ಎಂ. ನಾರಾಯಣಸ್ವಾಮಿ ಅಧಿಕಾರ ಸ್ವೀಕಾರ
M. Narayanaswamy takes charge
ಬಳ್ಳಾರಿ, ಡಿ.2: ಬಳ್ಳಾರಿ ಜಿಲ್ಲಾ ಸವಿತಾ ಸಮಾಜದ ನೂತನ ಜಿಲ್ಲಾಧ್ಯಕ್ಷರಾದ ಆಯ್ಕೆಯಾದ ಎಂ. ನಾರಾಯಣಸ್ವಾಮಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇದರ ಅಂಗವಾಗಿ ಕೌಲ್‌ಬಜಾರ್‌ನಲ್ಲಿರುವ ಸವಿತಾ ಸಮಾಜದ ಸಮುದಾಯ ಭವನದಲ್ಲಿ ಇಂದು ಕಾರ್ಯಕ್ರಮವನ್ನು ಏರಿ್ಡಸಲಾಗಿತ್ತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸವಿತಾ ಸಮಾಜದ ಕಾರ್ಯಕಾರಿ ಸಮಿತಿ ಸದಸ್ಯರಾದ ಹೆಚ್.ತಿಪ್ಪಣ್ಣ ಅವರು ನೂತನ ಜಿಲ್ಲಾಧ್ಯಕ್ಷರಿಗೆ ಅಧಿಕಾರ ಪ್ರಮಾಣ ಪತ್ರ ನೀಡಿದರು. ಬಳ್ಳಾರಿ ಜಿಲ್ಲಾ, ತಾಲ್ಲೂಕು, ಹೋಬಳಿ, ಗ್ರಾಮ ಘಟಕಗಳ ಸವಿತಾ ಸಮಾಜದ ಹಲವಾರು ಬಾಂಧವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿ ನೂತನ ಜಿಲ್ಲಾಧ್ಯಕ್ಷರಾದ ಎಂ.ನಾರಾಯಣಸ್ವಾಮಿ ಅವರು ನಮ್ಮ ತಂಡದ ಸಹಕಾರದಿಂದ, ಮುಖಂಡರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸುವುದಾಗಿ ತಿಳಿಸಿದರು. ನನ್ನ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಹಾಜರಿದ್ದ ಎಲ್ಲಾ ಸದಸ್ಯರಿಗೆ ತುಂಬು ಹೃದಯ ಧನ್ಯವಾದಗಳನ್ನು ಸಲ್ಲಿಸಿದರು. ಬಳ್ಳಾರಿ ಜಿಲ್ಲೆಯ ಸಮಸ್ತ ತಾಲ್ಲೂಕುಗಳ ಪದಾಧಿಕಾರಿಗಳ ಸಲಹೆ ಸೂಚನೆಗಳನ್ನು ತಾವು ಖುದ್ದಾಗಿ ಆಲಿಸಿ, ಅವರ ಪರಿಹಾರಕ್ಕೆ ಒತ್ತು ನೀಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಆರ್.ಶೇಖಣ್ಣ, ನಗರ ಅಧ್ಯಕ್ಷ ಉಮೇಶ್, ಜಿಲ್ಲಾ ಮುಖಂಡರಾದ ಬಿ.ಜಾನಕಿರಾಮ್, ಎಲ್.ರಾಮು, ಬಾಲಕೃಷ್ಣ, ವಿ.ವೆಂಕಟೇಶ್, ಎಂ.ದೇವಣ್ಣ, ಹೆಚ್.ನಾಗೇಶ್, ವೈ.ತಿಪ್ಪೇಸ್ವಾಮಿ, ವೈ.ಶಿವಕುಮಾರ್, ಎಂ.ಭಾಸ್ಕರ್, ಎಂ.ಅಶೋಕ್‌ಕುಮಾರ್, ರಾಮಕೃಷ್ಣ, ಎಂ.ಅಯ್ಯಪ್ಪ, ಹೆಚ್.ಹನುಮಂತರಾಯುಡು, ಎನ್. ಮಹಾಂತೇಶ್, ರಾಮಣ್ಣ, ಭೀಮ ತಾಳೂರು, ವೀರೇಂದ್ರ ಸಿರುಗುಪ್ಪ, ಸಣ್ಣ ತಿಮ್ಮಪ್ಪ, ಪಾಂಡುರಂಗಪ್ಪ, ಸಣ್ಣ ತಿಪ್ಪೇಸ್ವಾಮಿ, ಕೃಷ್ಣಮೂರ್ತಿ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 