ಬಾಕಿ ಇರುವ ಪ್ರಕರಣ ಇತ್ಯರ್ಥಪಡಿಸಲು ಲೋಕ ಅದಾಲತ್ : ಶೈಲಜಾ ಹೆಚ್.ವಿ
Lok Adalat to resolve pending cases: Shailaja HV
ಲೋಕದರ್ಶನ ವರದಿ
ಹಾವೇರಿ 13 : ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಅಗಸ್ಟ್-21,22 ಹಾಗೂ 23 ರಂದು ಸುಪ್ರೀಂ ಕೋರ್ಟನಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲು ವಿಶೇಷ ಲೋಕ ಅದಾಲತ್ ಜರುಗಲಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಹಾವೇರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶೈಲಜಾ ಹೆಚ್.ವಿ ಅವರು ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಹಿರಿಯ ದಿವಾಣಿ ನ್ಯಾಯಾಧೀಶರು ಗೌರವಾನ್ವಿತ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ ನಿರ್ದೇಶನದಂತೆ, ಸಮಾದಾನ ಸಮಾರೋಹ-2026 ಅನ್ನು ಅಗಸ್ಟ್-21,22 ಹಾಗೂ 23 ರಂದು ಮೂರು ದಿನಗಳ ಕಾಲ ಆಯೋಜಿಸಲಾಗುತ್ತಿದೆ. ಸುಪ್ರೀಂ ಕೋರ್ಟನಲ್ಲಿ ವಿಚಾರಣೆಯಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮಾತ್ರ ದೇಶದಾದ್ಯಂತ ಪಕ್ಷಗಾರರ ಸಮ್ಮತಿಯಿಂದ ಬ್ಯಾಂಕಿಂಗ್ ಮತ್ತು ವಿಮಾ ಸಂಬಂಧಿತ ಪ್ರಕರಣಗಳು, ನಾಗರೀಕ ಕಾನೂನು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಗ್ರಾಹಕ ವ್ಯಾಜ್ಯಗಳು ಮತ್ತು ರೇರಾ, ಕ್ರಿಮಿನಲ್ ಪ್ರಕರಣಗಳು, ಕೌಟುಂಬಿಕ ವಿವಾದಗಳು, ಕಾರ್ಮಿಕ ಮತ್ತು ಕೈಗಾರಿಕಾ ಕಾನೂನುಗಳು, ಭೂ ಸ್ವಾಧೀನ ಮತ್ತು ಪುನರ್ವಸತಿ, ಆಸ್ತಿ ತೆರಿಗೆ, ಬಾಡಿಗೆ ನಿಯಂತ್ರಣ ಮತ್ತು ಸಾರ್ವಜನಿಕ ಆವರಣ ಕಾಯ್ದೆ, ಸೇವಾ ಕಾನೂನುಗಳು ವರ್ಗಾವಣೆ ಅರ್ಜಿಗಳಂತ ಪ್ರಕರಣಗಳನ್ನು ಮಧ್ಯಸ್ಥಿಕೆಯ ಮೂಲಕ ತಾವಿರುವ ಸ್ಥಳದಲ್ಲಿಯೇ ತಮ್ಮ ವ್ಯಾಜ್ಯವನ್ನು ಜಿಲ್ಲಾಕಾನೂನು ಸೇವೆಗಳ ಪ್ರಾಧಿಕಾರ ಹಾವೇರಿ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳಾದ ರಾಣೇಬೆನ್ನೂರ- ಹಿರೇಕೆರೂರ-ಹಾನಗಲ್-ಬ್ಯಾಡಗಿ ಸವಣೂರು-ಶಿಗ್ಗಾಂವನ್ನು ಸಂಪರ್ಕಿಸಿ ನೊಂದಾಯಿಸಿಕೊಂಡು ಪರಿಹರಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ದೂರವಾಣಿ ಸಂಖ್ಯೆ 011-23382778, 011-23382121 ಹಾಗೂ ಟೋಲ್ ಫ್ರೀ ಸಂಖ್ಯೆ 15100 ಹಾಗೂ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿ ಬೆಂಗಳೂರು ಸಂಪರ್ಕ ಸಂಖ್ಯೆ:08022869988. ಇ-ಮೇಲ್ hdscbng@gmail.com ನ್ನು ಸಂಪರ್ಕಿಸಬಹುದಾಗಿದೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾವೇರಿ 08375-233939 ಅನ್ನು ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಸುಪ್ರೀಂ ಕೋರ್ಟನಲ್ಲಿ ವಿಚಾರಣೆಯಲ್ಲಿ ಬಾಕಿ ಇರುವ ತಮ್ಮ ಪ್ರಕರಣಗಳು ಏನಾದರೂ ಇದ್ದಲ್ಲಿ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶೈಲಜಾ ಹೆಚ್.ವಿ ಇವರು ಸೂಚಿಸಿರುತ್ತಾರೆ.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 