ಸಾಕ್ಷರತೆಯಿಂದ ಸಮಾಜಕ್ಕೆ ಗೌರವ, ಸಮೃದ್ಧಿಗೆ ದಾರಿ
Literacy brings respect to society and paves the way for prosperity
ಲೋಕದರ್ಶನ ವರದಿ
ಹಾವೇರಿ 08: ಸಾಕ್ಷರತೆಯು ವ್ಯಕ್ತಿಯ ಜ್ಞಾನವನ್ನು ಹೆಚ್ಚಿಸುವುದರ ಜತೆಗೆ ಸಮಾಜದಲ್ಲಿ ಗೌರವವನ್ನು ತಂದುಕೊಡುತ್ತದೆ. ಪ್ರತಿಯೊಬ್ಬರೂ ಕಲಿತು, ತಮ್ಮ ಕುಟುಂಬ ಹಾಗೂ ಸಮಾಜವನ್ನು ಸಾಕ್ಷರಗೊಳಿಸುವುದು ಅಗತ್ಯ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಸದಸ್ಯ ಕಾರ್ಯದರ್ಶಿ ಬಿ.ಎಂ. ಬೇವಿನಮರದ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಮಂಗಳವಾರ ನಡೆದ 60ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಹಾಗೂ ಸಾಕ್ಷರತಾ ಪಾಕ್ಷಿಕ ಕಾರ್ಯಕ್ರಮ 2026-27ರಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು ವಿದ್ಯಾಭ್ಯಾಸದಿಂದ ವಿವಿಧ ಹುದ್ದೆಗಳಿಗೆ ತೆರಳುವವರಿಗೆ ಸಮಾಜ ಗೌರವ ನೀಡುತ್ತದೆ. ಆದ್ದರಿಂದ ಎಲ್ಲರನ್ನೂ ಸಾಕ್ಷರರನ್ನಾಗಿ ಮಾಡುವುದು ವಯಸ್ಕರ ಶಿಕ್ಷಣ ಇಲಾಖೆಯ ಕರ್ತವ್ಯ, ಕೆಲಸ ಮತ್ತು ಉದ್ದೇಶವಾಗಿದೆ ಎಂದರು.
ಸಾಕ್ಷರತಾ ದಿನಾಚರಣೆಯ ಅಂಗವಾಗಿ ನವಸಾಕ್ಷರರಿಗೆ ಹಾಗೂ ಸ್ವಯಂಸೇವಕ ಬೋಧಕರಿಗೆ ಅಭಿನಂದನಾ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಸಾಕ್ಷರತಾ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ನೌಕರರಿಗೆ ಹಾಗೂ ನಿವೃತ್ತಿ ಹೊಂದಿದ ರಾಜ್ಯ ಸಂಪನ್ಮೂಲ ವ್ಯಕ್ತಿಗಳಿಗೆ ಗೌರವ ಸಮರ್ಿಸಲಾಯಿತು. ಈ ಮೂಲಕ ಸಾಕ್ಷರತಾ ಚಳವಳಿಗೆ ಕೊಡುಗೆ ನೀಡಿದವರನ್ನು ಗುರುತಿಸಿ ಅವರ ಸೇವೆಯನ್ನು ಸ್ಮರಿಸಲಾಯಿತು.
ಸಂಪೂರ್ಣ ಸಾಕ್ಷರತಾ ಜಿಲ್ಲೆಯತ್ತ ಹಾವೇರಿ: ಹಾವೇರಿ ಜಿಲ್ಲೆ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗುವತ್ತ ಸಾಗುತ್ತಿದೆ ಎಂದು ತಿಳಿಸಿದ ಬಿ.ಎಂ. ಬೇವಿನ ಮರದ 2011ರಿಂದ ಈವರೆಗೆ ಜಿಲ್ಲೆಯಲ್ಲಿ ಸುಮಾರು ಮೂರು ಲಕ್ಷಕ್ಕೂ ಹೆಚ್ಚು ಜನರನ್ನು ಸಾಕ್ಷರರನ್ನಾಗಿ ಮಾಡಲಾಗಿದೆ ಎಂದರು.
ರಾಜ್ಯದಲ್ಲಿ ಶೇ.95ಕ್ಕಿಂತ ಹೆಚ್ಚಿನ ಸಾಕ್ಷರತೆ ಹೊಂದಿದ ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆ ಎಂದು ಘೋಷಿಸಲಾಗುತ್ತದೆ. ಈ ನಿಟ್ಟಿನಲ್ಲಿ ಹಾವೇರಿ ಜಿಲ್ಲೆ ಈಗಾಗಲೇ ಅಗತ್ಯ ಪ್ರಗತಿ ಸಾಧಿಸಿದ್ದು, ಅಧಿಕೃತ ಘೋಷಣೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 