ನೇರ ಫೋನ್-ಇನ್ ಕಾರ್ಯಕ್ರಮ: ಕ್ಯಾನ್ಸರ್ ಜಾಗೃತಿ
Live Phone-in Program: Cancer Awareness
ಲೋಕದರ್ಶನ ವರದಿ
ನೇರ ಫೋನ್-ಇನ್ ಕಾರ್ಯಕ್ರಮ: ಕ್ಯಾನ್ಸರ್ ಜಾಗೃತಿ
ಬೆಳಗಾವಿ 04: ಕೆಎಲ್‌ಇ ವೇಣುಧ್ವನಿ 90.4 ಎಫ್. ಎಮ್. ರೇಡಿಯೋ ಕೇಂದ್ರ ಬೆಳಗಾವಿ, ಕೆಎಲ್‌ಇ ಕ್ಯಾನ್ಸರ್ ಆಸ್ಪತ್ರೆ ಬೆಳಗಾವಿ ಮತ್ತು ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬುಧವಾರ ದಿ. 4ರಂದು ವಿಶ್ವ ಕ್ಯಾನ್ಸರ್ ದಿನ ಅಂಗವಾಗಿ ಕ್ಯಾನ್ಸರ್‌ಗೆ ಸಂಬಂಧಿಸಿದಂತೆ ಪ್ರಶ್ನೋತ್ತರ ಮೂಲಕ ಜಾಗೃತಿ ಮೂಡಿಸಲಾಯಿತು. ಕೆಎಲ್‌ಇ ಜವಾಹರಲಾಲ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಮತ್ತು ಕೆಎಲ್‌ಇ ಕ್ಯಾನ್ಸರ ಆಸ್ಪತ್ರೆಯ ತಜ್ಞ ವೈದ್ಯ ಡಾ. ಕುಮಾರ ವಿಂಚುರಕರ್ ಅವರು ಭಾಗವಹಿಸಿ ವಿಶ್ವ ಕ್ಯಾನ್ಸರ್ ದಿನದ ಇತಿಹಾಸ, ಮಹತ್ವದ ಕುರಿತು ಮಾಹಿತಿ ಹಂಚಿಕೊಂಡರು.
ಪ್ರತಿವರ್ಷ ಫೆ. 4ರಂದು ವಿಶ್ವ ಕ್ಯಾನ್ಸರ್ ದಿನವನ್ನು ಯೂನಿಯನ್ ಫಾರ್ ಇಂಟರನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ ನೇತೃತ್ವದಲ್ಲಿ ಆಚರಿಸಲಾಗುತ್ತಿದೆ, ಯುನೈಟೆಡ್ ಬೈ ಯುನಿಕ್ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ. ಪ್ರಾರಂಭಿಕ ಹಂತದಲ್ಲಿ ರೋಗವನ್ನು ಪತ್ತೆ ಹಚ್ಚುವುದರ ಜೊತೆಗೆ ಪರಿಣಾಮಕಾರಿ ಚಿಕಿತ್ಸೆ ನೀಡುವುದು ಮತ್ತು ಸಮುದಾಯದ ಜನರಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ಯಾನ್ಸರ್ ರೋಗ ಪತ್ತೆ ಹಚ್ಚುವುದು ಹೇಗೆ? ಕ್ಯಾನ್ಸರ್ ತಡಗಟ್ಟುವಿಕೆ, ರೋಗದ ಲಕ್ಷಣಗಳು ಮತ್ತು ಚಿಕಿತ್ಸೆ ಕುರಿತು ಮಾಹಿತಿ ಹಂಚಿಕೊಂಡರು. ಬೆಳಗಾವಿಯಲ್ಲಿಯ ಕೆಎಲ್‌ಇ ಸಂಸ್ಥೆಯ ನೂತನ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಇರುವ ಚಿಕಿತ್ಸೆ ಮತ್ತು ಆಸ್ಪತ್ರೆಯಲ್ಲಿನ ಸೇವಾ ಸೌಲಭ್ಯಗಳ ಕುರಿತು ತಿಳಿಸಿದರು ಮತ್ತು ಕೇಳುಗರ ಕ್ಯಾನ್ಸರ್ ಸಂಬಂಧಿತ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷಾ ಪಿ. ಎಸ್. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 