ಮೂವರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ : ದಾಖಲೆಗಳ ಪರಿಶೀಲನೆ

ಮೂವರು ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳ ದಾಳಿ : ದಾಖಲೆಗಳ ಪರಿಶೀಲನೆ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಮೂವರು ಅಧಿಕಾರಿಗಳಿಗೆ ಸೇರಿದ ಐದು ಸ್ಥಳಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ಎಸ್ಪಿ ಹನಮಂತರಾಯ ನೇತೃತ್ವದಲ್ಲಿ ಶನಿವಾರ ಬೆಳಿಗ್ಗೆ ದಾಳಿ ಮಾಡಲಾಗಿದೆ.

    ದೇವರಾಜ್‌ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ದಲಿಂಗಪ್ಪ ಬಾನಸಿ ಅವರ ಬೆಳಗಾವಿಯ ವಿದ್ಯಾ ನಗರದಲ್ಲಿರುವ ಮನೆ, ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

   ಅದೇ ರೀತಿಯಾಗಿ ಧಾರವಾಡದ ಲೋಕೋಪಯೋಗಿ ಇಲಾಖೆ ಮುಖ್ಯ ಎಂಜಿನಿಯರ್ ಎಚ್.ಸಿ. ಸುರೇಶ ಅವರ ಬೆಳಗಾವಿಯ ಹನುಮಾನ್ ನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ದಾಳಿ ನಡೆಸಲಾಗಿದೆ.

   ಗದಗ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಗಂಗಾಧರ ಶಿರೋಳ ಅವರಿಗೆ ಸೇರಿದ, ಬೆಳಗಾವಿಯ ಹನುಮಾನ ನಗರದ ಮನೆ ಮೇಲೂ ದಾಳಿ ನಡೆಸಲಾಗಿದೆ.

ಸುದ್ದಿ ಓದಿ