ಲೋಕಸಭಾ ಚುನಾವಣೆ: ಜಿಲ್ಲಾಧಿಕಾರಿಗಳಿಂದ ಶುಷ್ಕ ದಿನ ಘೋಷಣೆ

ಕೊಪ್ಪಳ, ಏಪ್ರಿಲ್ 23: ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಪ್ರಯುಕ್ತ ಕರ್ನಾಟಕ ಅಬಕಾರಿ ಪರವಾನಿಗೆಗಳ (ಸಾಮಾನ್ಯ ಷರತ್ತುಗಳು) ನಿಯಮಗಳು 1967 ರ ನಿಯಮ 10 ಬಿ ಹಾಗೂ ಪ್ರಜಾಪ್ರಾತಿನಿಧ್ಯ ಕಾಯ್ದೆ 1951ರ ಕಲಂ 135 (ಸಿ) ಅನ್ವಯ ಮೇ 7ರಂದು ಮತದಾನ ನಡೆಯುವುದರಿಂದ  ಕೊಪ್ಪಳ ಜಿಲ್ಲೆಯಾದ್ಯಂತ ಮೇ 5ರ ಸಂಜೆ 06 ಗಂಟೆಯಿಂದ ಮೇ 7ರ ರಾತ್ರಿ 12 ಗಂಟೆಯವರೆಗೆ  ಹಾಗೂ ಜೂನ್ 4ರಂದು ಮತ ಏಣಿಕೆ ನಡೆಯುವುದರಿಂದ ಜೂನ್ 4ರ ಬೆಳಿಗ್ಗೆ 6ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಶುಷ್ಕ ದಿನಗಳೆಂದು  ಘೋಷಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ. 

ಆದೇಶದನ್ವಯ ಶುಷ್ಕ ದಿನಗಳಂದು ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ತಯಾರಿಕೆ, ಮದ್ಯ ಮಾರಾಟ, ಮದ್ಯ ಸಂಗ್ರಹಣೆ ಹಾಗೂ ಮದ್ಯ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಿದೆ. ಈ ದಿನಗಳಂದು ಜಿಲ್ಲೆಯಾದ್ಯಂತ ಎಲ್ಲ ರೀತಿಯ ಮದ್ಯ ಮಾರಾಟ ಅಂಗಡಿಗಳು ಮತ್ತು ಬಾರ್‌ಗಳನ್ನು ಸಂಪೂರ್ಣವಾಗಿ ಮುಚ್ಚಬೇಕು ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.