ಕಳಪೆ ಕಾಮಗಾರಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಶಾಸಕ ದುರ್ಯೋಧನ ಐಹೊಳೆ ಒತ್ತಾಯ
MLA Duryodhan Aihole urges strict action against shoddy work
ರಾಯಬಾಗ 11 : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಿಂದ ರಾಯಬಾಗ ಮತಕ್ಷೇತ್ರದಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ನಿರ್ಮಿಸಿರುವ ಬಹುತೇಕ ಎಲ್ಲ ಕಾಮಗಾರಿಗಳು ಕಳಪೆ ಗುಣಮಟ್ಟದ್ದಾಗಿದ್ದು, ಕಳಪೆ ಕಾಮಗಾರಿ ಮಾಡಿರುವ ಹಾಗೂ ಇನ್ನು ಕಾಮಗಾರಿ ಪ್ರಾರಂಭಿಸದೇ ಇರುವ ಗುತ್ತಿಗೆದಾರರ ಮತ್ತು ಅಧಿಕಾರಗಳ ವಿರುದ್ಧ ಇಲಾಖೆ ಸಚಿವರು ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ರಾಯಬಾಗ ಶಾಸಕ ದುರ್ಯೋಧನ ಐಹೊಳೆಯವರು ಸದನದಲ್ಲಿ ಒತ್ತಾಯಿಸಿದರು. ರಾಯಬಾಗ ಮತಕ್ಷೇತ್ರದಲ್ಲಿ ಕಾಮಗಾರಿ ಮುಗಿದು 3 ವರ್ಷ ಕಳೆದರೂ ಪ್ರತಿ ಮನೆಗೆ ನೀರು ಪೂರೈಸಲು ಸಾಧ್ಯವಾಗಿಲ್ಲ.
ಪ್ರತಿ ಗ್ರಾಮಗಳಲ್ಲಿ ಮನೆ ಮನೆಗಳಿಗೆ ಜೋಡಿಸಿರುವ ನಳ, ಪೈಪುಗಳು ಕಳಪೆ ಕಾಮಗಾರಿಯಿಂದ ಕಿತ್ತು ಹೋಗಿದ್ದು, ಈಗ ಬೇಸಿಗೆ ಪ್ರಾರಂಭವಾಗಿರುವುದರಿಂದ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ತಲೆದೂರಿದೆ ಎಂದರು. ಶಾಸಕರ ಪ್ರಶ್ನೆಗೆ ಉತ್ತರಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಅವರು, ಜೆ.ಜೆ.ಎಮ್ ಯೋಜನೆಯಡಿ ಕೈಗೊಂಡಿರುವ ಕಳಪೆ ಕಾಮಗಾರಿ ಲೋಪಗಳ ಬಗ್ಗೆ ತನಿಖೆ ನಡೆಸಲು ನಾಳೆಯೆ ತಂಡವನ್ನು ಕಳುಹಿಸಿ ಕೊಡುವುದಾಗಿ ಹೇಳಿದರು.ಕುಡಿಯುವ ನೀರಿನ ಅಭಾವಕ್ಕೆ ಮುಂದಿನ ವಾರ ಟಾಸ್ಕ್ ಫೋರ್ಸ್ ರಚನೆ ಮಾಡುವುದಾಗಿ ತಿಳಿಸಿದ ಸಚಿವರು, ಕಳೆದ ವರ್ಷ ಟಾಸ್ಕ್ ಫೋರ್ಸ್ ಗಾಗಿ ನೀಡಬೇಕಿದ್ದ ಬಾಕಿ ಹಣವನ್ನು ಪರೀಶೀಲನೆ ನಡೆಸಿ ಹಣ ನೀಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಹೇಳಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 