ಪಂಜಾಬ್‌ನಲ್ಲಿ ವಾರಾಂತ್ಯ, ರಜಾ ದಿನಗಳಲ್ಲಿ ಲಾಕ್‌ಡೌನ್, ಸಂಚಾರ ನಿರ್ಬಂಧ
ಚಂಡೀಗಡ, ಜೂ.12,ವಾರಾಂತ್ಯ ಮತ್ತು ಸಾರ್ವಜನಿಕ ರಜಾದಿನಗಳಲ್ಲಿ ಲಾಕ್‌ಡೌನ್ ಘೋಷಿಸಿರುವ ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಈ ಅವಧಿಯಲ್ಲಿ ಇ-ಪಾಸ್ ಹೊಂದಿರುವವರನ್ನು ಹೊರತುಪಡಿಸಿ ಉಳಿದೆಲ್ಲಾ ಸಾರ್ವಜನಿಕರ ಸಂಚಾರವನ್ನು ನಿಷೇಧಿಸಿದ್ದಾರೆ.ವೈದ್ಯಕೀಯ ಸಿಬ್ಬಂದಿ ಮತ್ತು ಅಗತ್ಯ ಸೇವಾ ಪೂರೈಕೆದಾರರನ್ನು ಹೊರತುಪಡಿಸಿ ಎಲ್ಲಾ ನಾಗರಿಕರು ಕೋವಾ ಅಪ್ಲಿಕೇಶನ್‌ನಿಂದ ಇ-ಪಾಸ್‌ಗಳನ್ನು ಡೌನ್‌ಲೋಡ್ ಮಾಡಬೇಕಾಗುತ್ತದೆ.
ಸಾಂಕ್ರಾಮಿಕ ಪರಿಸ್ಥಿತಿ ಮತ್ತು ಮತ್ತಷ್ಟು ಹರಡುವಿಕೆಯನ್ನು ನಿಭಾಯಿಸಲು ರಾಜ್ಯದ ಸಿದ್ಧತೆಯನ್ನು ಪರಿಶೀಲಿಸಲು ಏರ್ಪಡಿಸಿದ್ದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಮುಖ್ಯಮಂತ್ರಿ ಈ ನಿರ್ದೇಶನಗಳನ್ನು ನೀಡಿದರು.ಆದಾಗ್ಯೂ, ಉದ್ಯಮ ಮತ್ತು ಕೈಗಾರಿಕೆಗಳು ಎಲ್ಲಾ ದಿನಗಳಲ್ಲಿ ಸಾಮಾನ್ಯವಾಗಿ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಹೆಚ್ಚಿನ ಜನಸಂದಣಿಯನ್ನು ತಡೆಗಟ್ಟಲು ಈ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ನೋಡಿಕೊಳ್ಳಬೇಕೆಂದು ಮುಖ್ಯಮಂತ್ರಿ ಅವರು ಡಿಜಿಪಿ ದಿನಕರ್ ಗುಪ್ತಾ ಅವರಿಗೆ ಸೂಚಿಸಿದ್ದಾರೆ.ಕೊರೋನಾ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿರುವ ದೆಹಲಿಯಿಂದ ಪಂಜಾಬ್‌ಗೆ ಬರುವವರನ್ನು ಕಡ್ಡಾಯವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸುವುದು ಸೇರಿದಂತೆ ಕಟ್ಟುನಿಟ್ಟಿನ ಷರತ್ತುಗಳನ್ನು ವಿಧಿಸುವಂತೆ ಮುಖ್ಯಮಂತ್ರಿ ವೈದ್ಯಕೀಯ ಮತ್ತು ಆರೋಗ್ಯ ತಜ್ಞರಿಗೆ ಸೂಚಿಸಿದರು. ರಾಷ್ಟ್ರ ರಾಜಧಾನಿಯಿಂದ ಪ್ರತಿದಿನ ಸರಾಸರಿ 500-800 ವಾಹನಗಳು ಪಂಜಾಬ್‌ಗೆ ಬರುತ್ತಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 