ಇಂಡಿ ನಗರದಲ್ಲಿ ಲೋಕ್ ಅದಾಲತ್
ಇಂಡಿ 13: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಇಂಡಿ ಶಾಖೆ ಹಾಗೂ ವಿಜಯಪೂರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಇವರ ಸಹಯೋಗದಲ್ಲಿ ಇದೇ ದಿ. 14ರಂದು ಶನಿವಾರ ಬೆಳಗ್ಗೆ ಹತ್ತು ಗಂಟೆಗೆ ಲೋಕ್ ಅದಾಲತ್ ಕಾರ್ಯಕ್ರಮ ಇಂಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಸುಸ್ತಿ ಸಾಲಗಾರನ್ನು ಋಣಮುಕ್ತರಾಗಲು ಇದೊಂದು ಸುವರ್ಣಾವಕಾಶ ಇದರ ಸದುಪಯೋಗವನ್ನು ರೈತರು ಪಡೆದುಕೊಳ್ಳಬೇಕು ಎಂದು ಇಂಡಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ವಲಯ ಅಧಿಕಾರಿ ಪ್ರಕಾಶ್ ಗುಜ್ಜಲಕರ್ ಅವರು ತಡವಲಗಾ ಗ್ರಾಮದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ತಡವಲಗಾ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುನಂದಾ ವಾಲಿಕಾರ ಸೇರಿದಂತೆ ಅನೇಕ ರೈತರು ಉಪಸ್ಥಿತರಿದ್ದರು.