ಮೊಬೈಲ್ ಫೀವರ್ ಕ್ಲಿನಿಕ್ ಬಸ್‌ಗೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಚಾಲನೆ
ತುಮಕೂರು, ಮೇ 18,ಜಿಲ್ಲೆಯಲ್ಲಿ ಕೋವಿಡ್-19 ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ಸಾರ್ವಜನಿಕರ ಉಪಯೋಗಕ್ಕಾಗಿ ತುಮಕೂರು ಕೆಎಸ್ಸಾರ್ಟಿಸಿ ನಿರ್ಮಿಸಿರುವ ಮೊಬೈಲ್ ಫೀವರ್ ಕ್ಲಿನಿಕ್ ಬಸ್‌ಗೆ ಶಾಸಕ ಜಿ.ಬಿ ಜ್ಯೋತಿಗಣೇಶ್ ಚಾಲನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಚಾಲನೆ ನೀಡಿ ಮಾತನಾಡಿದ ಶಾಸಕರು, ಜಿಲ್ಲಾಡಳಿತ, ಆರೋಗ್ಯ ಇಲಾಖೆ ಹಾಗೂ ಕರಾರಸಾ ನಿಗಮ ವತಿಯಿಂದ ಕೋವಿಡ್-19 ತಪಾಸಣೆ ಮಾಡಿಸಿಕೊಳ್ಳಲು ಬಸ್ಸನ್ನು ಮಾರ್ಪಾಡು ಮಾಡಿ, ಮೋಬೈಲ್ ಫೀವರ್ ಕ್ಲಿನಿಕ್ ತೆರೆಯಲಾಗಿದೆ. ನಗರ ಮತ್ತು ಗ್ರಾಮೀಣ ಭಾಗದಿಂದ ತಪಾಸಣೆಗಾಗಿ ಆಸ್ಪತ್ರೆಗಳಿಗೆ ಬರುವ ರೋಗಿಗಳ ಅನವಶ್ಯಕ ಓಡಾಟವನ್ನು ತಪ್ಪಿಸಬಹುದು. ಅವಶ್ಯಕತೆ ಇರುವ ಕಡೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್‌ನಲ್ಲಿಯೇ ಗಂಟಲು ದ್ರವ ಮಾದರಿಯನ್ನು ತೆಗೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಕೆ ರಾಕೇಶ್‌ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಅವಶ್ಯಕತೆ ಇರುವ ಕಡೆ ರ‍್ಯಾಂಡಮ್ ಆಗಿ ಪರೀಕ್ಷೆ ಮಾಡಲು ಜನರ ಗಂಟಲು ದ್ರವ ಮಾದರಿನ್ನು ಪಡೆಯಬಹುದು. ಅಲ್ಲದೇ ಸಾರ್ವಜನಿಕರಿಗೆ ವೈದ್ಯಕೀಯ ಪರೀಕ್ಷೆಯನ್ನು ಮಾಡಲು ಸಹ ಇದು ಉಪಯೋಗವಾಗುತ್ತದೆ. ಸಾರ್ವಜನಿಕರು ಇದರ ಉಪಯೋಗ ಪಡೆದು ಕೊಳ್ಳಬೇಕು ಎಂದು ಅವರು ಮನವಿ ಮಾಡಿದರು.
ನಂತರ ಡಿ.ಎಚ್.ಓ ಡಾ. ನಾಗೇಂದ್ರಪ್ಪ ಮಾತನಾಡಿ, ಜನಸಂದಣಿ ಹೆಚ್ಚಿರುವ ಸ್ಥಳಕ್ಕೆ ಮೊಬೈಲ್ ಫೀವರ್ ಕ್ಲಿನಿಕ್ ಬಸ್ ತೆಗೆದುಕೊಂಡು ಹೋಗಿ ಅವಶ್ಯಕವಿರುವವರ ಗಂಟಲು ದ್ರಾವವನ್ನು ಪರೀಕ್ಷೆ ಮಾಡಲು ವ್ಯಸ್ಥೆಯನ್ನು ಮಾಡಿದ್ದು, ಆರೋಗ್ಯ ಇಲಾಖೆ ವತಿಯಿಂದ ಈಗಾಗಲೇ ಬಸ್ ಕಾರ್ಯನಿರ್ವಹಿಸುತ್ತಿತ್ತು. ಅದರ ಜೊತೆಗೆ ಕೆಎಸ್ಸಾರ್ಟಿಸಿ ವತಿಯಿಂದ ಒಂದು ಬಸ್ ಕಾರ್ಯನಿರ್ವಹಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ವೀರಭದ್ರಯ್ಯ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 