ತಹಶೀಲ್ದಾರ ಕಚೇರಿಯಲ್ಲಿ ಭಗವಾನ್ ಮಹಾವೀರ ಜಯಂತಿ ಆಚರಣೆ
Lord Mahavir Jayanti celebrated at Tahsildar's office
ಸವದತ್ತಿ: "ಅಹಿಂಸೆಯೇ ಪರಮ ಧರ್ಮ ಎಂಬ ಸಂದೇಶದ ಮೂಲಕ ಜಗತ್ತಿಗೆ ಶಾಂತಿ ಮತ್ತು ಮಾನವೀಯ ಮೌಲ್ಯಗಳನ್ನು ಬೋಧಿಸಿದ ಭಗವಾನ್ ಮಹಾವೀರರ ತತ್ವಗಳು ಇಂದಿನ ಸಮಾಜಕ್ಕೆ ಅತ್ಯಂತ ಅವಶ್ಯಕವಾಗಿವೆ," ಎಂದು ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರು ಹೇಳಿದರು.
ಇಲ್ಲಿನ ನಗರದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಾಡಳಿತದ ವತಿಯಿಂದ ಆಯೋಜಿಸಿದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿ ಮಹಾವೀರರ ಆದರ್ಶಗಳು ಕೇವಲ ಒಂದು ಧರ್ಮಕ್ಕೆ ಸೀಮಿತವಾಗಿಲ್ಲ; ಅವು ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಬೇಕು ಎಂದು ಕರೆ ನೀಡಿದರು. ದ್ವೇಷ ಮತ್ತು ಅಶಾಂತಿಯ ಇಂದಿನ ದಿನಗಳಲ್ಲಿ ಶಾಂತಿ ಮತ್ತು ಅಹಿಂಸೆಯ ಮೂಲಕ ಮಾತ್ರ ಸುಸ್ಥಿರ ಸಮಾಜ ಕಟ್ಟಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗನ್ನವರ ಅವರು ಮಾತನಾಡಿ "ಮಹಾವೀರರು ತೋರಿದ ಸರಳತೆ, ಸತ್ಯ ಮತ್ತು ಜೀವರಕ್ಷಣೆ ಎಂಬ ಉದಾತ್ತ ತತ್ವಗಳನ್ನು ನಾವು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಅವರ ಜಯಂತಿ ಆಚರಣೆಯು ಸಮಾಜದಲ್ಲಿ ಸೌಹಾರ್ದತೆಯನ್ನು ಹೆಚ್ಚಿಸಲು ಪೂರಕವಾಗಿದೆ,"ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗ್ರೇಡ್ (2) ತಹಶೀಲ್ದಾರ, ಎಮ್.ಎನ್.ಮಠದ, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಎ.ಖಾಜಿ, ಅಮೃತ ಸಾಣಿಕೊಪ್ಪ, ಜೈನ್ ಸಮಾಜದ ಮುಖಂಡ ಶಾಂತಿಲಾಲ ಜೈನ್, ಮದನ ತಾತೇಡ,ಭೂಪಾಲ್ ಭಾಂಡೇಕರ,ಹಾಗೂ ರಾಘವೇಂದ್ರ ಪೂಜೇರ, ಎಮ್.ಎನ್.ಮುತ್ತಿನ,ಚಂದ್ರು ಶ್ಯಾಮರಾಯನವರ, ಬಸವರಾಜ ಅರಮನಿ,ಮಂಜುನಾಥ ಪಾಚಂಗಿ, ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಜೈನ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 