ಸಾಮಾನ್ಯ ರೋಗಗಳು, ಚಿಕಿತ್ಸೆ ಕುರಿತು ನೇರ ಫೋನ್‌-ಇನ್ ಕಾರ್ಯಕ್ರಮ

Live phone-in program on common diseases and treatments

ಬೆಳಗಾವಿ 12: ಕೆಎಲ್‌ಇ ವೇಣುಧ್ವನಿ 90.4 ಎಫ್‌. ಎಮ್‌. ಕೇಂದ್ರ ಬೆಳಗಾವಿ, ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಬೆಳಗಾವಿ ಹಾಗೂ ಕೆಎಲ್‌ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯ ಬೆಳಗಾವಿ ಇವರ ಸಹಯೋಗದಲ್ಲಿ ಶನಿವಾರ ದಿ. 12ನೆ ಏಪ್ರಿಲ್ 2025 ರಂದು ಬೆಳಿಗ್ಗೆ 10 ರಿಂದ 11 ಗಂಟೆ ವರೆಗೆ ವಿಶ್ವ ಆರೋಗ್ಯ ದಿನ ಪ್ರಯುಕ್ತ ಸಾಮಾನ್ಯ ರೋಗಗಳು ಮತ್ತು ಚಿಕಿತ್ಸೆ ಕುರಿತು ನೇರ ಫೋನ್‌-ಇನ್ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಬೆಳಗಾವಿಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ತಜ್ಞ ವೈದ್ಯ ಡಾ. ಮಾಧವ ಪ್ರಭು ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ವಿಶ್ವ ಆರೋಗ್ಯ ದಿನದ ಇತಿಹಾಸ, ಮಹತ್ವ ಮತ್ತು ಈ ವರ್ಷದ ಘೋಷವಾಕ್ಯ ಕುರಿತು ಮಾಹಿತಿ ಹಂಚಿಕೊಂಡರು.  

ಆರೋಗ್ಯದ ಮಹತ್ವ ಮತ್ತು ಸಮುದಾಯದ ಜನರಲ್ಲಿ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ಆರೋಗ್ಯ ದಿನವನ್ನು ಆಚರಿಸಲಾಗುತ್ತದೆ.  ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಜೀವನಶೈಲಿ ಮತ್ತು ಆಹಾರ ಪದ್ಧತಿ ಮುಖ್ಯ. ಆದ್ದರಿಂದ ಋತುಮಾನ ಬದಲಾವಣೆಗೆ ತಕ್ಕಂತೆ ಜೀವನಶೈಲಿಯನ್ನು ಹೊಂದಾಣಿಕೆ ಮಾಡಿಕೊಂಡರೆ ಆರೋಗ್ಯಯುತ ಜೀವನವನ್ನು ಹೊಂದಬಹುದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಹಲವಾರು ಸಾಮಾನ್ಯ ರೋಗಗಳು, ಅವುಗಳ ಲಕ್ಷಣಗಳು ಮತ್ತು ಚಿಕಿತ್ಸೆ ಕುರಿತು ಜಾಗೃತಿ ಮೂಡಿಸಿದರು ಮತ್ತು ಕೇಳುಗರ ಪ್ರಶ್ನೆಗಳಿಗೆ ಉತ್ತರಿಸಿದರು. ವೇಣುಧ್ವನಿಯ ಕಾರ್ಯಕ್ರಮ ನಿರ್ವಾಹಕಿ ಮನಿಷ ಪಿ. ಎಸ್‌. ಮತ್ತು ಮಂಜುನಾಥ ಪೈ ಕಾರ್ಯಕ್ರಮ ನಡೆಸಿಕೊಟ್ಟರು.