ಹೊಲಿಗೆ ಯಂತ್ರಗಳನ್ನು ವಿತರಿಸಿದ ಶಾಸಕ ಡಿ.ಎಮ್.ಐಹೊಳೆ
MLA D.M. Aihole distributed sewing machines
ರಾಯಬಾಗ 20 : ಮಹಿಳೆಯರು ಮನೆಯಲ್ಲಿ ಸ್ವಯಂ ಉದ್ಯೋಗ ಮಾಡುವುದರಿಂದ ಕೌಟುಂಬಿಕ ಆರ್ಥಿಕ ಮಟ್ಟ ಬಲಿಷ್ಠ ಆಗುತ್ತದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು. ಶುಕ್ರವಾರ ಪಟ್ಟಣದ ಶಾಸಕರ ಗೃಹ ಕಚೇರಿಯಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ರಾಯಬಾಗ ಮತಕ್ಷೇತ್ರದ 19 ಫಲಾನುಭವಿಗಳಿಗೆ ಮಂಜೂರಾದ ಹೊಲಿಗೆ ಯಂತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರ ನೀಡಿರುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕು.
ಹೊಲಿಗೆ ಯಂತ್ರಗಳನ್ನು ಬೇರೆಯವರಿಗೆ ನೀಡದೇ ತಾವೇ ಅವುಗಳನ್ನು ಉಪಯೋಗಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಹೇಳಿದರು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧಿಕಾರಿ ರಾಘವೇಂದ್ರ ಬಾಗೇವಾಡಿ, ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೆಮಲಾಪೂರೆ, ಅರುಣ ಐಹೊಳೆ, ಮಹಾದೇವ ಬೊರಗಾಂವೆ, ಸದಾನಂದ ಹಳಿಂಗಳಿ, ಗೋಪಾಲ ಕೊಚೆರಿ, ಮಹೇಶ ಕರಮಡಿ, ಭಾರತಿ ಲೋಹಾರ, ಮಲ್ಲಪ್ಪ ಖಿಲಾರೆ, ಅನೀಲ ಕೊರವಿ ಹಾಗೂ ಫಲಾನುಭವಿಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 