ಎಂ.ಎಸ್.ಖೊದ್ನಾಪೂರ ಸಾಧಕ ವಿಭೂಷಣ ಪ್ರಶಸ್ತಿಗೆ ಆಯ್ಕೆ
M.S. Khodnapur selected for the Sadhak Vibhushan Award
ವಿಜಯಪುರ 19: ಚಿಕ್ಕೋಡಿಯ ನಾಗರಮುನ್ನೋಳಿ ಕವಿತ್ತ ಕರ್ಮಮಣಿ ಫೌಂಡೇಶನ್ ಸಂಚಾಲಕ ಮಂಡಳಿ ತಿಕೋಟಾ ಪಟ್ಟಣದ ಎಂ.ಎಸ್.ಖೊದ್ನಾಪೂರ ಇವರು ಶೈಕ್ಷಣಿಕ, ಸಾಹಿತ್ಯ, ಭಾಷೆ, ನೆಲ-ಜಲ, ಸಂಸ್ಕೃತಿ ಕ್ಷೇತ್ರಗಳಲ್ಲಿನ ಗಣನೀಯ ಸೇವೆ-ಸಾಧನೆಯನ್ನು ಗುರುತಿಸಿ, ರಾಷ್ಟ್ರಮಟ್ಟದ ಸಾಧಕ ವಿಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ವ್ಯಕ್ತಿತ್ವ ವಿಕಸನ, ಜೀವನ-ಕಲೆ, ಕೌಶಲ್ಯ ಮತ್ತು ವಿದ್ಯಾರ್ಥಿಗಳಿಗೆ ಸಾಧನೆಗೆ ಪ್ರೇರಣಾದಾಯಕವಾದ ಮತ್ತು ಯಶೋಗಾಥೆ ಅಂತಹ ವಿಷಯಗಳ ಮೇಲೆ 250 ಕ್ಕೂ ಹೆಚ್ಚು ಲೇಖನಗಳು ನಾಡಿನ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುತ್ತವೆ. ಇವರಿಗೆ ಇದೇ ಜುಲೈ 27 ರಂದು ಕವಿಗೋಷ್ಠಿ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಕವಿತ್ತ ಕರ್ಮಮಣಿ ಫೌಂಡೇಶನ್ ಅಧ್ಯಕ್ಷ ಶ್ರೀ ಎಲ್.ಎಚ್.ಪೆಂಡಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಇವರು ವಿಜಯಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾಣಿಜ್ಯಶಾಸ್ತ್ರ ಸಹ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಸಾಧನೆಗೆ ತಿಕೋಟಾ ಗೆಳೆಯರ ಬಳಗ, ಕುಡುವಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ವೇದಿಕೆ ಹಾಗೂ ಬಂಧು-ಬಳಗದವರು ಅಭಿನಂದಿಸಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 