ಬೆಳಗಾವಿ ಡಿಸಿ ಸೇರಿ ಕೆಲ ಅಧಿಕಾರಿಗಳ ವಿರುದ್ದ ಮಾನವ ಹಕ್ಕುಗಳ ಆಯೋಗಕ್ಕೆ ನಾಡದ್ರೋಹಿ ಎಮ್ ಇಎಸ್ ದೂರು

ಬೆಳಗಾವಿ ಡಿಸಿ ಸೇರಿ ಕೆಲ ಅಧಿಕಾರಿಗಳ ವಿರುದ್ದ ಮಾನವ ಹಕ್ಕುಗಳ ಆಯೋಗಕ್ಕೆ ನಾಡದ್ರೋಹಿ ಎಮ್ ಇಎಸ್ ದೂರು

ಬೆಳಗಾವಿ : ಮಹಾರಾಷ್ಟ್ರ ಸರಕಾರ ಕರ್ನಾಟಕದಲ್ಲಿ ಮರಾಠಿಗರಿಗೆ ಜಾರಿ ಮಾಡಿರುವ ವೈದ್ಯಕೀಯ ಆರೋಗ್ಯ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೇರಿದಂತೆ ಕೆಲ ಅಧಿಕಾರಿಗಳ ವಿರುದ್ದ ನಾಡದ್ತೋಹಿ ಎಮ್ ಇಎಸ್ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದೆ.

  ಮಹಾರಾಷ್ಟ್ರ ಸರಕಾರ ಕರ್ನಾಟಕದ ಹಳ್ಳಿಗಳಲ್ಲಿ ಆರಂಭಿಸಿರುವ ವೈದ್ಯಕೀಯ ಆರೋಗ್ಯ ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿದ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಮಹಾರಾಷ್ಟ್ರದ ವೈದ್ಯಕೀಯ ಸೇವೆಯನ್ನು ಪಡೆದು ರೋಗಿಗಳಿಗೆ ಚಿಕಿತ್ಸೆ ನೀಡಿದ ಬೆಳಗಾವಿಯ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆಯಂತೆ

  ಈ ವೈದ್ಯಕೀಯ ಯೋಜನೆಯಿಂದ ಪ್ರಯೋಜನ ಪಡೆಯುತ್ತಿರುವ ಐದು ಸೇವಾ ಕೇಂದ್ರಗಳಿಗೆ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಈ ರೀತಿ ನೋಟಿಸ್ ನೀಡಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆಯಂತೆ.

   ಈ ಹಿನ್ನೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಮಹಾನಗರ ಪಾಲಿಕೆ ಅಶೋಕ ದುಡಗುಂಟಿ ಬೆಳಗಾವಿ ಪೊಲೀಸ್ ಆಯುಕ್ತ ಸಿದ್ದರಾಮಪ್ಪ ಸೇರಿದಂತೆ ಕೆಲ ಅಧಿಕಾರಿಗಳು ಎಲ್ಲ ಕಡೆಯೂ ಶೇ. 60ರಷ್ಟು ಕನ್ನಡಿಕರಣ ಜಾರಿಗೆ ತರಲು ಯತ್ನಿಸುತ್ತಿದ್ದು, ಮರಾಠಿಗರಿಗೆ ಅನ್ಯಾಯವಾಗುತ್ತಿದೆಯಂತೆ. 

  ಕನ್ನಡಮಯ ವಾಗುತ್ತಿರುವದರಿಂದ ಮರಾಠಿಗರಿಗೆ ಉಸಿರು ಗಟ್ಟಿಸುವಂತಾಗಿದೆಯಂತೆ. ಭಯೋತ್ಪಾದನೆಯ ವಾತಾವರಣ ನಿರ್ಮಾಣ ಮಾಡುತ್ತಿದ್ದಾರಂತೆ ಈ ವಿಷಯ ಇವೆಲ್ಲ ನೋಡಿದರೆ ಹಾಸ್ಯಾಸ್ಪದ ದೂರು ಇದಾಗಿದೆ ಎನ್ನಲಾಗಿದೆ.

     ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಭಾಷಿಕರು ಅಲ್ಪಸಂಖ್ಯಾತರಾಗಿದ್ದು, ಭಾಷಾ ಅಲ್ಪಸಂಖ್ಯಾತರ ಹಕ್ಕುಗಳನ್ನು ರಕ್ಷಿಸುವುದು ಜಿಲ್ಲಾಡಳಿತದ ಕರ್ತವ್ಯ ಆದರೆ ಜಿಲ್ಲಾಡಳಿತ ಉದ್ದೇಶಪೂರ್ವಕವಾಗಿ ಮರಾಠಿ ಭಾಷಿಕರ ಮಾನವ ಹಕ್ಕು ಮತ್ತು ಸಂವಿಧಾನಾತ್ಮಕ ಹಕ್ಕುಗಳನ್ನು ಉಲ್ಲಂಘಿಸುತ್ತಿದೆ, ಆದ್ದರಿಂದ ಈ ಘಟನೆಯನ್ನು ತಡೆಯಲು ದಿ. ಯುವ ಸಮಿತಿಯು ಜಿಲ್ಲಾಧಿಕಾರಿ ಬೆಳಗಾವಿ, ಪೊಲೀಸ್ ಕಮಿಷನರ್ ಬೆಳಗಾವಿ, ಮಹಾನಗರ ಪಾಲಿಕೆ ಆಯುಕ್ತ ಬೆಳಗಾವಿ ಅವರನ್ನು ಸಂಪರ್ಕಿಸಿದೆ ಹಾಗೂ ಸಂಬಂಧಿತ ಮಾನವ ಹಕ್ಕುಗಳನ್ನು ಉಲ್ಲಂಘಿಸುತ್ತಿರುವ ಕರ್ನಾಟಕ ರಾಜ್ಯದ ಮುಖ್ಯ ಆಯುಕ್ತರ ವಿರುದ್ಧವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸಲಾಗಿದೆ. 

  ಅವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಬೆಳಗಾವಿಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮರಾಠಿಯಲ್ಲಿ ಸುತ್ತೋಲೆ ಮತ್ತು ದಾಖಲೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.  ಅಲ್ಲದೆ, ಸಂಬಂಧಿತ ಘಟನೆಗಳ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಯುವ ಸಮಿತಿ ವತಿಯಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಸಮಿತಿಗೆ ಮನವಿ ಸಲ್ಲಿಸಲಾಗಿದೆ.

ಸುದ್ದಿ ಓದಿ