ಡೆಂಗ್ಯೂ ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತದ ವೈಫಲ್ಯ: ಆರೋಪ
ಕುಕನೂರ 19: ಪಟ್ಟಣದಲ್ಲಿ ಹೆಚ್ಚುತ್ತಿರುವ ಡೆಂಗೆ ಜ್ವರವನ್ನು ನಿಯಂತ್ರಿಸುವಲ್ಲಿ ಸ್ಥಳೀಯ ಆಡಳಿತದ ಮತ್ತು ಜನಪ್ರತಿನಿಧಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳ ವೈಫಲ್ಯ ಎದ್ದು ಕಾಣುತ್ತಿದೆ ಜನಸಾಮಾನ್ಯರ ಆರೋಗ್ಯ ರಕ್ಷಿಣೆ ಇಲ್ಲದಂತಾಗಿದೆ ಎಂದು ಕುಕನೂರ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸಿದ್ದಯ್ಯ ಕಳ್ಳಿಮಠ ಆರೋಪಿಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪಟ್ಟಣದ ಕೋಳಿಪೇಟೆಯ ಸೇರಿದಂತೆ ಇನ್ನಿತರ ವಾರ್ಡ್ ಗಳಲ್ಲಿ ನಗರದಲ್ಲಿ ಡೆಂಗ್ಯೂ ಸೇರಿದಂತೆ ಇನ್ನಿತರ ರೋಗಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ, ಪಟ್ಟಣದಲ್ಲಿರುವ ಬಂದ್ ಆಗಿರುವ ಕಲ್ಲು ಕ್ವಾರಿಗಳಲ್ಲಿ ಸಂಗ್ರಹವಾಗಿರುವ ನೀರಿನಿಂದ ಸೊಳ್ಳೆಗಳ ಕಾಟ ಹೆಚ್ಚುತ್ತಲೇ ಇವೆ ಇದರಿಂದ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಜಾಸ್ತಿಯಾಗುತ್ತಲೇ ಇದ್ದರೂ ಕೂಡ ಸ್ಥಳೀಯ ಆಡಳಿತ ವೈದ್ಯಾಧಿಕಾರಿಗಳು ಈ ಬಗ್ಗೆ ಗಮನಹರಿಸುತ್ತಿಲ್ಲ ಅವರ ನಿರ್ಲಕ್ಷ್ಯದಿಂದ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ನಂತರ ಕಾಂಗ್ರೆಸ್ ಮುಖಂಡ ರಾಮಣ್ಣ ಬಂಕದಮನಿ ಮಾತನಾಡಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರಿಯಾದ ವೈದ್ಯರಿಲ್ಲದ ಕಾರಣ ಜನಸಾಮಾನ್ಯರಿಗೆ ಗೋಳಾಟವಾಗುತ್ತಿದೆ. ಪಟ್ಟಣದಓ್ ಸುಸಜ್ಜಿತವಾದ ಆಸ್ಪತ್ರೆ ಇದ್ದರೂ ಕೂಡ ಮಹಿಳೆಯರಿಗೆ ಆಸ್ಪತ್ರೆಗಳಲ್ಲಿ ಹೆರಿಗೆ ಆಗುತ್ತಿಲ್ಲ. ಹೆರಿಗೆಗೆಂದು ಬರುವ ಗರ್ಭಿಣಿಯರನ್ನ ಹೆರಿಗೆ ಮಾಡಿಸಿಕೊಳ್ಳದೆ ಮುಂದಕ್ಕೆ ಸಾಗಿಸಿ ಕೊಪ್ಪಳ ಜಿಲ್ಲಾ ಆಸ್ಪತ್ರೆ ಗದಗ ಹುಬ್ಬಳ್ಳಿ ಧಾರವಾಡ ದೊಡ್ಡ ದೊಡ್ಡ ಪಟ್ಟಣಗಳಿಗೆ ಹೋಗಿ ಹೆರಿಗೆ ಮಾಡಿಸಿಕೊಂಡು ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಬಡವರಿಗೆ ತೀವ್ರತರನಾದ ತೊಂದರೆ ಉಂಟಾಗುತ್ತಿದೆ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಹೆರಿಗೆ ಮಾಡಿಸಿಕೊಂಡು ಬರಲು 20 -30 ಸಾವಿರ ಖರ್ಚಾಗುತ್ತಿದೆ.ಪಟ್ಟಣದಲ್ಲಿ ಆಸ್ಪತ್ರೆಗಳು ಇದ್ದರೂ ಕೂಡ ನಮಗೆ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ವಕ್ತಾರ ಸಂಗಮೇಶ ಗುತ್ತಿ ದೇವಪ್ಪ ಸೋಬಾನದ್ ರೆಹಮಾನ್ ಸಾಬ್ ಮಕ್ಕಪ್ಪನವರ್ ಮುತ್ತು ವಾಲ್ಮೀಕಿ ಗವಿಸಿದ್ಧಪ್ಪ ಶಲವಡಿ ಮಂಜುನಾಥ್ ಯಡಿಯಾಪುರ ಇದ್ದರು.