ಸಂಗೀತ ಆಲಿಸುವುದರಿಂದ ಮನಸ್ಸಿಗೆ ಶಾಂತಿ: ಕುಮಾರ್ ಕೆ.ಎಫ್.
Listening to music brings peace of mind: Kumar K.F.
ಲೋಕದರ್ಶನ ವರದಿ
ಧಾರವಾಡ 7: ಮನಸ್ಸನ್ನು ಸದಾ ಶಾಂತವಾಗಿರಿಸಿಕೊಳ್ಳಲು ಸಂಗೀತ ಆಲಿಸಬೇಕು ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ್ ಕೆ.ಎಫ್. ಹೇಳಿದರು. ಧಾರವಾಡ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ‘ಎನೇಬ್ಲಿಂಗ್ ಲೀಡರ್ಶಿಪ್’ ಸಂಸ್ಥೆ ಹಾಗೂ ಕೆ.ಎಲ್.ಇ. ಸಂಸ್ಥೆಯ ಶ್ರೀ ಮೃತ್ಯುಂಜಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಆಯೋಜಿಸಿದ್ದ ವಾರ್ಷಿಕ ಸಂಗೀತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತೀಯ ಸಂಗೀತಕ್ಕೆ ವಿಶಿಷ್ಟವಾದ ಮೌಲ್ಯವಿದ್ದು, ಅದು ಭಾರತೀಯ ಸಂಸ್ಕೃತಿಯನ್ನು ಬೆಳೆಸುವುದರ ಜೊತೆಗೆ ಆರೋಗ್ಯಕರ ಸಮಾಜ ನಿರ್ಮಾಣಕ್ಕೂ ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಅಕಾಡೆಮಿ ಡೀನ್ ಹಾಗೂ ಮಹಾಯೋಗಿ ವೇಮನ ಪೀಠದ ಸಂಯೋಜಕ ಡಾ. ಹೇಮರಡ್ಡಿ ನೀಲಗುಂದ ಮಾತನಾಡಿ, ಸಂಗೀತವು ಎಲ್ಲ ಜೀವಿಗಳನ್ನೂ ಆಕರ್ಷಿಸುವ ಶಕ್ತಿಯನ್ನು ಹೊಂದಿದೆ. ಸಂಗೀತದಲ್ಲಿ ಆಸಕ್ತಿ ಬೆಳೆದಂತೆ ವ್ಯಕ್ತಿತ್ವ ವಿಕಸನವೂ ಸಾಧ್ಯವಾಗುತ್ತದೆ ಎಂದರು.
ಮಹಾವಿದ್ಯಾಲಯದ ಪ್ರಾಚಾರ್ಯೆ ಎನ್.ಸಿ. ಪಾಟೀಲ, ಸಂಸ್ಥೆಯ ಸಂಯೋಜಕ ಮಾದೇವ ಬಾರಾಟಾಕೆ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ 740 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಕ್ಕಳ ಸೌಂಡ್ ಸ್ಕೇಪ್ ಪ್ರದರ್ಶನ ಹಾಗೂ ಸ್ವರಚಿತ ಹಾಡುಗಳು ಗಮನ ಸೆಳೆದವು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ನವೆಂಬರ್ನಲ್ಲಿ ನಡೆಯುವ ಪ್ರಾದೇಶಿಕ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 