ಗೋ ಹತ್ಯೆ ನಿಷೇಧಕ್ಕೆ ಸೂಕ್ತ ಕಾನೂನು ಕ್ರಮಕ ಆಗ್ರಹಿಸಿ ಮನವಿ
ತಾಳಿಕೋಟೆ 27: ಗೋ ಹತ್ಯೆ ನಿಷೇಧ ಕಾನೂನು ಜಾರಿಯಾಗಿದ್ದರೂ ಸಹ ಪಟ್ಟಣದಲ್ಲಿ ಅನಧಿಕೃತವಾಗಿ ಗೋ ಮಾಂಸದ ಅಂಗಡಿಗಳು ಹಾಗೂ ಕಸಾಯಿಖಾನೆಗಳನ್ನು ಆರಂಭವಿದ್ದು ಕೂಡಲೇ ಅವುಗಳನ್ನು ಬಂದ್ ಮಾಡಲು ಸೂಕ್ತ ಕಾನೂನು ಕ್ರಮ ಕೈಕೊಳ್ಳುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ವತಿಯಿಂದ ಪಟ್ಟಣದ ಪೆÇಲೀಸ್ ಠಾಣೆಯ ಪಿಎಸೈ ಶಿವಾಜಿ ಪವಾರ ಅವರಿಗೆ ಮನವಿಯನ್ನು ಸಲ್ಲಿಸಲಾಯಿತು.ರಾಜ್ಯದಲ್ಲಿ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯಿದೆ ರಾಜ್ಯದಲ್ಲಿ ಜಾರಿಯಲ್ಲಿದ್ದು, ಗೋವುಗಳ ಹತ್ಯೆ ಹಾಗೂ ಸಾಗಾಟವನ್ನು ನಿಷೇಧಿಸಲಾಗಿದೆ. ಆದರೆ ಪಟ್ಟಣದಲ್ಲಿ ಗೋಮಾಸಂದ ಅಂಗಡಿಗಳು ರಾಜಾರೋಷವಾಗಿ ನಡೆಯುತ್ತಿದ್ದು ಇದರಿಂದ ಹತ್ಯೆ ನಿರಾತಂಕವಾಗಿ ನಡೆಯುತ್ತಿರುವದಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಜಾರಿಯಲ್ಲಿರುವ ಗೋಹತ್ಯೆ ನಿಷೇಧ ಕಾನೂನು ಪಟ್ಟಣದಲ್ಲಿ ಸಮರ್ಪಕವಾಗಿ ಜಾರಿಯಾಗಿಲ್ಲ. ಹಿಗಾಗಿ ಪಟ್ಟಣದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಗೋವುಗಳ ಹತ್ಯೆಯನ್ನು ನಿಲ್ಲಿಸಲು ಸೂಕ್ತ ಕಾನೂನು ಕ್ರಮ ಕೈಕೊಳ್ಳುವಂತೆ ಮನವಿಯಲ್ಲಿ ಒತ್ತಾಯಿಸಲಾಯಿತು. ಇದೇ ಸಂದರ್ಭದಲ್ಲಿ ಪಟ್ಟಣದ ಪುರಸಭೆ ಮುಖ್ಯಾಧಿಕಾರಿಗೂ ಮನವಿಯನ್ನ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಭಜರಂಗದಳದ ಜಿಲ್ಲಾ ಸಹಸಂಯೋಜಕ ಅನಿಲ ಹಜೇರಿ, ವಿಶ್ವ ಹಿಂದೂ ಪರಿಷದ್ ಭಜರಂಗದಳದ ಜಿಲ್ಲಾ ಸಂಯೋಜಕ ತಮ್ಮಣ್ಣ ಬಡಿಗೇರ ಸೇರಿದಂತೆ ಇತರರು ಇದ್ದರು.