ಶ್ರೀಕೃಷ್ಣ ಭರತಖಂಡದ ಐಕ್ಯತೆಗಾಗಿ ಶ್ರಮಿಸಿದ ಮಹಾನುಭಾವ: ಗಣಾಚಾರಿ
ಲೋಕದರ್ಶನ ವರದಿ
ಮುಧೋಳ 18: ಶ್ರೀಕೃಷ್ಣ ಭರತಖಂಡದ ಐಕ್ಯತೆಗಾಗಿ ಶ್ರಮಿಸಿದ ಮಹಾನುಭಾವ. ಶ್ರೀಕೃಷ್ಣ ಯಾವುದೇ ರಾಜ್ಯದ ರಾಜನಾಗದಿದ್ದರೂ ದೇಶದಲ್ಲಿದ್ದ ಆಗಿನ ಎಲ್ಲಾ ರಾಜರಿಂದಲೂ ಪೂಜಿಸಿಕೊಂಡಥಹ ಶ್ರೇಷ್ಠ ವ್ಯಕ್ತಿ ಎಂದು ಸಾವಯವ ಕೃಷಿಕ ಸೋಮಲಿಂಗಯ್ಯ ಗಣಾಚಾರಿ ತಿಳಿಸಿದರು.
ಗುರುವಾರ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಸಂಗಮನಾಥ ಶಾಲೆಯಲ್ಲಿ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ದೇಶದಲ್ಲಿ ಧರ್ಮದ ಸ್ಥಾಪನೆಗಾಗಿ ಅಧರ್ಮದ ಹಾದಿಯಲ್ಲಿದ್ದವರನ್ನೆಲ್ಲಾ ನಾಶ ಮಾಡಿ, ಜಗತ್ತಿಗೆ ಗೀತೆಯನ್ನು ನೀಡಿ ಬದುಕುವ ಮಾರ್ಗವನ್ನು ತಿಳಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಡಾ.ತ್ರಿವೇಣಿ ಮಲಘಾಣ ಮಾತನಾಡಿ ಶ್ರೀಕೃಷ್ಣ ಯಾವುದೇ ಜಾತಿಗೆ ಸೀಮಿತವಾಗಿಲ್ಲ. ಮನುಕುಲಕ್ಕೇ ಸೇರುವಂಥಹ ಶ್ರೇಷ್ಠ ವ್ಯಕ್ತಿತ್ವ. ಗೀತೆಯ ಸಾರವನ್ನು ಜನಸಾಮಾನ್ಯರಿಗೆ ತಲುಪಿಸುವುದು ಮತ್ತು ಅದನ್ನು ಅಳವಡಿಸಿಕೊಳ್ಳುವುದು ಸಮಾಜದ ಏಳಿಗೆಗೆ ಅತ್ಯಗತ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಪ್ರತಿಭಾವಂತ ಶ್ರೀ ಕೃಷ್ಣ ವೇಷಧಾರಿ ವಿದ್ಯಾರ್ಥಿಗಳಿಗೆ ಗೌರವ ಪುರಸ್ಕಾರ ಮಾಡಲಾಯಿತು.
ಡಾ.ತ್ರಿವೇಣಿ ಎಸ್.ಮಲಘಾಣ, ಆಡಳಿತಾಧಿಕಾರಿ ಮಲ್ಲು ಕಳ್ಳೆನ್ನವರ, ಪ್ರಾಚಾರ್ಯ ಡಾ.ಎಸ್.ಖಾನ್, ಮುಖ್ಯೋಪಾಧ್ಯಾಯ ವೆಂಕಟೇಶ ಗುಡೆಪ್ಪನವರ ಸೇರಿದಂತೆ ಇತರರು ಇದ್ದರು.
150ಕ್ಕೂ ಅಧಿಕ ವಿದ್ಯಾರ್ಥಿಗಳು ರಾಧಾಕೃಷ್ಣ ವೇಷ ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು.