ವಿಜಯಪುರ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಚಾಲನೆ

ಬೀದರ್  25  :  ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಹೊಕ್ರಾಣಾ (ಕೆ) ಹಾಗೂ ಹೊಕ್ರಾಣಾ (ಬಿ) ಗ್ರಾಮಗಳ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ವಿವಿಧ ಮೂಲಭೂತ ಸೌಕರ್ಯಗಳ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.ರಾಜಗೀರಾ ಗ್ರಾಮದಿಂದ ಹೊಕ್ರಾಣಾ (ಕೆ) ಹಾಗೂ ಹೊಕ್ರಾಣಾ (ಬಿ) ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸುಮಾರು 10 ಕೋಟಿ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದ್ದು, ಈ ರಸ್ತೆ ನಿರ್ಮಾಣದಿಂದ ಎರಡು ಗ್ರಾಮಗಳ ಜನರಿಗೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಹಲವು ವರ್ಷಗಳ ಬೇಡಿಕೆಯಾಗಿದ್ದ ಈ ರಸ್ತೆ ಪೂರ್ಣಗೊಂಡಿರುವುದರಿಂದ ರೈತರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಅನುಕೂಲ ಪಡೆಯುತ್ತಿದ್ದಾರೆ.ಇದೀಗ ಹೊಕ್ರಾಣಾ (ಕೆ) ಗ್ರಾಮದಲ್ಲಿ ?35 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ, ಬಸವೇಶ್ವರ ದೇವಸ್ಥಾನಕ್ಕೆ ?5 ಲಕ್ಷ ವೆಚ್ಚದ ಭವನ ನಿರ್ಮಾಣ ಕಾಮಗಾರಿ ಹಾಗೂ ಹೊಕ್ರಾಣಾ (ಬಿ) ಗ್ರಾಮದ ಭೀಮಾಶಂಕರ ದೇವಸ್ಥಾನದ ಬಳಿ ?5 ಲಕ್ಷ ವೆಚ್ಚದ ಭವನ ನಿರ್ಮಾಣ ಕಾಮಗಾರಿಗೆ ಶಾಸಕರು ಚಾಲನೆ ನೀಡಿದರು. 


ಸುದ್ದಿ ಓದಿ