ನಾನು ಬಿಜೆಪಿ ಸೇರುತ್ತೇನೆ ಎನ್ನುವುದು ಮೂರ್ಖತನದ ಹೇಳಿಕೆ: ಸಿದ್ದರಾಮಯ್ಯ
ಬೆಂಗಳೂರು, ಮಾ.9 ತಾವು ಬಿಜೆಪಿ ಸೇರುತ್ತೇವೆ ಎಂದು ಕೇಳಿ ಬರುತ್ತಿರುವ ಮಾತಿಗೆ ಕೊನೆಗೂ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾನು ಬಿಜೆಪಿ ಸೇರುತ್ತೇನೆ ಎಂದು ಹೇಳಿರುವುದು ಮೂರ್ಖತನದ ಹೇಳಿಕೆ. ಕಾನೂನು ವಿದ್ಯಾರ್ಥಿಯಾಗಿ 1972ರಲ್ಲಿ ರಾಜಕೀಯ ಪ್ರವೇಶ ಮಾಡಿದಾಗಿಂದ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ ವ್ಯವಸ್ಥೆ ಪರ ಹೋರಾಡುತ್ತಾ ಬಂದಿದ್ದೇನೆ, ಬಿಜೆಪಿ ಈ ಎಲ್ಲಾ ತತ್ವಗಳಿಗೂ ವಿರುದ್ಧವಾಗಿದೆ. ಹೀಗಿರುವಾಗ ಬಿಜೆಪಿ ಸೇರಲು ಸಾಧ್ಯವೇ? ಇದೊಂದು ಮೂರ್ಖತನದ ಪ್ರಚಾರ ಎಂದಿದ್ದಾರೆ.ಯಾರೇ ಆಗಲಿ ಒಂದು ಸಿದ್ಧಾಂತಕ್ಕೆ ಬದ್ಧವಾಗಿದ್ದಾಗ ಪದೇ ಪದೇ ಪಕ್ಷ ಬದಲಿಸುವಂತಹ ಸನ್ನಿವೇಶವೇ ಉದ್ಭವಿಸುವುದಿಲ್ಲ. ಅವಕಾಶವಾದಿ ರಾಜಕಾರಣಿಗಳು ಮಾತ್ರ ಅಧಿಕಾರ ಹುಡುಕಿಕೊಂಡು ಹೋಗುತ್ತಾರೆ. ಪ್ರಜಾಪ್ರಭುತ್ವದಲ್ಲಿ ಅಧಿಕಾರ ಜನರಿಂದ ನೇರವಾಗಿ ಸಿಗಬೇಕೇ ಹೊರತು ವಾಮಮಾರ್ಗದ ಮೂಲಕ ಅಧಿಕಾರ ಪಡೆಯಲು ಹಪಹಪಿಸಬಾರದು ಎಂದು ಕೂಡ ವಿವರಿಸಿದ್ದಾರೆ.ಬಾದಾಮಿ ಕ್ಷೇತ್ರದಲ್ಲಿ ರೂ.500 ಕೋಟಿ ವೆಚ್ಚದ ಏತ ನೀರಾವರಿ ಯೋಜನೆ ಅನುಷ್ಠಾನಕ್ಕೆ ಬೇಡಿಕೆ ಇಟ್ಟಿದ್ದೀನಿ. ಯೋಜನೆ ಇನ್ನೂ ಅನುಮೋದನೆಗೊಂಡಿಲ್ಲ, ಆಗಲೇ ಬಿಜೆಪಿಯ ಕೆಲವು ನಾಯಕರು ಬಾದಾಮಿಗೆ ನಾವು ರೂ.650 ಕೋಟಿ ಕೊಟ್ಟಿದ್ದೀವಿ ಅಂತ ಪ್ರಚಾರ ಶುರು ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.ಹೋಳಿ ಹಬ್ಬಕ್ಕೆ ಶುಭಾಶಯರಾಜ್ಯದ ಸಮಸ್ತ ಬಂಧುಗಳಿಗೆ ಹೋಳಿ ಹಬ್ಬದ ಶುಭಾಶಯಗಳು. ಕೊರೋನಾ ವೈರಸ್ ಭೀತಿಯ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಕಾಳಜಿ ಇರಲಿ ಎಂದು ಟ್ವೀಟ್ ಮೂಲಕ ಶುಭಾಶಯ ಸಲ್ಲಿಸುವ ಜೊತೆಗೆ ಎಚ್ಚರಿಕೆಯ ಸಂದೇಶವನ್ನು ರವಾನೆ ಮಾಡಿದ್ದಾರೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 