ಸಿ.ಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಡಾ.ಚಂದ್ರು ಲಮಾಣಿ
MLA Dr. Chandru Lamani performed Bhoomi Puja for CC road construction
ಲೋಕದರ್ಶನ ವರದಿ
ಲಕ್ಷ್ಮೇಶ್ವರ 15: ತಾಲೂಕಿನ ಕುಂದ್ರಳ್ಳಿ ಗ್ರಾಮದಿಂದ ಬಟ್ಟೂರು ಲಕ್ಷ್ಮೇಶ್ವರ ಸಂಪರ್ಕಿಸುವ ಮೇನ್ ರಸ್ತೆ ಸಿ.ಸಿ ರಸ್ತೆ ನಿರ್ಮಾಣಕ್ಕೆ ಸುಮಾರು 50 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಶಾಸಕ ಡಾ ಚಂದ್ರು ಲಮಾಣಿ ಅವರು ಹಾಗೂ ಬಟ್ಟೂರು ಗ್ರಾಮ ಪಂಚಾಯತಿಯ ಅಧ್ಯಕ್ಷನಿಯಾದ ನೀಲವ್ವ ಮಂಜಪ್ಪ ಕಳಸದ ಅವರು ಕುಂದ್ರಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೊಂದಿಗೆ ಭೂಮಿ ಪೂಜೆ ನೆರವೇರಿಸಿದರು ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಡಾ ಚಂದ್ರು ಲಮಾಣಿ ಅವರು ಬಹು ದಿನಗಳಿಂದ ಹಾಗೆ ಉಳಿದಿದ್ದ ಈ ರಸ್ತೆಯನ್ನು ಇಂದು ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರೆವೇರಿಸಲಾಗಿದೆ.
ಗುತ್ತಿಗೆದಾರರು ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ ಮಾಡಬೇಕು ಎಂದರು ಬಟ್ಟೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷನಿಯಾದ ನೀಲವ್ವ ಮಂಜಪ್ಪ ಕಳಸದ ಅವರು ಮಾತನಾಡಿ ಬಹುದಿನಗಳಿಂದ ಈ ರಸ್ತೆ ಹಾಗೆ ಉಳಿದಿತ್ತು ಇದರಿಂದ ಗ್ರಾಮಸ್ಥರು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದರು ಇದನ್ನು ಮನಗಂಡ ಶಾಸಕರು ಅನುದಾನ ತರುವ ಮೂಲಕ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ ನೀಡಿದ್ದಾರೆ ಎಲ್ಲ ಗ್ರಾಮಸ್ಥರು ರಸ್ತೆ ನಿರ್ಮಾಣಕ್ಕೆ ಸಹಕಾರ ನೀಡಬೇಕು ಎಂದರು.
ಈ ಸಮಯದಲ್ಲಿ ಗ್ರಾಮದಲ್ಲಿ ಕುಂದ್ರಳ್ಳಿ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರಾದ ಮಲ್ಲವ್ವ ತಳವಾರ ಸದಸ್ಯರಾದ ರುದ್ರಯ್ಯ ಶೀಲವಂತಮಠ ಮಂಜುನಾಥ ಗೌರಿ ಜಗದೀಶಗೌಡ್ರು ಪಾಟೀಲ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ ಲಮಾಣಿ ಕಲ್ಲಪ್ಪ ಹಡಪದ ಪರಮೇಶಪ್ಪ ಹತ್ತಾಳ ಸಂತೋಷ ಲಮಾಣಿ ಜಾನು ಲಮಾಣಿ ಗಂಗಾಧರ ಮೆಣಸಿನಕಾಯಿ ಗೀರೀಶ್ ಚೌರೆಡ್ಡಿ ಬಸವರಾಜ ಚಕ್ರಸಾಲಿ ಸೇರಿದಂತೆ ಗ್ರಾಮದ ಗುರು ಹಿರಿಯರು ಮುಖಂಡರು ಇದ್ದರು.
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು
ವಾರಾಣಸಿಯ 27 ವರ್ಷದ ಯುವಕನಿಗೆ ಕೋವಿಡ್-19 ದೃಢ; ಬಿಎಚ್ಯು ಆಸ್ಪತ್ರೆಗೆ ದಾಖಲಾತಿ
ಕ್ಷುಲ್ಲಕ ಕಾರಣಕ್ಕೆ ಪಿಕಾಸಿಯಿಂದ ವ್ಯಕ್ತಿಯ ಹತ್ಯೆ : ಖಾನಾಪೂರ ತಾಲೂಕಿನಲ್ಲಿ ಘಟನೆ 