಬಿಟ್ಟರೆ ಬೇರಾವುದೇ ಅತ್ಯುತ್ತಮ ಸ್ಥಳಗಳಿಲ್ಲ. ಕನರ್ಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನೀವು ರಾಜ್ಯಕ್ಕೆ ಏನನ್ನು ನೀಡಿದ್ದೀರಿ? ರಾಜ್ಯಕ್ಕೆ ಕೊಡುಗೆಗಳನ್ನು ನೀಡುವ ಬದಲಿಗೆ ಇಲ್ಲಿರುವುದನ್ನೇ ಇದರೆಡೆಗೆ ಸ್ಥಳಾಂತರ ಮಾಡುತ್ತಿದ್ದೀರಿ.
ಸೀತಾರಾಮನ್ ಅವರು ಮೊದಲು ರಾಜ್ಯದ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಅವರು, ರೈತರ ಸಾಲ ಮನ್ನಾ ಮಾಡುವ ಕುರಿತು ಕೈಜೋಡಿಸಲು ಬಿಜೆಪಿ ನಿರಾಕರಿಸುತ್ತಿದೆ. ಮಹದಾಯಿ ವಿಚಾರದಲ್ಲಿ ಮಧ್ಯೆ ಪ್ರವೇಶ ಮಾಡುತ್ತಿಲ್ಲ. ಇದರಿಂದ 15ನೇ ವೇತನ ಆಯೋಗ ಜಾರಿಗೆ ಸಮಸ್ಯೆಯಾಗುತ್ತಿದೆ. ಕೇಂದ್ರ ಮೋದಿ ನೇತೃತ್ವದ ಸಕರ್ಾರ ಏಕಪಕ್ಷೀಯವಾಗಿ ವತರ್ಿಸುತ್ತಿದೆ. ಸಿಆರ್ಪಿಎಫ್ ಕೇಂದ್ರವನ್ನು ಉತ್ತರಪ್ರದೇಶಕ್ಕೆ ಸ್ಥಳಾಂತರ ಮಾಡಿದ ಕೇಂದ್ರ, ಇದೀಗ ಏರೋ ಇಂಡಿಯಾವನ್ನು ಉತ್ತರಪ್ರದೇಶಕ್ಕೆ ಸ್ಥಳಾಂತರ ಮಾಡಲು ಯತ್ನಿಸುತ್ತಿದೆ. ರಫೇಲ್ ಒಪ್ಪಂದವನ್ನೂ ಹೆಚ್ಎಎಲ್ ನಿಂದ ಕಿತ್ತುಕೊಂಡಿದ್ದರು. ಇದೀಗ ಏರೋ ಇಂಡಿಯಾ ಕಸಿಯಲು ಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 