ಶಾಸಕ ಅಶೋಕ ಮನಗೂಳಿ ಹುಟ್ಟುಹಬ್ಬ: ಮಕ್ಕಳಿಗೆ ನೋಟ್‌ಬುಕ್ ವಿತರಣೆ
MLA Ashok Managuli's birthday: Notebooks distributed to children
ಸಿಂದಗಿ 30: ಶಾಸಕ ಅಶೋಕ ಮನಗೂಳಿ ಅವರು ಕಾಂಗ್ರೆಸ್ ಸರಕಾರದ ಯೋಜನೆಗಳನ್ನು ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಮುಟ್ಟಿಸಿ ಜನಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಕಾಂಗ್ರೆಸ್ ಓಬಿಸಿ ರಾಜ್ಯ ಕಾರ್ಯದರ್ಶಿ ಎಂ.ಎ.ಖತೀಬ ಹೇಳಿದರು.
ಪಟ್ಟಣದ ಮುರಿಗೆಮ್ಮ ಸರಕಾರಿ ಪ್ರೌಢಶಾಲೆಯಲ್ಲಿ ಶಾಸಕ ಅಶೋಕ ಮನಗೂಳಿ ಅವರು ಹುಟ್ಟುಹಬ್ಬದ ನಿಮಿತ್ಯ ಭೀಮು ವಾಲಿಕಾರ ಅವರು ಮಕ್ಕಳಿಗೆ ನೋಟ್‌ಬುಕ್ಕ ವಿತರಣೆ ಮಾಡಿ ಮಾತನಾಡಿದರು.
ಕಾಂಗ್ರೆಸ್ ಬಗರ್ ಹುಕುಂ ಸದಸ್ಯ ಭೀಮು ವಾಲಿಕಾರ ಮಾತನಾಡಿ, ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದ ಹಾಗೆ ನಮ್ಮ ಶಾಸಕ ಅಶೋಕ ಮನಗೂಳಿ ಅವರು ಕ್ಷೇತ್ರದ ಜನತೆಗೆ ನೀಡಿದ ವಾಗ್ದಾನದಂತೆ ಪ್ರತಿಯೊಂದು ಹಳ್ಳಿಗಳ ಅಭಿವೃದ್ಧಿಗೆ ಸಹಕಾರಿಯಾಗಿದ್ದಾರೆ ಎಂದರು.
ಕಾಂಗ್ರೆಸ್ ಮುಖಂಡ ಶಿವನಗೌಡ ಬಿರಾದಾರ ಮಾತನಾಡಿ, ದಿ.ಮಾಜಿ ಸಚಿವ ಎಂ.ಸಿ.ಮನಗೂಳಿಯವರ ಕಂಡ ಶಾಶ್ವತ ಯೋಜನೆಗಳನ್ನು ಜಾರಿಗೆ ತಂದು ಜನರ ಮೆಚ್ಚುಗೆ ಗಳಿಸಿದ್ದಾರೆ ಎಂದು ಹೇಳಿದರು.
ಯೋಜನಾ ಪ್ರಾಧಿಕಾರದ ಸದಸ್ಯ ಅಂಬ್ರೀಶ ಚೌಗಲೆ, ಚಂದ್ರು ಕಾಂಬಳೆ, ವಿಜು ತಾಳಿಕೋಟಿ, ರಮೇಶ ನಡುವಿನಕೇರಿ, ನೀಕೀಲ ಬಳ್ಳಾರಿ, ಸಚೀನ ಕುಂಬರ, ಗುರು ಬಳ್ಳಾರಿ, ಅನಂತ ನಿಂಬಾಳಕರ, ವಿಜು ಬೂದಿಹಾಳ, ಅಂಬಿ ಸಾಗರ, ವಿನಾಯಕ, ಸಂಗು ಸೆರಿದಂತೆ ಅನೇಕರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 