ಕೊಪ್ಪಳ

ದಿ 18 ರಂದು ಲಿಂಗಾಯತ ಮಹಾಸಭಾದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಸದಸ್ಯತ್ವ ಅಭಿಯಾನ ಸಮಾರಂಭ

ದಿ 18  ರಂದು ಲಿಂಗಾಯತ ಮಹಾಸಭಾದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಸದಸ್ಯತ್ವ ಅಭಿಯಾನ ಸಮಾರಂಭ

ಲೋಕದರ್ಶನ ವರದಿ 


ಕೊಪ್ಪಳ, ಅ.12: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ.) ಕೊಪ್ಪಳ ಜಿಲ್ಲಾ ಘಟಕ ಹಾಗೂ ಕುಷ್ಟಗಿ ತಾಲೂಕು ಘಟಕದ ವತಿಯಿಂದ ಕೊಪ್ಪಳ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಸದಸ್ಯತ್ವ ಅಭಿಯಾನ ಸಮಾರಂಭವು ದಿನಾಂಕ 18-ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಕುಷ್ಟಗಿಯ ಕೊಪ್ಪಳ ರಸ್ತೆಯಲ್ಲಿರುವ ಎನ್‌.ಸಿ.ಹೆಚ್‌. ಪ್ಯಾಲೇಸ್‌ನಲ್ಲಿ ಜರುಗಲಿದೆ ಎಂದು  ಸಂಘದ ಜಿಲ್ಲಾಧ್ಯಕ್ಷ ಕಳಕನಗೌಡ ಪಾಟೀಲ್ ಕಲ್ಲೂರು ತಿಳಿಸಿದ್ದಾರೆ,ಅವರು ಸೋಮವಾರ ನಗರದ ಪತ್ರಿಕಾ ಭವನ ದಲ್ಲಿ ಏರಿ​‍್ಡಸಿದ ಸುದ್ದಿಗೋಷ್ಠಿ ಯಲ್ಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಕಾರ್ಯಕ್ರಮದ ವಿವರಣೆ ನೀಡಿದರು,ಮುಂದುವರೆದು ಮಾತನಾಡಿ ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಮುಂಡರಗಿ   ಅನ್ನದಾನೇಶ್ವರ ಮಠ ಮತ್ತು ಕುಕನೂರಿನ ಶ್ರೀ ಮ.ನಿ.ಪ್ರ. ಸ್ವ. ಡಾ. ಮಹಾದೇವ ಸ್ವಾಮಿಗಳು ಹಾಗೂ ಮದ್ಧಾನಿ ಹಿರೇಮಠ ಕುಷ್ಟಗಿಯ ಶ್ರೀ ಷ.ಬ್ರ. 108 ಕರಿಬಸವ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ. ಕೊಪ್ಪಳ ಜಿಲ್ಲಾ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷರಾದ ಕಳಕನಗೌಡ ಪಾಟೀಲ ಕಲ್ಕೂರ ಅಧ್ಯಕ್ಷತೆ ವಹಿಸಲಿದ್ದಾರೆ. 

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು ಮತ್ತು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಈಶ್ವರ ಖಂಡ್ರೆ ಹಾಗೂ ಮಹಾಸಭಾದ ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾದ ಶ್ರೀಮತಿ ವೀಣಾ ವಿಜಯಾನಂದ ಕಾಶಪ್ಪನವರ ನೆರವೇರಿಸಲಿದ್ದಾರೆ. ಹಾನಗಲ್ ಶ್ರೀ ಕುಮಾರ ಮಹಾಸ್ವಾಮಿಗಳವರ ಭಾವಚಿತ್ರಕ್ಕೆ ರಾಜ್ಯ ಘಟಕದ ಅಧ್ಯಕ್ಷರಾದ ಶಂಕರ್ ಎಂ. ಬಿದರಿ, ಉನ್ನತ ಶಿಕ್ಷಣ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಬಸವರಾಜ ರಾಯರೆಡ್ಡಿ, ಮಹಿಳಾ ರಾಜ್ಯಾಧ್ಯಕ್ಷರಾದ ಶ್ರೀಮತಿ ಮುಕ್ತಾಂಬ ಬಿ., ಮಹಾಸಭಾದ ಉಪಾಧ್ಯಕ್ಷರು ಮತ್ತು ಮಾಜಿ ಸಚಿವರಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಶರಣ್ಣ ಮುನವಳ್ಳಿ, ಶ್ರೀನಿವಾಸ ರೆಡ್ಡಿ ಕೆ.ಬಿ., ಹಾಗೂ ಮುರುಗೇಶ ನಿರಾಣಿ ಪುಷ್ಪಾರ್ಚನೆ ಮಾಡಲಿದ್ದಾರೆ.ವಿಶೇಷ ಆಹ್ವಾನಿತರಾಗಿ ಮಾಜಿ ಸಂಸದರಾದ ಸಂಗಣ್ಣ ಕರಡಿ, ಶಿವರಾಮೇಗೌಡ, ಮಾಜಿ ಸಚಿವರಾದ ಹಾಲಪ್ಪ ಬಸಪ್ಪ ಆಚಾರ್, ಶಾಸಕರು, ಮಾಜಿ ಶಾಸಕರು, ವಿವಿಧ ಜನಪ್ರತಿನಿಧಿಗಳು ಹಾಗೂ ಮಹಾಸಭಾದ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಮುದಾಯದ ಮುಖಂಡರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕಾರ್ಯಕ್ರಮ ಸಂಘಟಕರಾದ ಮಹಾ ಸಭಾದ ಜಿಲ್ಲಾ ಅಧ್ಯಕ್ಷರಾದ ಕಳಕನಗೌಡ ಪಾಟೀಲ್ ಕಲ್ಲೂರು ಹೇಳಿದರು ,ಪತ್ರಿಕಾ ಗೋಷ್ಠಿ ಯಲ್ಲಿ  ಮಹಾ ಸಭಾ ದ ಪದಾಧಿಕಾರಿಗಳಾದ ಶಿವಪುತ್ರ​‍್ಪ ಕಾಡನ್ನವರ,ಲಲಿತಾ ಮ್ಯಾಗಳಮನಿ, ಶರಣಪ್ಪ ಹ್ಯಾಟಿ, ನಾಗಭೂಷಣ ಮತ್ತು ಶ್ರೀನಿವಾಸ ರೆಡ್ಡಿ ಸೇರಿದಂತೆ ಅನೇಕರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು, 


ಸುದ್ದಿ ಓದಿ