ಲೋಕ್ ಅದಾಲತ್‌ನಲ್ಲಿ ವಕೀಲರ ಸಂಘದ ಕಾರ್ಯ ಮೆಚ್ಚಿ ಹೈಕೋರ್ಟ್‌ ನ್ಯಾಯಾಧೀಶರಿಂದ ಮೆಚ್ಚುಗೆ ಪತ್ರ

ಕೊಪ್ಪಳ ಏಪ್ರಿಲ್ 6: ಕಳೆದ ಮಾರ್ಚ್‌ ತಿಂಗಳಿನಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರು ಮತ್ತು ಸದಸ್ಯರುಗಳು ನೀಡಿದ ಸಹಕಾರದೊಂದಿಗೆ ಹೆಚ್ಚಿನ ಪ್ರಕರಣಗಳು ಇತ್ಯರ್ಥವಾಗಲು ಸಾಧ್ಯವಾಗಿದ್ದು, ಈ ಬಗ್ಗೆ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ಕೆ.ಸೋಮಶೇಖರ್ ಅವರು ನೀಡಿದ ಮೆಚ್ಚುಗೆ ಪತ್ರವನ್ನು ಏಪ್ರಿಲ್ 03 ರಂದು ಕೊಪ್ಪಳ ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಸಿ. ಚಂದ್ರಶೇಖರ್‌ರವರು ಕೊಪ್ಪಳ ಜಿಲ್ಲಾ ವಕೀಲರ ಸಂಘದ ಚುನಾವಣಾ ಅಧಿಕಾರಿಯಾಗಿರುವ ಸಿದ್ದರಾಮ ಆರ್‌. ಹಿರೇಮಠ್ ವಕೀಲರಿಗೆ ಮತ್ತು ಇತರೆ ಹಿರಿಯ ಸದಸ್ಯರಿಗೆ ಹಸ್ತಾಂತರಿಸಿದರು. 

ಕಳೆದ ಮಾರ್ಚ್‌ 16 ರಂದು ರಾಜ್ಯಾದ್ಯಂತ ನಡೆದ ಲೋಕ್ ಅದಾಲತ್‌ನಲ್ಲಿ ರಾಜ್ಯದ 24 ನ್ಯಾಯಾಲಯಗಳಲ್ಲಿ ಬಾಕಿ ಇದ್ದ 29,00,312 ಪ್ರಕರಣಗಳು ಇತ್ಯರ್ಥವಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 4,332 ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು ಇತ್ಯರ್ಥವಾಗಿವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ  ದೇವೇಂದ್ರ ಪಂಡಿತ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.