ಗರ್ಭಿಣಿಯರ ಆರೈಕೆ ಕುರಿತು ನೇರ ಫೋನ್-ಇನ್ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 1: ಕೆಎಲ್ಇ ವೇಣುಧ್ವನಿ 90.4 ಎಫ್.ಎಂ., ಬೆಳಗಾವಿ, ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಕೆಎಲ್ಇ ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಸಹಯೋಗದಲ್ಲಿ ಜುಲೈ 2, ಗುರುವಾರ, ಬೆಳಿಗ್ಗೆ 10ರಿಂದ 11 ಗಂಟೆಯವರೆಗೆ "ಗರ್ಭಿಣಿಯರ ಆರೈಕೆ" ಕುರಿತು ನೇರ ಫೋನ್-ಇನ್ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಕೆಎಲ್ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆಯ ಹಿರಿಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು ಹಾಗೂ ಪ್ರಾಧ್ಯಾಪಕರಾದ ಡಾ. ಎಂ. ಬಿ. ಬೆಳ್ಳದ್ ಭಾಗವಹಿಸಿ, ಗರ್ಭಿಣಿಯರ ಆರೋಗ್ಯ, ಆರೈಕೆ, ಗರ್ಭಧಾರಣೆಯ ಅವಧಿಯಲ್ಲಿ ಅನುಸರಿಸಬೇಕಾದ ಮುನ್ನೆಚ್ಚರಿಕೆಗಳು ಹಾಗೂ ಸಂಬಂಧಿತ ವಿಷಯಗಳ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.